ಸ್ಥಳೀಯ
Dharmasthala-ಧರ್ಮಸ್ಥಳ: ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ ವಿಸ್ತೃತ ಭೋಜನಾಲಯದ ಉದ್ಘಾಟನೆ
ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ ವಿಸ್ತೃತ ಭೋಜನಾಲಯವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಶುಭ ಹಾರೈಸಿದರು.
ಉಜಿರೆ: ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಹೇಳಿದರು.
ಅವರು ಗುರುವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ ವಿಸ್ತೃತ ಭೋಜನಾಲಯವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಶುಭ ಹಾರೈಸಿದರು.
ತಾಯಿ-ತಂದೆ, ಗುರುಗಳು ಮತ್ತು ಅತಿಥಿಗಳನ್ನು ನಾವು ದೇವರಂತೆ ಗೌರವಿಸಿ, ಸತ್ಕರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಆಗಿದೆ. ದೇಶಪ್ರೇಮದೊಂದಿಗೆ ಪ್ರಾಮಾಣಿಕತೆ, ಕಲೆ, ಸೌಂದರ್ಯವನ್ನು ಉಳಿಸಿ, ಬೆಳೆಸಬೇಕು. ಆಲಸ್ಯ, ಆಡಂಬರ, ಕಾಲಹರಣ ಸಲ್ಲದು. ಎಲ್ಲರು ಶ್ರಮಪಟ್ಟು ಕೆಲಸ ಮಾಡಬೇಕು. ಸತ್ಕಾರ್ಯ ಮಾಡುವವರನ್ನು ಪ್ರೋತ್ಸಾಹಿಸಿ ಗೌರವಿಸಬೇಕು. ಪರಸ್ಪರ ಪ್ರೀತಿ, ವಿಶ್ವಾಸ ಗೌರವದಿಂದ ಉದಾರ ಹೃದಯಿಗಳಾಗಿ ಸಾರ್ಥಕ ಜೀವನ ಮಾಡಿದರೆ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಅವರು ಹೇಳಿದರು.
ಧರ್ಮಸ್ಥಳದ ಅನ್ನದಾನ ಮತ್ತು ನ್ಯಾಯದಾನ ಪದ್ಧತಿಯನ್ನು ಶ್ಲಾಘಿಸಿದರು. ಆರ್ಥಿಕ ದಾರಿದ್ರö್ಯ ಮತ್ತು ಮನೋ ದಾರಿದ್ರ್ಯ ನಿರ್ಮೂಲನೆ ಆಗಿ ರಾಜಕೀಯ ರಹಿತವಾದ ಸಾಮಾಜಿಕ ನೇತೃತ್ವದಿಂದ ಲೋಕಕಲ್ಯಾಣವಾಗುತ್ತದೆ. ಎಲ್ಲರೂ ಸತ್ಯ, ಧರ್ಮ ಮತ್ತು ನ್ಯಾಯ ಮಾರ್ಗದಲ್ಲಿ ನಡೆದು ಅಧಿಕಾರ, ಮಂತ್ರಶಕ್ತಿ ಮತ್ತು ಆರ್ಥಿಕ ಶಕ್ತಿಯ ಸದುಪಯೋಗವಾಗಬೇಕು. ಭಕ್ತಿ ಮತ್ತು ಧರ್ಮಕ್ಕಿಂತಲೂ ಪರಸ್ಪರ ಪ್ರೀತಿ ಮತ್ತು ವಿಶ್ವಾಸವೇ ಮುಖ್ಯ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
ಕೇರಳದಲ್ಲಿ ಅಭಿಮಾನ, ತಮಿಳುನಾಡಿನಲ್ಲಿ ಅಧ್ಯಯನ, ಆಂಧ್ರದಲ್ಲಿ ಆಚಾರ ಮತ್ತು ಕರ್ನಾಟಕದಲ್ಲಿ ಅನ್ನದಾನ ಶ್ರೇಷ್ಠವಾಗಿದೆ ಎಂದು ಸ್ವಾಮೀಜಿ ಹೇಳಿದರು. ಧರ್ಮಸ್ಥಳದ ಧರ್ಮಾಧಿಕಾರಿಯೂ, ದಾನಾಧಿಕಾರಿಯೂ ಆದ ವೀರೇಂದ್ರ ಹೆಗ್ಗಡೆಯವರನ್ನು “ಮಲೆನಾಡು ರತ್ನ” ಬಿರುದು ನೀಡಿ ಸ್ವಾಮೀಜಿ ಗೌರವಿಸಿದರು.
ನ.25 ರಂದು ನಡೆಯಲಿರುವ ಹೆಗ್ಗಡೆಯವರ ಜನ್ಮದಿನಾಚರಣೆಗೆ ಸ್ವಾಮೀಜಿ ಶುಭಾಶೀರ್ವಾದ ಮಾಡಿದರು. ಅನ್ನಛತ್ರದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನಗಳನ್ನೊಳಗೊಂಡ ವಿಸ್ತೃತ ಭೋಜನಾಲಯವನ್ನು ಕಾರ್ತಿಕ ಮಾಸದ ಅಶ್ವಿನಿ ನಕ್ಷತ್ರದಲ್ಲಿ ಉದ್ಘಾಟಿಸುವ ಸಂದರ್ಭ ವರುಣ ಕೃಪೆಯೂ ಆಗಿರುವುದಕ್ಕೆ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.
ಕಾಸರಗೋಡು ಎಡನೀರು ಮಠದ ಪೂಜ್ಯ ಸಚ್ಚಿದಾನಂದ ಸ್ವಾಮೀಜಿ ಆಶೀವರ್ಚನ ನೀಡಿ, ಧರ್ಮಸ್ಥಳದಲ್ಲಿ ನಿತ್ಯ, ನಿರಂತರ ನಡೆಯುತ್ತಿರುವ ಅನ್ನದಾನ, ವಿದ್ಯಾದಾನ, ಔಷಧಿ ದಾನ ಮತ್ತು ಅಭಯ ದಾನ ಎಂಬ ಚತುರ್ವಿಧ ದಾನಗಳಲ್ಲಿ ಅನ್ನದಾನ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ದಾನವಾಗಿದ್ದು ಇಲ್ಲಿಗೆ ಬರುವ ಭಕ್ತರು ಅದನ್ನು ದೇವರ ಪ್ರಸಾದವೆಂದೇ ಸ್ವೀಕರಿಸುತ್ತಾರೆ. ಇತರ ಎಲ್ಲಾ ಕ್ಷೇತ್ರಗಳಿಗೂ ಧರ್ಮಸ್ಥಳದ ವ್ಯವಸ್ಥಿತವಾದ ಮತ್ತು ಶಿಸ್ತುಬದ್ಧವಾದ ಅನ್ನದಾನ ಮಾದರಿಯಾಗಿದೆ ಎಂದು ಸ್ವಾಮೀಜಿ ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಧರ್ಮಸ್ಥಳಕ್ಕೆ ಬರುವ ಭಕ್ತಾದಿಗಳು ಪ್ರಸಾದ ರೂಪದಲ್ಲಿ ಸ್ವೀಕರಿಸುವ ಅನ್ನದಾನವನ್ನು ತೃಪ್ತಿಕರವಾಗಿ, ಶಾಂತಿ ಮತ್ತು ನೆಮ್ಮದಿಯಿಂದ ಸ್ವೀಕರಿಸುವಂತೆ ಮಾಡಲು ಅನ್ನಛತ್ರದಲ್ಲಿ ಆಧುನಿಕ ಸೌಲಭ್ಯಗಳನ್ನು ಬಳಸಲಾಗಿದೆ.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅನ್ನದಾನಕ್ಕೆ ಭಕ್ತಾದಿಗಳು ಶ್ರದ್ಧಾ-ಭಕ್ತಿಯಿಂದ ಅಕ್ಕಿ, ತರಕಾರಿ, ದವಸ-ಧಾನ್ಯಗಳನ್ನು ಉದಾರ ಕೊಡುಗೆಯಾಗಿ ಅರ್ಪಿಸುತ್ತಿದ್ದಾರ ಎಂದು ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದರು.
ಪೂಜ್ಯ ಕಂಚಿಶ್ರೀಗಳು ನಮ್ಮ ಸನಾತನ ಧರ್ಮ, ಸಂಸ್ಕೃತಿ ಮತ್ತು ಪರಂಪರೆ ಉಳಿಸಿ ಬೆಳೆಸಲು ಮಾಡುತ್ತಿರುವ ನಿಸ್ವಾರ್ಥ ಸೇವೆ ಬಗ್ಗೆ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಕೆ.ಪಿ.ಸಿ.ಸಿ. ಅಧ್ಯಕ್ಷ ಕೆ. ಹರೀಶ್ ಕುಮಾರ್ ಮತ್ತು ಡಿ. ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಅನ್ನಪೂರ್ಣ ಭೋಜನಾಲಯದ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್ ಧನ್ಯವಾದವಿತ್ತರು. ಡಾ. ಶ್ರೀಧರ ಭಟ್ ಮತ್ತು ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್20 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್12 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ18 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು20 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized19 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್20 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ18 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















