Connect with us

ರಾಜಕೀಯ

Minister Rajanna-ಸಹಕಾರಿ ಸಂಸ್ಥೆಗಳ ಚುನಾವಣೆಗೆ ಒಬ್ಬರು ಎರಡು ಅವಧಿಗಿಂತ ಹೆಚ್ಚು ಬಾರಿ ಸ್ಪರ್ಧಿಸದಂತೆ ಮಿತಿ : ನೂತನ ಕಾನೂನು ತರುವ ಚಿಂತನೆ : ಸಚಿವ ರಾಜಣ್ಣ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಂಗಳೂರು: ಸಹಕಾರಿ ಸಂಸ್ಥೆಗಳ ಚುನಾವಣೆಗೆ ಒಬ್ಬರು ಎರಡು ಅವಧಿಗಿಂತ ಹೆಚ್ಚು ಬಾರಿ ಸ್ಪರ್ಧಿಸಬಾರದು ಎಂಬ ಮಿತಿ ನಿಗದಿಪಡಿಸಲು ಕಾನೂನು ತರುವ ಚಿಂತನೆ ಇದೆ ಎಂದು ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ತಿಳಿಸಿದ್ದಾರೆ. ಹಿರಿಯ ಸಹಕಾರಿಗಳು ಈ ನಿಟ್ಟಿನಲ್ಲಿ ಸಲಹೆ ನೀಡಿದರೆ ಮುಂಬರುವ ಅಧಿವೇಶನದೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಹಮ್ಮಿಕೊಂಡಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ‘ಸಹಕಾರ ವಾರ ಪತ್ರಿಕೆ’ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

”ಸಹಕಾರಿ ಆಂದೋಲನ ಬೆಳೆಯಬೇಕು, ಉಳಿಯಬೇಕೆಂದರೆ, ಹೊಸಬರು ಕ್ಷೇತ್ರಕ್ಕೆ ಬರಬೇಕು. ಇಲ್ಲವಾದರೆ, ಸಹಕಾರಿ ಕ್ಷೇತ್ರಕ್ಕೆ ಭವಿಷ್ಯವಿಲ್ಲದಂತಾಗುತ್ತದೆ. ಹಾಗಾಗಿ, ಸಹಕಾರಿ ಸಂಸ್ಥೆಗಳ ಚುನಾವಣೆಗೆ ಒಬ್ಬರು ಎರಡು ಅವಧಿಗಿಂತ ಹೆಚ್ಚು ಬಾರಿ ಸ್ಪರ್ಧಿಸಬಾರದು ಎಂಬ ಮಿತಿ ನಿಗದಿಪಡಿಸುವ ಆಲೋಚನೆ ಇದೆ. ಇದನ್ನು ಹಿರಿಯ ಸಹಕಾರಿಗಳೆಲ್ಲರೂ ಒಪ್ಪಿದ್ದಾರೆ ಎಂಬ ಭಾವನೆಯೂ ಇದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾಲ ಪ್ರಮಾಣ ಕಡಿತಗೊಳಿಸಿದ ನಬಾರ್ಡ್‌
“ಸಬ್ಸಿಡಿ ಆಧಾರದಲ್ಲಿ ನೀಡುವ ಸಾಲ ಪ್ರಮಾಣವನ್ನು ನಬಾರ್ಡ್‌ ಏಕಾಏಕಿ ಕಡಿಮೆ ಮಾಡಿದೆ. ಆರಂಭದಲ್ಲಿ ಶೇ. 1ರ ಬಡ್ಡಿ ದರದಲ್ಲಿ ಶೇ. 80 ರಿಂದ 90ರಷ್ಟು ಸಾಲ ನೀಡಲಾಗುತ್ತಿತ್ತು. ಈಗ ಬಡ್ಡಿ ದರವನ್ನು ಶೇ. 4.5ಕ್ಕೆ ಏರಿಸಿದೆ. ಅಲ್ಲದೆ, 2024-25ರಲ್ಲಿ ಶೇ. 58ರಷ್ಟು ಸಾಲದ ಪ್ರಮಾಣವನ್ನು ಏಕಾಏಕಿ ಕಡಿಮೆ ಮಾಡಿದೆ. ಕಳೆದ ಸಾಲಿನಲ್ಲಿ 5,400 ಕೋಟಿ ರೂ. ಸಾಲ ನೀಡಿದ್ದ ನಬಾರ್ಡ್‌, ಪ್ರಸಕ್ತ ವರ್ಷದಲ್ಲಿ 2,300 ಕೋಟಿ ರೂ. ಮಾತ್ರ ನೀಡಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Ad Widget

Ad Widget

‘ಇತ್ತ ಸಹಕಾರಿ ಬ್ಯಾಂಕ್‌ಗಳ ಠೇವಣಿಯೂ ಕಡಿಮೆಯಾಗುತ್ತಿದೆ. ನಬಾರ್ಡ್‌ ನೀಡುವ ನೆರವು ಕೂಡ ಕಡಿಮೆಯಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ, ರೈತರು ಖಾಸಗಿಯವರ ಶೋಷಣೆಗೆ ಒಳಗಾಗಬೇಕಾಗುತ್ತದೆ. ಈ ಕುರಿತು ಪತ್ರ ಕೂಡ ಬರೆಯಲಾಗಿದೆ,” ಎಂದು ತಿಳಿಸಿದರು.

ಮೀಸಲು ಸೌಲಭ್ಯ
”ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಹಕಾರಿ ಆಂದೋಲನದ ಬಗ್ಗೆ ಪರಿಚಯಿಸಲು ಪಠ್ಯ ಅಳವಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಅಲ್ಲದೆ, ಸಹಕಾರಿ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿರುವ ಹುದ್ದೆಗಳಲ್ಲಿ ಸಹಕಾರಿ ವಿಷಯದಲ್ಲಿ ಪದವಿ, ಡಿಪ್ಲೋಮಾ ವ್ಯಾಸಂಗ ಮಾಡಿರುವವರಿಗೆ ಮೀಸಲು ಸೌಲಭ್ಯ ನೀಡಲಾಗುವುದು,” ಎಂದು ಭರವಸೆ ನೀಡಿದರು.

”ಗ್ರಾಮೀಣ ಭಾಗದ ಹಾಲು ಉತ್ಪಾದಕ ಸಂಘಗಳಿಗೆ ಹಾಲು ಹಾಕುವ ಸುಮಾರು 75 ರಿಂದ 80 ಸಾವಿರ ಸದಸ್ಯರನ್ನು ರಾಜಕೀಯ ಉದ್ದೇಶದಿಂದ ಸದಸ್ಯರಾಗಿ ನೋಂದಣಿ ಮಾಡಿಕೊಂಡಿಲ್ಲ. ಇದು ತಪ್ಪು. ಸಹಕಾರಿಗಳು ಈ ರೀತಿ ಮಾಡಬಾರದು. ರಾಜಕೀಯ ಸುಳಿಗೆ ಸಿಗುವ ಸಹಕಾರಿ ಸಂಸ್ಥೆ ಹಾಳಾಗುತ್ತದೆ. ಹಾಗಾಗಿ, ಸಹಕಾರಿ ಕ್ಷೇತ್ರಕ್ಕೆ ಪ್ರವೇಶ ಪಡೆಯುವಾಗ ರಾಜಕೀಯವನ್ನು ಹೊರಗಿಟ್ಟು ಬರಬೇಕು,” ಎಂದು ಕಿವಿಮಾತು ಹೇಳಿದರು.

”ರೈತರು ಆರ್ಥಿಕವಾಗಿ ಸದೃಢರಾದರೆ ರಾಜ್ಯ, ದೇಶವೂ ಉತ್ತಮವಾಗಿರುತ್ತದೆ. ಆದರೆ, ನಬಾರ್ಡ್‌ ರಿಯಾಯಿತಿ ದರದ ಸಾಲ ಪ್ರಮಾಣವನ್ನು ಕಡಿಮೆ ಮಾಡುತ್ತಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಸಹಕಾರಿಗಳು ನಬಾರ್ಡ್‌ ವಿರುದ್ಧ ಚಳವಳಿ ರೂಪಿಸುವ ಅಗತ್ಯವಿದೆ,” ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಮತ್ತು ಶಾಸಕ ಜಿಟಿ ದೇವೇಗೌಡ ಮಾತನಾಡಿ, ಸಲಹೆ ನೀಡಿದರು.

ಶಾಸಕ ಎಸ್‌ಟಿ ಸೋಮಶೇಖರ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ಎಚ್‌ಎಂ ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.

ಅಸಹಾಯಕತೆ ತೋಡಿಕೊಂಡ ರಾಜಣ್ಣ
”ನಿತ್ಯ ದಿನಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ಸಹಕಾರಿ ಸಂಸ್ಥೆಗಳು, ಬ್ಯಾಂಕ್‌ಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಸುದ್ದಿ ನೋಡುವಾಗ, ನಾನು ಕೆಟ್ಟ ಕಾಲದಲ್ಲಿ ಮಂತ್ರಿಯಾಗಿದ್ದೇನೆ ಎಂಬ ಭಾವನೆ ಕಾಡುತ್ತದೆ,” ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿಯೇ ತಮ್ಮ ಅಸಹಾಯಕತೆ ತೋಡಿಕೊಂಡ ಅವರು, ”ನಿತ್ಯ ಒಂದಲ್ಲಾ ಒಂದು ಸಹಕಾರಿ ಬ್ಯಾಂಕ್‌ಗಳಲ್ಲಿ ಹಣ ದುರುಪಯೋಗದ ಸುದ್ದಿಗಳು ಇರುತ್ತವೆ. ಆ ಸಂಸ್ಥೆಗಳ ಹೆಸರು ತಿಳಿಸಿದರೆ ನನಗೆ ಅವಮಾನವಾಗುತ್ತದೆ. ಇಷ್ಟೆಲ್ಲಾ ನನ್ನ ಕಣ್ಮುಂದೆಯೇ ನಡೆಯುತ್ತಿದ್ದರೂ ಏನೂ ಮಾಡಲು ಸಾಧ್ಯವಾಗುತ್ತಿಲ್ಲವಲ್ಲಾ ಎಂಬ ಅಸಹಾಯಕತೆಯಿಂದ ಒಮ್ಮೊಮ್ಮೆ ನನ್ನನ್ನು ನಾನೇ ದೂಷಣೆ ಮಾಡಿಕೊಳ್ಳುತ್ತಿದ್ದೇನೆ,” ಎಂದು ವಿಷಾದಿಸಿದರು.

”ಈಗಾಗಲೇ ಸಹಕಾರ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲು ಒಂದಷ್ಟು ತಿದ್ದುಪಡಿಗಳನ್ನು ಮಾಡಿದ್ದೇನೆ. ಅದು ರಾಜ್ಯಪಾಲರ ಪರಿಶೀಲನೆಯಲ್ಲಿದೆ. ಅವು ಜಾರಿಗೆ ಬರುತ್ತವೆ ಎಂಬ ನಿರೀಕ್ಷೆಯೂ ಇದೆ. ಆದರೆ, ಎಲ್ಲವೂ ಕಾನೂನಿಂದಲೇ ಆಗಬೇಕೆಂದೇನಿಲ್ಲ. ಸಹಕಾರಿಗಳು ಪ್ರಾಮಾಣಿಕವಾಗಿ, ಜವಾಬ್ದಾರಿಯುತವಾಗಿ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು,” ಎಂದು ಕಿವಿಮಾತು ಹೇಳಿದರು.

Ad Widget
1 Comment

1 Comment

  1. LAKSHMINARAYANA BHAT PERNAJE

    November 15, 2024 at 6:22 pm

    ಎರಡು ಸಲಕ್ಕಿಂತ ಅಧಿಕ ಸಲ ಯಾರೂ ಯಾವುದೇ ಚುನಾವಣೆಗೂ ಸ್ಪರ್ಧಿಸಬಾರದು ಎಂಬ ಮಿತಿ ಪ್ರತಿನಿಧಿಗಳನ್ನು ಚುನಾವಣೆ ಮೂಲಕ ಆರಿಸಲ್ಪಡಬೇಕಾದ ಎಲ್ಲಾ ಚುನಾವಣೆಗಳಿಗೂ ಅನ್ವಯಿಸುವುದು ನ್ಯಾಯೋಚಿತ.ಈ ಕುರಿತು ಮುಂದಡಿಯಿಡುವುದು ಸೂಕ್ತ.

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!