ಕಾರ್ಯಕ್ರಮಗಳು
Bengaluru-ಬೆಂಗಳೂರು: ವಿರೂಪಾಕ್ಷಪುರ ಕೋಡಿಗೆಹಳ್ಳಿ ಶ್ರೀರಾಮ್ ಶ್ರೇಯಸ್ ಅಪಾರ್ಟ್ಮೆಂಟ್ ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ವಿವಿಧ ಜಿಲ್ಲೆಗಳ ಕಲಾಪ್ರದರ್ಶನ – ದೇವಿಮಹಾತ್ಮೆ ಯಕ್ಷಗಾನ
ನ. 9 ರ ಸಂಜೆ ಸೂರ್ಯ ಮುಳುಗುತ್ತಿದ್ದಂತೆ, ಒಂದರ ನಂತರ ಒಂದರಂತೆ, ಅಸಂಖ್ಯಾತ ಸಾಂಸ್ಕೃತಿಕ ಚಟುವಟಿಕೆಗಳು ಶ್ರೀರಾಮ್ ಶ್ರೇಯಸ್ ವೇದಿಕೆಯಲ್ಲಿ ಪ್ರದರ್ಶಿತಪಟ್ಟಿತು. ಅಪಾರ್ಟ್ ಮೆಂಟ್ ನಿವಾಸಿಗಳು ಹಾಗೂ ಅವರ ಮಕ್ಕಳು ಪ್ರಸ್ತುತಪಡಿಸಿದ ನೃತ್ಯ ಕಾರ್ಯಕ್ರಮಗಳು ಅಮೋಘವಾಗಿದ್ದವು. ಕರ್ನಾಟಕದ ವಿವಿಧ ಭಾಗಗಳಿಂದ ಹುಟ್ಟಿಕೊಂಡ ವೈವಿಧ್ಯಮಯ ನೃತ್ಯ ಪ್ರಕಾರಗಳ ಪ್ರದರ್ಶನಗೊಂಡವು.
ನವೆಂಬರ್ 9 ರ ಸಂಜೆ ಸೂರ್ಯ ಮುಳುಗುತ್ತಿದ್ದಂತೆ, ಒಂದರ ನಂತರ ಒಂದರಂತೆ, ಅಸಂಖ್ಯಾತ ಸಾಂಸ್ಕೃತಿಕ ಚಟುವಟಿಕೆಗಳು ಶ್ರೀರಾಮ್ ಶ್ರೇಯಸ್ ವೇದಿಕೆಯಲ್ಲಿ ಪ್ರದರ್ಶಿತಪಟ್ಟಿತು.
ಅಪಾರ್ಟ್ ಮೆಂಟ್ ನಿವಾಸಿಗಳು ಹಾಗೂ ಅವರ ಮಕ್ಕಳು ಪ್ರಸ್ತುತಪಡಿಸಿದ ನೃತ್ಯ ಕಾರ್ಯಕ್ರಮಗಳು ಅಮೋಘವಾಗಿದ್ದವು. ಕರ್ನಾಟಕದ ವಿವಿಧ ಭಾಗಗಳಿಂದ ಹುಟ್ಟಿಕೊಂಡ ವೈವಿಧ್ಯಮಯ ನೃತ್ಯ ಪ್ರಕಾರಗಳ ಪ್ರದರ್ಶನಗೊಂಡವು.
ಕೋಲಾಟ, ಡೊಳ್ಳು ಕುಣಿತ, ಪಿಲಿ ವೇಷ, ಕರಾವಳಿ , ಕೊಡವ, ಉತ್ತರ ಕರ್ನಾಟಕ ಮತ್ತು ಇತರ ನೃತ್ಯ ಪ್ರಕಾರಗಳು ಅಪ್ಪಟ, ವರ್ಣರಂಜಿತ ಮತ್ತು ರೋಮಾಂಚಕ ಉಡುಪುಗಳೊಂದಿಗೆ ಪ್ರೇಕ್ಷಕರನ್ನು ಪುಳಕಿತಗೊಳಿಸಿದವು.
ಕರ್ನಾಟಕದ ವಿವಿಧ ಭಾಗಗಳಿಂದ ಬಾಯಲ್ಲಿ ನೀರೂರಿಸುವ ಖಾದ್ಯಗಳನ್ನು ನೀಡುವ ಆಹಾರ ಮಳಿಗೆಗಳು ಪ್ರೇಕ್ಷಕರ ಹಸಿವು ಮತ್ತು ರುಚಿ ಮೊಗ್ಗುಗಳನ್ನು ಪೂರೈಸಿದವು.
ಗ್ರ್ಯಾಂಡ್ ಫಿನಾಲೆ – ಶ್ರೀ ದೇವಿ ಮಹಾತ್ಮೆ: ಕರ್ನಾಟಕದ ಗಂಡು ಕಲೆ ಎಂದು ಪ್ರಸಿದ್ದಿಯಾದ ವಿಶ್ವವಿಖ್ಯಾತ ಯಕ್ಷಗಾನ ಪ್ರಸಂಗ, ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತು. ಮಕ್ಕಳು, ವಯಸ್ಕರು ಮತ್ತು ಹಿರಿಯರೆಲ್ಲ ಯಕ್ಷಗಾನ ಪ್ರದರ್ಶನ ಆನಂದಿಸಿದರು.
ಅಗ್ನಿ ಪ್ರದರ್ಶನಗಳು ಮತ್ತು ಪಟಾಕಿಗಳಿಂದ ವರ್ಧಿಸಲ್ಪಟ್ಟ ಮಹಿಷಾಸುರನ ಅದ್ಭುತ ಪ್ರವೇಶವು ಎಲ್ಲರನ್ನೂ ಮಂತ್ರಮುಗ್ದವಾಗಿಸಿದವು.
ಈ ಕಾರ್ಯಕ್ರಮವನ್ನು ಸ್ಮರಣೀಯ ಮತ್ತು ಅದ್ಭುತವಾಗಿಸಲು ರಾಜ್ಯೋತ್ಸವ ಆಯೋಜಕರ ಸಮಿತಿ ಒಟ್ಟಾಗಿ ದಿನಗಟ್ಟಲೆ ಸಂಘಟಿತ ಘಟಕವಾಗಿ ಶ್ರಮಿಸಿದ್ದಾರೆ.
ಕಾರ್ಯಕ್ರಮವನ್ನು ಅದ್ಧೂರಿಯಾಗಿ ಯಶಸ್ವಿಗೊಳಿಸಿದ ಎಲ್ಲರ ಸಕ್ರಿಯ ಭಾಗವಹಿಸುವಿಕೆ ಸಾಕ್ಷಿಯಾಯಿತು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು















