ಕಾರ್ಯಕ್ರಮಗಳು
Dharmanagar-ಡಿ. 21 ರಿಂದ ಡಿ. 25 : ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶೋತ್ಸವ – ‘ನ. 17 ರಂದು ಚಪ್ಪರ ಮುಹೂರ್ತ
ಬಂಟ್ವಾಳ ತಾಲೂಕಿನ ವಿಟ್ಲ- ಕಂಬಳಬೆಟ್ಟು ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಇಲ್ಲಿ ಡಿ. 21 ರಿಂದ ಡಿ. 25 ರವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ಬ್ರಹ್ಮ ಕಲಶಾಭಿಷೇಕ ಮತ್ತು ನೇಮೋತ್ಸವ ಕಾರ್ಯಕ್ರಮದ ಬಗ್ಗೆ ಧರ್ಮನಗರ ಸಮಾಜ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಬಂಟ್ವಾಳ ತಾಲೂಕಿನ ವಿಟ್ಲ- ಕಂಬಳಬೆಟ್ಟು ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಇಲ್ಲಿ ಡಿ. 21 ರಿಂದ ಡಿ. 25 ರವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ಬ್ರಹ್ಮ ಕಲಶಾಭಿಷೇಕ ಮತ್ತು ನೇಮೋತ್ಸವ ಕಾರ್ಯಕ್ರಮದ ಬಗ್ಗೆ ಧರ್ಮನಗರ ಸಮಾಜ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ ಮುಡೈಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ’21 ವರ್ಷಗಳ ಹಿಂದೆ ಪ್ರಶ್ನೆಚಿಂತನೆ ನಡೆದು ಯಾವ ಅಭಿವೃದ್ಧಿ ಕಾಣದೆ ಈಗ 9 ವರ್ಷದ ಹಿಂದೆ ಕುಂಡಡ್ಕ ವಿಷ್ಣು ಮೂರ್ತಿ ಸಪರಿವಾರ ದೇವರ ಜೆರ್ಣೋದ್ದಾರ ಚಿಂತನೆಯಲ್ಲಿ ಕಂಡು ಬಂದ ಹಾಗೆ ಈ ಸಾನಿಧ್ಯ ಗಳ ಬಗ್ಗೆ ಮತ್ತೆ ಇಲ್ಲಿ ಅಷ್ಟ ಮಂಗಲ ಚಿಂತನೆ, ನಿವೃತಿ ಕಾರ್ಯಗಳು ನಡೆದು ಜೀರ್ಣೋದ್ಧಾರ ಕಾರ್ಯ ಅಂತಿಮ ಹಂತದಲ್ಲಿವೆ. ವೈದ್ಯನಾಥ ಮಲರಾಯ ದೈವಗಳಿಗೆ ಪ್ರತ್ಯೇಕ ಗುಡಿಗಳು ದೈವಗಳಿಗೆ ಕಟ್ಟೆ ಗಳನ್ನು ನಿರ್ಮಾಣ ಮಾಡಲಾಗಿದೆ, ಒಟ್ಟು 60 ಲಕ್ಷ ವೆಚ್ಚ ಗಳ ನಿರ್ಮಾಣ ಕಾರ್ಯಗಳು ನಡೆದಿದ್ದು, ಇದರಲ್ಲಿ ಗ್ರಾಮಸ್ಥರು ಹಾಗೂ ಭಕ್ತರು ಸುಮಾರು 40 ಲಕ್ಷ ಕ್ಕೂ ಮೀರಿದ ಖರ್ಚು ವೆಚ್ಚಗಳನ್ನು ಪೂರೈಸಿದ್ದಾರೆ ಎಂದು ತಿಳಿಸಿದರು.
ಬ್ರಹ್ಮ ಕಲಶ ಸ್ವಾಗತ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಅಮೈ ಮಾತನಾಡಿ ‘ನ. 17 ರಂದು ನಡೆಯುವ ಚಪ್ಪರ ಮುಹೂರ್ತ ಕಾರ್ಯಕ್ರಮಕ್ಕೆ ಸುಮಾರು 1000 ದಿಂದ 1500 ಜನರು ಸೇರುವ ನಿರೀಕ್ಷೆ ಇದೆ. ಬ್ರಹ್ಮ ಕಲಶಾಭೀಷೇಕ ಕಾರ್ಯಕ್ರಮದಲ್ಲಿ 1 ಲಕ್ಷ ಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದರ ತಯಾರಿಗಾಗಿ 600 ಮನೆಗಳಿಗೆ ಭೇಟಿ ನೀಡಿ ವಿಶೇಷ ಅಭಿಯಾನ ರಚಿಸಲಾಗಿದೆ. 15 ರಿಂದ 20 ಜನರನ್ನೊಳಗೊಂಡ ಎರಡು ಮೂರು ತಂಡಗಳ ಮೂಲಕ ಈ ಅಭಿಯಾನ ನಡೆಯುತ್ತಿದ್ದು, ಪ್ರತಿ ಮನೆಗಳಿಗೆ ಭೇಟಿ ನೀಡಿ ಆಮಂತ್ರಣ ಪತ್ರವನ್ನು ಹಂಚಲಾಗಿದೆ. ಪ್ರಸ್ತುತ 1786 ಮನೆಗಳಿಗೆ ಈಗಾಗಲೇ ಭೇಟಿ ನೀಡಲಾಗಿದ್ದು, ಇನ್ನು 3000 ಮನೆ ತಲುಪಬೇಕೆಂಬ ಗುರಿ ಇದೆ. ಹಾಗೂ ಚಪ್ಪರ ಮುಹೂರ್ತ ಬಳಿಕ ಹೆಚ್ಚಿನ ತಂಡಗಳನ್ನು ರಚಿಸಿ ಅಭಿಯಾನ ಮುಂದುವರೆಸುವುದೆಂದು ತೀರ್ಮಾನಿಸಲಾಗಿದೆ ಎಂದರು.
ಬ್ರಹ್ಮಕಲಶ ಸ್ವಾಗತ ಸಮಿತಿಯ ಉಪಾಧ್ಯಕ್ಷರು ಸುಧಾಕರ್ ಶೆಟ್ಟಿ ಬೀಡಿನಮಜಲು ಮಾತನಾಡಿ ಡಿ. 21 ರಿಂದ 25 ವರೆಗೆ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ನ. 17 ನೇ ಆದಿತ್ಯವಾರ ಇದರ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ವೇ.ಮೂ.ಜಯರಾಮ ಜೋಯಿಸರು ಬಡೆಜ ಇವರ ಪೌರೋಹಿತ್ಯದಲ್ಲಿ ಗಣಪತಿ ಹವನ ಪ್ರಾರ್ಥನೆ ನಡೆಯಲಿದೆ ಎಂದು ತಿಳಿಸಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಬ್ರಹ್ಮಕಲಶೋತ್ಸವದ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಿದ್ದಾರೆ. ಬಳಿಕ ಕೃಷ್ಣಪ್ಪ ಪೂಜಾರಿ, ಧರ್ಮದರ್ಶಿಗಳು ಚಾಮುಂಡೇಶ್ವರಿ ದೇವಸ್ಥಾನ ರಜತಾದ್ರಿ ಹಾಗೂ ಸೇಸಪ್ಪ ಗೌಡ ಹಡೀಲು ಅಧ್ಯಕ್ಷರು ಮಲರಾಯ ದೈವಸ್ಥಾನ ನಡುಮನೆ ಪಿಲಿಂಜ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಿದ್ದಾರೆ. ನಂತರ ನಾರಾಯಣ ಶೆಟ್ಟಿ ಕುಂಡಡ್ಕ ಬಾಲಕೃಷ್ಣ ಗೌಡ ಅಮೈ, ರಮೇಶ್ ಭಟ್ ಎಂ.ಹೆಚ್ ಭಂಡಾರದ ಮನೆ ಮಿತ್ತೂರು, ಜಯರಾಮ ಕಾರ್ಯಾಡಿಗುತ್ತು ಇವರು ತೋರಣ ಮುಹೂರ್ತಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಸತೀಶ್ ಶೆಟ್ಟಿ ಮೂಡೈಮಾರ್, ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ ಮಲರಾಯ ಜೇರ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಚಪ್ಪರ ಮುಹೂರ್ತದ ಸಭಾ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುರೇಂದ್ರ ಕಾರ್ಯಾಡಿ, ಬ್ರಹ್ಮಕಲಶ ಸ್ವಾಗತ ಸಮಿತಿ ಕಾರ್ಯದರ್ಶಿ ಮೋಹನ್ ಕೆ ಎಸ್, ಬ್ರಹ್ಮಕಲಶ ಸ್ವಾಗತ ಸಮಿತಿಯ ಸಂಘಟನಾ ಕಾರ್ಯದರ್ಶಿ ಮಹಾಬಲ ಆಚಾರ್ಯ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಮಂಗಳೂರು23 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ22 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು23 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ17 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















