Uncategorized
Dr. Krishna Bhat-ಕನಸಿನ ಯಾತ್ರೆಗೆ ಒಂದು ಸ್ಪಷ್ಟವಾದ ದಾರಿ ಇರಲಿ: ಡಾ. ಕೆ.ಎಮ್. ಕೃಷ್ಣ ಭಟ್
ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಅಹಲ್ಯಾಬಾಯಿ ಹೋಳ್ಕರ್ ವೇದಿಕೆಯಲ್ಲಿ, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಿದ ರಾಜ್ಯಮಟ್ಟದ “ಕನಸುಗಳು – 2024” ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಕಾರ್ಯದರ್ಶಿಗಳಾದ ಡಾ. ಕೆ.ಎಮ್. ಕೃಷ್ಣ ಭಟ್ ಮಾತನಾಡಿದರು.
ಪುತ್ತೂರು, ನ.15: ಕನಸು ಒಂದು ಸುದೀರ್ಘವಾದ ಪಯಣ. ಕನಸುಗಳಿಲ್ಲದ ಬದುಕು ಅಸಾಧ್ಯ. ಕನಸಿನ ಯಾತ್ರೆಗೆ ಒಂದು ಸ್ಪಷ್ಟವಾದ ದಾರಿ ಇರಬೇಕು. ಕ್ರಮಿಸುವ ಹಾದಿಯಲ್ಲಿ ಬದ್ಧತೆಗಳು ಸೇರಿಕೊಂಡಾಗ ಯಾವ ನಿರ್ಧಾರಗಳು ಸಡಿಲವಾಗಲು ಸಾಧ್ಯವಿಲ್ಲ. ಜೀವನದಲ್ಲಿ ಬರುವ ಪ್ರತಿಕೂಲ ಸಮಸ್ಯೆಗಳು ನಮ್ಮನ್ನು ಯಶಸ್ಸಿನಿಂದ ಹಿಮ್ಮೆಟ್ಟಿಸದಿರಲಿ. ಚುಚ್ಚಬಲ್ಲ ಮುಳ್ಳುಗಳನ್ನು ಕೊಡವಿಕೊಂಡು ಮತ್ತೆ ಹೆಜ್ಜೆಗಳನ್ನು ಇಡುವಲ್ಲಿ ದೃಢನಿರ್ಧಾರದ ಅಗತ್ಯವಿದೆ.

ವಿದ್ಯಾರ್ಥಿಗಳು ಕಂಡ ಕನಸಿನ ಸಿದ್ಧತೆ ಮೊಳಕೆ ಒಡೆಯುವಂತಹ ಕಾರ್ಯಕ್ರಮ ಇದಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಕಾರ್ಯದರ್ಶಿಗಳಾದ ಡಾ. ಕೆ.ಎಮ್. ಕೃಷ್ಣ ಭಟ್‌ಹೇಳಿದರು.
ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಅಹಲ್ಯಾಬಾಯಿ ಹೋಳ್ಕರ್ ವೇದಿಕೆಯಲ್ಲಿ, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಿದ ರಾಜ್ಯಮಟ್ಟದ “ಕನಸುಗಳು – 2024” ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಕೃಷ್ಣಪ್ರಸನ್ನ ಕೆ. ಮಾತನಾಡಿ, ಪ್ರತಿಯೊಬ್ಬನ ಕನಸು ನನಸಾಗಲು ಉತ್ತಮ ಮಾರ್ಗದರ್ಶನ ಅಗತ್ಯ. ಹದಿವಯಸ್ಸಿನ ಮಕ್ಕಳು ಕಾಣುವ ಕನಸುಗಳಿಗೆ ಪೋಷಣೆ, ಉತ್ತೇಜನವನ್ನು ನೀಡುವ ಕಾರ್ಯವನ್ನು ವಿವೇಕಾನಂದ ವಿದ್ಯಾಸಂಸ್ಥೆ ಹಲವು ದಶಕಗಳಿಂದ ಮಾಡುತ್ತಿದೆ ಎಂದು ನುಡಿದರು.

ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ನಿವೃತ್ತ ಹಿರಿಯ ವಿಜ್ಞಾನಿ ಡಾ.ಕೆ.ಎನ್. ಸುಬ್ರಹ್ಮಣ್ಯ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ , ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳಿಗೆ ಸಿಗುವ ವೇದಿಕೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಭವಿಷ್ಯವನ್ನು ಭದ್ರಪಡಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳು ನಮ್ಮಲ್ಲಿನ ಸೃಜನಶೀಲತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತವೆ. ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಸೂಕ್ತ ವೇದಿಕೆಯನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಲಭ್ಯ ಅವಕಾಶಗಳನ್ನು ಬಳಸಿಕೊಂಡು ಯಶಸ್ಸನ್ನು ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವಿವಿಧ ವಿನೋದಾವಳಿಗಳ ಮಳಿಗೆಗಳನ್ನು ಡಾ.ಕೆಎನ್‌ಸುಬ್ರಹ್ಮಣ್ಯ ಉದ್ಘಾಟಿಸಿದರು.
ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ನಿರ್ದೇಶಕರಾದ ವತ್ಸಲಾ ರಾಜ್ಞಿ, ವಿವೇಕಾನಂದ ವಸತಿ ನಿಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಪ್ರಭು,ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ನಿಟಿಲಾಪುರ,ಕನಸುಗಳು ಕಾರ್ಯಕ್ರಮದ ಸಂಯೋಜಕರಾದ ಉಪನ್ಯಾಸಕಿ ದಯಾಮಣಿ ಟಿ.ಕೆ. ಉಪಸ್ಥಿತರಿದ್ದರು.

ಉಪನ್ಯಾಸಕಿ ದೀಕ್ಷಿತಾ ಸ್ವಾಗತಿಸಿ, ಪ್ರಸ್ತಾವಿಸಿದರು. ಉಪನ್ಯಾಸಕಿ ಅನುಪಮಾ ಶೇಟ್ ವಂದಿಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕಿ ಯಶವಂತಿ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ದೃಶ್ಯಕಾವ್ಯ, ಯುವ ವಾಣಿಜ್ಯೋದ್ಯಮಿ, ಗಾಳಿಪಟ ಹಾರಾಟ, ಮುಖವರ್ಣಿಕೆ, ವೀಡಿಯೋ ಸಂಕಲನ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.















