ಬಿಗ್ ನ್ಯೂಸ್
Big Breaking :Big Breaking : ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಹಿಜಾಬ್ ತೀರ್ಪು ಪ್ರಕಟ
ಬೆಂಗಳೂರು : ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ಮಾ.15ರಂದು ಪ್ರಕಟಿಸಿದೆ. ಹಿಜಾಬ್ ಗೆ ಅವಕಾಶ ಕೋರಿ ಸಲ್ಲಿಸಿದ ರಿಟ್ ಅರ್ಜಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಖಾಜಿ ಜೈಬುನ್ನೀಸಾ ಮೊಹಿಯಿದ್ದೀನ್ ಅವರನ್ನು ಒಳಗೊಂಡ ಪೂರ್ಣ ಪೀಠ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಪ್ರಕಟಿಸಿದೆ
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ತಲೆಗೆ ಶಿರವಸ್ತ್ರ ಧರಿಸಲು ಅವಕಾಶ ನೀಡದಿರುವುದನ್ನು ಪ್ರಶ್ನಿಸಿ ಉಡುಪಿಯ ವಿದ್ಯಾರ್ಥಿಗಳ ಗುಂಪೊಂದು ನ್ಯಾಯಾಲಯದ ಮೊರೆ ಹೋಗಿತ್ತು. ಈ ಕುರಿತಂತೆ 12 ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ನ ಪೂರ್ಣ ಪೀಠ ಫೆಬ್ರವರಿ 25ರಂದು ಶುಕ್ರವಾರ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಹಿಜಾಬ್ ಬಗ್ಗೆ ಸರಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ, ಹೈಕೋರ್ಟ್ನ ತ್ರಿಸದಸ್ಯ ಪೀಠ ತೀರ್ಪಿನಲ್ಲಿ ಅಭಿಪ್ರಾಯ ಪಟ್ಟಿದೆ ‘ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಹೈಕೋರ್ಟ್ನ ಪೂರ್ಣಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಅಗತ್ಯ ಎಂಬ ಮುಸ್ಲಿಂ ವಿದ್ಯಾರ್ಥಿನಿಯರ ವಾದವನ್ನು ತಿರಸ್ಕರಿಸಿದೆ.
ಏನಿದು ವಿವಾದ
ಉಡುಪಿ ಸರಕಾರಿ ಬಾಲಕಿಯರ ಪ. ಪೂ. ಕಾಲೇಜಿನ ಆರು ವಿದ್ಯಾರ್ಥಿನಿಯರು ಡಿ. 28ರಿಂದ ತರಗತಿಯಲ್ಲಿಹಿಜಾಬ್ ಧರಿಸಿ ಪಾಠ ಕೇಳಲು ಅವಕಾಶ ನೀಡಬೇಕು ಎಂದು ಅಗ್ರಹಿಸಿ ಮೆಟ್ಟಿಲುಗಳಲ್ಲೇ ಕೂತು ತಮ್ಮ ಪ್ರತಿಭಟನೆ ವ್ಯಕ್ತಪಡಿಸುವ ಮೂಲಕ ಈ ವಿವಾದ ಆರಂಭವಾಗಿತ್ತು . ಬಳಿಕ ಇದು ಕುಂದಾಪುರದ ಸರಕಾರಿ ಕಾಲೇಜಿಗೂ ಹಬ್ಬಿತ್ತು. ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ಧರಿಸುವುದನ್ನು ವಿರೋಧಿಸಿ ಕೆಲ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬಂದು ಠಕ್ಕರ್ ನೀಡಿದ್ದರು . ಈ ಮೂಲಕ ವಿವಾದವೂ ಕೋಮು ಬಣ್ಣವನ್ನು ಪಡೆಯಿತು.
ಈ ವರ್ಷದ ಜನವರಿ ಕೊನೆ ವಾರ ಹಾಗೂ ಫೆಬ್ರವರಿ ತಿಂಗಳಿನಲ್ಲಿ ಈ ಹಿಜಾಬ್ ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಹಬ್ಬಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಫೆ 5 ರಂದು ರಾಜ್ಯ ಸರಕಾರ ಯುನಿಫಾರ್ಮ್ ಕಡ್ಡಾಯಗೊಳಿಸಿ ಆದೇಶ ಕೂಡ ನೀಡಿತ್ತು . ಏತನ್ಮಧ್ಯೆ ವಿವಾದ ಆರಂಭವಾದ ಉಡುಪಿಯ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತಮಗೆ ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಹೈಕೋರ್ಟು ಮೊರೆ ಹೋದರು . ಕುಂದಾಪುರ ಹಾಗೂ ಇತರ ಕಾಲೇಜಿನ ವಿದ್ಯಾರ್ಥಿನಿಯರು ಕೂಡ ಇದೇ ಮನವಿಯನ್ನು ಮಂಡಿಸಿ ಕೋರ್ಟು ಮೆಟ್ಟೀಲೆರಿದರು.
ಮೊದಲು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಕೆಲ ದಿನ ವಿಚಾರಣೆ ನಡೆಸಿತ್ತಾದರೂ, ಧಾರ್ಮಿಕ ಸೂಕ್ಷ್ಮ ಪ್ರಕರಣವಾದ್ದರಿಂದ ವಿಸ್ತೃತ ಪೀಠ ವಿಚಾರಣೆ ನಡೆಸುವ ಅಗತ್ಯವಿದೆಯೆಂದು ಅಭಿಪ್ರಾಯಪಟ್ಟಿತ್ತು. ಅದರಂತೆ ಮೂವರು ನ್ಯಾಯಮೂರ್ತಿಗಳ ಪೂರ್ಣಪೀಠ ರಚಿಸಲಾಗಿತ್ತು. ಪೂರ್ಣಪೀಠದ ಮುಂದೆ ಸುಪ್ರೀಂಕೋರ್ಟ್ (Supreme Court) ಮತ್ತು ಹೈಕೋರ್ಟ್ನ ಘಟಾನುಘಟಿ ಹಿರಿಯ ವಕೀಲರು ವಾದ- ಪ್ರತಿವಾದ ಮಂಡಿಸಿದ್ದರು. ಹಲವು ಸಾಂವಿಧಾನಿಕ, ಧಾರ್ಮಿಕ ಹಾಗೂ ಸೂಕ್ಷ್ಮ ವಿಚಾರಗಳನ್ನು ಒಳಗೊಂಡಿರುವ ಈ ಪ್ರಕರಣದ ತೀರ್ಪು ಮಾರ್ಚ್ 15ರಂದು ಅಂದರೆ ಇಂದು ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ
ದ.ಕ ಉಡುಪಿಯಲ್ಲಿ ನಿಷೇಧಾಜ್ಞೆ
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಮಾ.15ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹಾಗೂ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀರ್ಪು ಬಳಿಕ ಯಾವುದೇ ಮೆರವಣಿಗೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀರ್ಪು ಪ್ರಕಟವಾದ ಬಳಿಕ ಪರ, ವಿರೋಧ ಮೆರವಣಿಗೆ ನಡೆಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಹಿಜಾಬ್ ಟೈಮ್ ಲೈನ್ :
ಜನವರಿ : ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ಹಿಜಾಬ್ ವಿವಾದ ಆರಂಭವಾಯಿತು. ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ 6 ವಿದ್ಯಾರ್ಥಿಗಳು ಬಂದಿದ್ದರು. ಇದಕ್ಕೆ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿತ್ತು. ಹಿಜಾಬ್ ಧರಿಸದಂತೆ ಸೂಚನೆ ನೀಡಿತ್ತು. ಇದಾದ ಬಳಿಕ ಈ ವಿದ್ಯಾರ್ಥಿಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದ ಮೂಲಕ ತಮಗೆ ಹಿಜಾಬ್ ಧರಿಸಲು ನಿರ್ಬಂಧ ಇರುವ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೇ ಕಾಲೇಜು ಮುಂಭಾಗ ಈ ಆರು ವಿದ್ಯಾರ್ಥಿಗಳು ಪ್ರತಿಭಟನೆಗೆ ನಡೆಸಿದ್ದರು. ಇದು ತೀವ್ರ ವಿವಾದದ ಸ್ವರೂಪ ಪಡೆದಿತ್ತು.
ಫೆಬ್ರವರಿ 7: ಉಡುಪಿಯ ಸರಕಾರಿ ಪಿಯು ಕಾಲೇಜನಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿತ್ತಾದರೂ, ಅವರನ್ನು ಪ್ರತ್ಯೇಕ ತರಗತಿ ಕೊಠಡಿಗಳಲ್ಲಿ ಕೂರಿಸಲಾಗಿತ್ತು. ಇದರ ಬೆನ್ನಲ್ಲೇ ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಕೆಲ ಜಿಲ್ಲೆಗಳಲ್ಲಿ ಕೇಸರಿ ಮತ್ತು ನೀಲಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಲು ಆರಂಭಿಸಿದರು. ಅವರು ಹಿಜಾಬ್ ಧರಿಸಿ ಬರುವುದಾದರೆ ನಾವು ಕೇಸರಿ ಶಾಲು ಧರಿಸು ಬರುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದರು. ಇದು ಹಿಜಾಬ್, ಕೇಸರಿ ಶಾಲು, ನೀಲಿ ಶಾಲುಗಳು ಧರಿಸಿದ ವಿದ್ಯಾರ್ಥಿಗಳ ನಡುವಿನ ಮಾತಿನ ಚಕಮಕಿಗೆ ಕಾರಣವಾಗಿತ್ತು. ಹಲವೆಡೆ ಪ್ರತಿಭಟನೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿತ್ತು.
ಫೆಬ್ರವರಿ 7: ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಸಿಎಂ ಬೊಮ್ಮಾಯಿ.
ಫೆಬ್ರುವರಿ 8: ಹಿಜಾಬ್ ಸಂಬಂಧ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್. ವಿಚಾರಣೆ ವೇಳೆ ನ್ಯಾಯಾಲಯವು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿತ್ತು. “ಸಂವಿಧಾನದ ಆಧಾರದ ಮೇಲೆ ಮಾತ್ರ ಈ ಪ್ರಕರಣವನ್ನು ವಿಚಾರಣೆ ನಡೆಸಲಿದೆ” ಎಂದ ಕೋರ್ಟ್ “ಭಾವನೆಗಳಿಂದ ಅಲ್ಲ” ಎಂದು ಹೇಳಿತ್ತು.
ಫೆಬ್ರವರಿ 8: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಸಂಬಂಧ ಗಲಭೆ, ಪ್ರತಿಭಟನೆ ಹಿನ್ನೆಲೆಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದರು.
ಫೆಬ್ರವರಿ 9: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಹಿಜಾಬ್ ವಿವಾದವನ್ನು ವಿಚಾರಣೆ ನಡೆಸಲು ಪೂರ್ಣ ಪ್ರಮಾಣದ ಪೀಠವನ್ನು ರಚಿಸಿದರು. ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರೊಳಗೊಂಡ ಪೀಠ ವಿಚಾರಣೆ ಮುಂದುವರೆಸಿತು. ವಿಸ್ತೃತ ಪೀಠದಲ್ಲಿ ವಿಚಾರಣೆ ಆರಂಭವಾಯಿತು.
ಫೆಬ್ರವರಿ 10: ಹಿಜಾಬ್ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟಿನಿಂದ ತುರ್ತಾಗಿ ಸುಪ್ರೀಂ ಕೋರ್ಟ್ಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿತು. ಮೊದಲು ಹೈಕೋರ್ಟ್ ತಿರ್ಮಾನಿಸಲಿ ಎಂದು ಅರ್ಜಿಯನ್ನು ತಳ್ಳಿ ಹಾಕಿತ್ತು.
ಫೆಬ್ರವರಿ 10: ಹಿಜಾಬ್ ನಿರ್ಬಂಧಿಸಿದ ಬಳಿಕ ರಾಜ್ಯದಲ್ಲಿ ಹಲವೆಡೆ ಪ್ರತಿಭಟನೆ, ಗಲಾಟೆ ನಡೆದಿತ್ತು. ಶಾಲಾ-ಕಾಲೇಜುಗಳ ವಾತಾವರಣ ಹದಗೆಟ್ಟಿತ್ತು. ಈ ಹಿನ್ನೆಲೆ ಹೈಕೋರ್ಟ್ ಫೆ.10ರಂದು ಮಧ್ಯಂತರ ಆದೇಶ ನೀಡಿ, ಅರ್ಜಿಗಳನ್ನು ಇತ್ಯರ್ಥಪಡಿಸುವವರೆಗೂ ಸಮವಸ್ತ್ರ ಸಂಹಿತೆ ಜಾರಿ ಮಾಡಿರುವ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್, ಕೇಸರಿ ಶಾಲು ಸೇರಿ ಯಾವುದೇ ಧಾರ್ಮಿಕ ಸಂಕೇತ ಹೊಂದಿರುವ ಉಡುಪು ಧರಿಸಿ ಹೋಗಬಾರದು ಎಂದು ಸ್ಪಷ್ಟಪಡಿಸಿತ್ತು.
ಫೆಬ್ರವರಿ 14: ಕರ್ನಾಟಕದಲ್ಲಿ ಮತ್ತೆ ಶಾಲೆಗಳು ಎಂದಿನಂತೆ ತೆರೆದವು. ಹೈಕೋರ್ಟ್ ಆದೇಶ ಪಾಲಿಸಲು ಶಾಲೆಗಳು ಮುಂದಾದವು. ಈ ಹಿನ್ನೆಲೆ ಶಾಲೆ ಆವರಣ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಹಿಜಾಬ್ ಮತ್ತು ಬುರ್ಖಾವನ್ನು ತೆಗೆಯಲು ಆಡಳಿತ ಮಂಡಳಿ ಸೂಚನೆ ನೀಡಿದ್ದವು. ಇದು ಅನೇಕ ಕಡೆ ವಿವಾದಕ್ಕೂ ಎಡೆ ಮಾಡಿಕೊಟ್ಟಿದ್ದವು. ಅನೇಕ ಕಡೆ ಮಕ್ಕಳು ಶಾಲೆಗೆ ತೆರಳಲ್ಲಿ, ಕೆಲವೆಡೆ ಮಕ್ಕಳನ್ನು ಪೋಷಕರು ವಾಪಸ್ ಕರೆದುಕೊಂಡು ಹೋಗುವ ದೃಶ್ಯ ಕಂಡುಬಂತು.
ಫೆಬ್ರವರಿ 16: ಕೆಲವು ದಿನಗಳ ಹಿಂದೆ ಮುಚ್ಚಲಾಗಿದ್ದ ಕಾಲೇಜುಗಳು ಮತ್ತೆ ಆರಂಭವಾದವು. ಹಿಜಾಬ್ ತೆಗೆದು ಪ್ರವೇಶಿಸುವಂತೆ ಕಾಲೇಜು ಆಡಳಿತ ಮಂಡಳಿ ಖಡಕ್ ಆದೇಶ ನೀಡಿತ್ತು. ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸುವಂತೆ ಮನವಿ ಮಾಡಿತ್ತು. ಮತ್ತೆ ಗೊಂದಲ್ ಮುಂದುವರೆದಿತ್ತು. ನಿರ್ಬಂಧ ಹಿನ್ನೆಲೆ ಅನೇಕ ವಿದ್ಯಾರ್ಥಿಗಳು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು. ಅನೇಕರು ಕಾಲೇಜಿಗೆ ಬಂದಿರಲಿಲ್ಲ.
ಫೆಬ್ರವರಿ 25: ಈ ಮಧ್ಯೆ ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆ ಎಂಬ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಕೆಲವು ಮುಸ್ಲಿಂ ಹುಡುಗಿಯರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ್ದ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
ರಾಜ್ಯ ಮಾತ್ರವಲ್ಲದೇಶದಲ್ಲೂಸಂಚಲನ ಮೂಡಿಸಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟು ಮಾ. 15 ಬೆಳಗ್ಗೆ 10.30ಕ್ಕೆ ಅಂತಿಮ ತೀರ್ಪು ನೀಡಲಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್, ಎಸ್ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
-
ಅಪರಾಧ16 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ22 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ21 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ16 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ21 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಬಿಗ್ ನ್ಯೂಸ್15 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸ್ಥಳೀಯ21 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ22 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















