Uncategorized
Ashok Rai-ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ನೂತನ ಶಾಲಾ ಕೊಠಡಿಗೆ ಶಿಲಾನ್ಯಾಸ; ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಕೆಪಿಎಸ್ ಸ್ಕೂಲ್ಗೆ ಶಿಫಾರಸ್ಸು : ಶಾಸಕ ಅಶೋಕ್ ರೈ
ಕರ್ನಾಟಕದ ಗಡಿಗ್ರಾಮದ ನೆಟ್ಟಣಿಗೆ ಮುಡ್ನೂರಿನಲ್ಲಿ ಕೆಪಿಎಸ್ ಮಾದರಿ ಸ್ಕೂಲ್ಗೆ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳು ಎಲ್ಕೆಜಿಯಿಂದ ಪಿಯುಸಿ ತನಕ ಒಂದೇ ಕಡೆ ವಿದ್ಯಾಬ್ಯಾಸ ಮಾಡುವ ಅವಕಾಶ ಒದಗಿಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಪುತ್ತೂರು: ಕರ್ನಾಟಕದ ಗಡಿಗ್ರಾಮದ ನೆಟ್ಟಣಿಗೆ ಮುಡ್ನೂರಿನಲ್ಲಿ ಕೆಪಿಎಸ್ ಮಾದರಿ ಸ್ಕೂಲ್ಗೆ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳು ಎಲ್ಕೆಜಿಯಿಂದ ಪಿಯುಸಿ ತನಕ ಒಂದೇ ಕಡೆ ವಿದ್ಯಾಬ್ಯಾಸ ಮಾಡುವ ಅವಕಾಶ ಒದಗಿಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸುಮಾರು 30 ಲಕ್ಷ ರೂ ಅನುದಾನ ಸಿಎಸ್ಆರ್ ಫಂಡ್ನಿಂದ ಬಿಡುಗಡೆಯಾಗಿದೆ. ಹೊಸ ತರಗತಿ ಕಟ್ಟಡ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಈ ಭಾಹಗದ ವಿದ್ಯಾರ್ಥಿಗಳು ಪಿಯುಸಿ ವ್ಯಾಸಂಗಕ್ಕಾಗಿ 20 ಕಿ ಮೀ ದೂರದಲ್ಲಿರುವ ಕಾಲೇಜಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ಈ ಕಾರಣಕ್ಕಾಗಿ ಈ ಭಾಗಕ್ಕೆ ಕೆಪಿಎಸ್ ಸ್ಕೂಲ್ ಅಗತ್ಯವಾಗಿದೆ. ಎಲ್ಕೆಜಿಯಿಂದ ಪಿಯುಸಿ ತನಕ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯಲಿದೆ ಎಂದು ಹೇಳಿದರು. ನೆಟ್ಟಣಿಗೆ ಮುಡ್ನೂರು ಗ್ರಾಮಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡುವ ಮೂಲಕ ಗಡಿಗ್ರಾಮವನ್ನು ಇನ್ನಷ್ಟು ಅಭಿವೃದ್ದಿಪಡಿಸಲಾಗುವುದು ಎಂದು ಹೇಳಿದರು.
ನಮ್ಮ ಬೇಡಿಕೆಗೆ ಈ ಬಾರಿ ಮನ್ನನೆ ಸಿಕ್ಕಿದೆ: ಶ್ರೀರಾಂ ಪಕ್ಕಳ
ಗಡಿಗ್ರಾಮವಾದ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಸೌಕರ್ಯ ಮತ್ತು ಸೌಲಭ್ಯಗಳ ಕೊರತೆ ಇತ್ತು. ಅನೇಕ ವರ್ಷಗಳಿಂದ ನಾವು ಮನವಿ ಮಾಡುತ್ತಿದ್ದರೂ ಬೇಡಿಕೆ ಈಡೇರಿರಲಿಲ್ಲ, ಈ ಬಾರಿ ಶಾಸಕ ಅಶೋಕ್ ರೈ ಅವರ ಮೂಲಕ ಬೇಡಿಕೆ ಈಡೇರಿದೆ ಎಂದು ಶಾಲಾ ಕಾರ್ಯಾಧ್ಯಕ್ಷರಾದ ಶ್ರೀರಾಂ ಪಕ್ಕಳ ಹೇಳಿದರು. ಇಲ್ಲಿನ ವಿದ್ಯಾರ್ಥಿಗಳ ಕಲಿಕೆಗೆ ಕೆಪಿಎಸ್ ಸ್ಕೂಲ್ಗೆ ಶಾಸಕರು ಶಿಫಾರಸ್ಸು ಮಾಡಿರುವುದಕ್ಕೆ ಗ್ರಾಮಸ್ಥರ ಪರವಾಗಿ ಅಭಿನಂದನೆ ಸಲ್ಲಿಸಿದರು. ಬಡವರ ಮಕ್ಕಳೂ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಈ ಭಾಗದಲ್ಲಿ ಕೆಪಿಎಸ್ ಸ್ಕೂಲ್ ಆರಂಭವಾಗಬೇಕು ಎಂಬುದು ಗ್ರಾಮಸ್ಥರ ಬಹಳ ವರ್ಷದ ಕನಸಾಗಿತ್ತು ಅದು ನನಸಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ರಮೇಶ್ ರೈ ಸಾಂತ್ಯ, ಕುಸುಮಾ ಕರ್ನೂರು ಗುತ್ತು, ಲಲಿತಾ ಮೇನಾಲ, ಇಂದಿರಾ, ಇಬ್ರಾಹಿಂ, ಪ್ರಫುಲ್ಲ ರೈ, ವಲಯ ಕಾಂಗ್ರೆಸ್ ಅಧ್ಯಕ್ಷ ಎನ್ ಮೂಸಾನ್, ಸದಾಶಿವ ರೈ ನಡುಬೈಲು, ಖಾದರ್ ಕರ್ನೂರು,ಎಸ್ಡಿಎಂಸಿ ಅಧ್ಯಕ್ಷ ಸೂಫಿ ಬಾಂತಡ್ಕ, ವಿಕ್ರಂ ರೈ ಸಾಂತ್ಯ,ಅಬ್ದುಲ್ ಖಾದರ್ ಸುರುಳಿಮೂಲೆ,ಮಹಮ್ಮದ್ ಪಳ್ಳತ್ತೂರು, ಕೆ ಎಂ ಮಹಮ್ಮದ್ ಮೇನಾಲ, ಶಾಲಾ ಮುಖ್ಯ ಶಿಕ್ಷಕ ಪ್ರೆಮ್ ಕುಮಾರ್ , ಗ್ರಾಪಂ ಅಧ್ಯಕ್ಷೆ ಫೌಝಿಯಾ ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂ ಉಪಾಧ್ಯಕ್ಷರಾದ ರಾಮ ಕೆ ಮೇನಾಲ ಸ್ವಾಗತಿಸಿದರು. ಮಹಾಬಲ ರೈ ಕರ್ನೂರು ಕಾರ್ಯಕ್ರಮ ನಿರೂಪಿಸಿದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು16 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್22 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ15 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ21 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ22 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ22 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ21 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















