ಉಡುಪಿ
karkala : ಅಣ್ಣನ ತಿಥಿ ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದ ಸಹೋದರಿ ವಿದ್ಯುತ್ ಶಾಕ್ ಗೆ ಬಲಿ – ಕಾರ್ಕಳದಲ್ಲೊಂದು ಶಾಕಿಂಗ್ ಘಟನೆ

ಲಲಿತಾರವರ ಸಹೋದರ ನಿಟ್ಟೆ ಗ್ರಾಮದ ರಾಘು ಬೋಂಟ್ರರವರು ನ. 3ರಂದು ನಿಧನರಾಗಿದ್ದರು. ಅವರ ಉತ್ತರ ಕ್ರಿಯೆ ಕಾರ್ಯಕ್ರಮ ನ 15ಕ್ಕೆ ನಿಗದಿಗೊಳಿಸಲಾಗಿತ್ತು. ಇದರ ಪೂರ್ವ ಸಿದ್ದತೆಯಲ್ಲಿ ನ 14 ರಂದು ರಾತ್ರಿ ಮನೆಯವರು ತೊಡಗಿಸಿಕೊಂಡಿದ್ದರು. ಅಂತೆಯೇ ಲಲಿತಾರವರು ಅಡುಗೆ ಪಾತ್ರೆ ತೊಳೆಯುತ್ತಿದ್ದರು.
ಕಾರ್ಕಳ : ನ 15: ಅಣ್ಣನ ಉತ್ತರ ಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಆಗಮಿಸಿದ ಸಹೋದರಿ, ಕಾರ್ಯಕ್ರಮದ ಪೂರ್ವಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದ ವೇಳೆ ವಿದ್ಯುತ್ ಶಾಕ್ ಗೆ ತುತ್ತಾಗಿ ಮರಣವನ್ನಪ್ಪಿದ್ದ ಆಘಾತಕಾರಿ ಘಟನೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ ನ. 14ರಂದು ಸಂಭವಿಸಿದೆ. ಲಲಿತಾ ಬೋಂಟ್ರ (59) ಮೃತಪಟ್ಟವರು.
ಲಲಿತಾರವರ ಸಹೋದರ ನಿಟ್ಟೆ ಗ್ರಾಮದ ರಾಘು ಬೋಂಟ್ರರವರು ನ. 3ರಂದು ನಿಧನರಾಗಿದ್ದರು. ಅವರ ಉತ್ತರ ಕ್ರಿಯೆ ಕಾರ್ಯಕ್ರಮ ನ 15ಕ್ಕೆ ನಿಗದಿಗೊಳಿಸಲಾಗಿತ್ತು. ಇದರ ಪೂರ್ವ ಸಿದ್ದತೆಯಲ್ಲಿ ನ 14 ರಂದು ರಾತ್ರಿ ಮನೆಯವರು ತೊಡಗಿಸಿಕೊಂಡಿದ್ದರು. ಅಂತೆಯೇ ಲಲಿತಾರವರು ಅಡುಗೆ ಪಾತ್ರೆ ತೊಳೆಯುತ್ತಿದ್ದರು.
ಈ ವೇಳೆ ತಿಥಿ ಕಾರ್ಯಕ್ರಮಕ್ಕೆಂದು ಮನೆಯ ಅಂಗಳಕ್ಕೆ ಆಳವಡಿಸಿದ ಶಾಮಿಯಾನದ ಕಂಬವನ್ನು ಅಕಸ್ಮಿಕವಾಗಿ ಸ್ಪರ್ಶಿಸಿದ್ದಾರೆ. ಆ ಕಂಬದಲ್ಲಿ ವಿದ್ಯುತ್ ಪ್ರವಹಿಸಿದ್ದ ಪರಿಣಾಮ ವಿದ್ಯುತ್ ಆಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ನ 15 ರಂದು ಬೋಂಟ್ರ ಮನೆಯಲ್ಲಿ ನಿಗದಿಯಾಗಿದ್ದ ಉತ್ತರ ಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಲಲಿತಾ ಅವರು ನಿಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಓರ್ವ ಪುತ್ರನನ್ನು ಅಗಲಿದ್ದಾರೆ.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ24 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ3 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಶಿಕ್ಷಣ24 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಅಪರಾಧ2 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
Uncategorized4 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















