Connect with us

ಬಿಗ್ ನ್ಯೂಸ್

Muliya Shankar Bhat-ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಆಯ್ಕೆ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬಂಟ್ವಾಳ: ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆಗೊಳಿಸಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಘೋಷಿಸಿದ್ದಾರೆ

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಬಂಟ್ವಾಳ ತಾಲೂಕಿನ ಅಳಿಕೆ ಸಮೀಪ ಮುಳಿಯದಲ್ಲಿ ವಿಶ್ರಾಂತ ಜೀವನ ನಡೆಸುತ್ತಿರುವ 72ರ ಹರೆಯದ ನಿವೃತ್ತ ಅಧ್ಯಾಪಕ ಮುಳಿಯ ಶಂಕರ ಭಟ್ ಅವರು ಮಕ್ಕಳ ಸಾಹಿತ್ಯದಿಂದ ತೊಡಗಿ ಆಧ್ಯಾತ್ಮ, ಧಾರ್ಮಿಕ ಸಹಿತ ವೈವಿಧ್ಯಮಯ ಸಾಹಿತ್ಯ ರಚನೆಗಳನ್ನು ಮಾಡಿದ್ದು, ಸುಮಾರು 19ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಪತ್ರಕರ್ತರಾಗಿ, ಗಮಕಿಯಾಗಿಯೂ ತೊಡಗಿಸಿಕೊಂಡಿದ್ದ ಅವರ ಕೃತಿ ಕೇರಳ ಶಾಲಾ ಪಠ್ಯದಲ್ಲಿ ಸೇರ್ಪಡೆಯಾಗಿದೆ. 2002ರಲ್ಲಿ ಪುತ್ತೂರಿನಲ್ಲಿ ನಡೆದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ಅವರು, ಒಡಿಯೂರಿನಲ್ಲಿ 2006ರಲ್ಲಿ ನಡೆದ ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದರು. 2021ರಲ್ಲಿ ಮಂಚಿಯಲ್ಲಿ ನಡೆದ ತಾಲೂಕು ಗಮಕ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಆಳ್ವಾಸ್ ನುಡಿಸಿರಿ ಸಹಿತ ಹಲವೆಡೆ ಸನ್ಮಾನಗಳು ಸಂದಿವೆ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

ಮುಳಿಯ ಶಂಕರ ಭಟ್ ಅವರ ಪರಿಚಯ:
ಬಂಟ್ವಾಳ ತಾಲೂಕಿನ ಅಳಿಕೆ ಸಮೀಪ ಮುಳಿಯದಲ್ಲಿ ವಿಶ್ರಾಂತ ಜೀವನ ನಡೆಸುತ್ತಿರುವ ನಿವೃತ್ತ ಅಧ್ಯಾಪಕ ಶಂಕರ ಭಟ್ ಅವರಿಗೆ 72ರ ಹರೆಯ. ಸುದೀರ್ಘ ಕಾಲ ಮಂಜೇಶ್ವರದಲ್ಲಿರುವ ಎಸ್.ಎ.ಟಿ. ಶಾಲೆಯಲ್ಲಿ ಹಿಂದಿ ಅಧ್ಯಾಪಕರಾಗಿ ಬಳಿಕ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿರುವ ಎಳೆಯರ ಗೆಳೆಯ ಮುಳಿಯ ಈಗಲೂ ಸಾಹಿತ್ಯ ರಚನೆಯಲ್ಲಿ ನಿರತರು. ಹಿಂದೆ ಮಕ್ಕಳ ಸಾಹಿತ್ಯವನ್ನು ಹೆಚ್ಚಾಗಿ ಬರೆಯುತ್ತಿದ್ದವರು, ಈಗ ಧಾರ್ಮಿಕ, ಆಧ್ಯಾತ್ಮಕ್ಕೆ ಸಂಬಂಧಿಸಿದ ಬರೆಹಗಳನ್ನು ಬರೆಯುತ್ತಿದ್ದಾರೆ.
ಕೃಷ್ಣ ಭಟ್ ಮತ್ತು ಶಂಕರಿ ಅಮ್ಮ ಅವರ ಪುತ್ರರಾಗಿ 1952, ಫೆ.19ರಂದು ಜನಿಸಿದ ಮುಳಿಯ ಶಂಕರ ಭಟ್ ಪ್ರಾಥಮಿಕ ಶಿಕ್ಷಣವನ್ನು ಕೆದಿಲ ಹಿ.ಪ್ರಾ.ಶಾಲೆ, ಮುಚ್ಚಿರಪದವು ಪ್ರಾಥಮಿಕ ಶಾಲೆಯಲ್ಲಿ ನಡೆಸಿದ್ದಾರೆ. ಕನ್ಯಾನ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲು ವಿದ್ಯಾಭ್ಯಾಸ ನಡೆಸಿರುವ ಅವರು, ಸಂಸ್ಕೃತ ವಿಶಾರದ, ಕನ್ನಡದಲ್ಲಿ ಸ್ನಾತಕೋತ್ತರ ಡಿಪ್ಲೊಮಾ, ಹಿಂದಿ ಸಾಹಿತ್ಯರತ್ನ, ಹಿಂದಿಯಲ್ಲಿ ಎಂ.ಎ, ಹಿಂದಿ ಶಿಕ್ಷಣಪಾರಂಗತ ಪದವಿಯನ್ನು ಬಿಇಡಿಯಲ್ಲಿ ಮಾಡಿದ್ದಾರೆ.

ವೃತ್ತಿಜೀವನ:
ಆರಂಭದಲ್ಲಿ ಪತ್ರಕರ್ತರಾಗಿ ವೃತ್ತಿಜೀವನ ನಡೆಸಿದ ಶಂಕರ ಭಟ್, ನವಭಾರತ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕೆಲಸ ಮಾಡಿದವರು. ಬಳಿಕ ಅಧ್ಯಾಪನ ವೃತ್ತಿಗೆ ತೊಡಗಿಸಿಕೊಂಡು, ಮೊಂಟೆಪದವು ಪ್ರಾಥಮಿಕ, ಪ್ರೌಢಶಾಲೆ, ಮುಡಿಪು ಜ್ಯೂನಿಯರ್ ಕಾಲೇಜು, ಕಪಿತಾನಿಯೋ ತರಬೇತಿ ಶಾಲೆಗಳಲ್ಲಿ 1976ರಿಂದ 1985ರವರೆಗೆ ಕೆಲಸ ಮಾಡಿದರು. ಬಳಿಕ 1986ರಿಂದ 2007ರವರೆಗೆ ಮಂಜೇಶ್ವರದ ಎಸ್.ಎ.ಟಿ. ಶಾಲೆಯಲ್ಲಿ ಹಿಂದಿ ಅಧ್ಯಾಪಕರಾಗಿ ಕೆಲಸ ಮಾಡಿದರು. ಒಂದು ವರ್ಷ ಮುಖ್ಯೋಪಾಧ್ಯಾಯರಾಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದರು. ಕೇರಳ ಸರಕಾರದ ಪಠ್ಯಪುಸ್ತಕ ರಚನಾ ಸಮಿತಿಯ ಸಂಪನ್ಮೂಲ ವ್ಯಕ್ತಿಯಾಗಿ 12 ವರ್ಷ ಅವರು ಭಾಗಿಯಾಗಿದ್ದರು.

Ad Widget

Ad Widget

ಗಮಕ ವ್ಯಾಖ್ಯಾನದ ಮೂಲಕ ಗಮನ ಸೆಳೆದಿರುವ ಮುಳಿಯ ಶಂಕರ ಭಟ್, ತಾಳಮದ್ದಳೆ ಅರ್ಥಧಾರಿ. ನಾಟಕ ರಚನೆ, ನಿರ್ದೇಶನ, ನಟನೆಯಲ್ಲೂ ಗುರುತಿಸಿಕೊಂಡವರು. ಕಥೆ, ಕವನ ಬರೆಯುವುದು ಮುಖ್ಯ ಹವ್ಯಾಸಗಳಲ್ಲಿ ಪ್ರಮುಖ.

ಪ್ರಕಟಿತ ಕೃತಿಗಳು 19:
ದೇಶಪ್ರೇಮ ಮತ್ತು ಇತರ ಕವನಗಳು, ನಗೆಮಿಂಚು, ಭಕುತಿಕುಸುಮ, ಪುಷ್ಪಾಂಜಲಿ, ಚಿಣ್ಣರ ಚಿಲುಮೆ, ಚಿಣ್ಣರ ಗಿಣ್ಣು, ಚಿಣ್ಣರ ಲೋಕ, ಭಾವಗಂಗೆ, ಧನ್ವಂತರಿ ಮಹಾತ್ಮೆ, ಸಚಿತ್ರ ಗುರುಚರಿತಾಮೃತ, ಪಾತ್ರಕ್ಷೇತ್ರ, ದತ್ತಾವಧೂತ, ಗುರುದೇವಾನಂದ ದೃಷ್ಟಿ, ಸೃಷ್ಟಿ, ಅವಧೂತನ ಅಂತರಂಗ ಭಾಗ 1 ಮತ್ತು ಅವಧೂತನ ಅಂತರಂಗ ಭಾಗ 2, ವಚನವೇದ, ಗುರುವಚನಾಮೃತ, ಅನುಭವಾಮೃತೊ (ತುಳು), ಅನುಭವಾಮೃತ. ಹೀಗೆ ಮಕ್ಕಳ ಕವನಗಳಿಂದ ತೊಡಗಿ, ಕವನ ಸಂಕಲನ, ಆಧ್ಯಾತ್ಮ, ಧಾರ್ಮಿಕ ಸಹಿತ 19 ಕೃತಿಗಳು ಪ್ರಕಟವಾಗಿವೆ.

ಅನುವಾದಿತ ಕೃತಿಗಳು 2, ವ್ಯಕ್ತಿಚಿತ್ರಗಳು 2:
ಎರಡು ಕೃತಿಗಳಾದ ಗುರೂಜಿ ಮತ್ತು ಶ್ಯಾಮಲಾ ದಂಡಕ ಅನುವಾದಿತ ಕೃತಿಗಳು. ಸಾಹಸಿ –ಸಾಧಕ ಮತ್ತು ಪುನರೂರು ಯಶೋಗಾನ ವ್ಯಕ್ತಿಚಿತ್ರಗಳು.

ಸಂಪಾದಿತ ಕೃತಿಗಳು 3:
ಯಕ್ಷಶಾಂತಲಾ, ಯಕ್ಷವಲ್ಲರಿ, ಬಣ್ಣ ಬಣ್ಣದ ಹೂವುಗಳು ಇವರ ಸಂಪಾದಿತ ಕೃತಿಗಳು.
ಅಪ್ರಕಟಿತ ನಾಟಕಗಳು: ಮುಳಿಯ ಶಂಕರ ಭಟ್ಟರು ಈಗಲೂ ಕೃತಿರಚನೆಯಲ್ಲಿ ತೊಡಗಿಸಿಕೊಂಡವರು. ಅವರ ಹಲವು ಕೃತಿಗಳು ಪ್ರಕಟಣೆಗೆ ಬಾಕಿ ಉಳಿಸಿವೆ. ಅವರೇ ಹೇಳುವಂತೆ 6 ಪೌರಾಣಿಕ, 4 ತುಳು ನಾಟಕಗಳು, 12 ನೃತ್ಯರೂಪಕಗಳು , 4 ಕಿರುಕಾವ್ಯ ಕೃತಿಗಳು ಪ್ರಕಟಣೆಗೆ ಬಾಕಿ ಉಳಿದಿವೆ.

ಎಳೆಯರ ಗೆಳೆಯ ಹೆಸರಲ್ಲಿ ಪ್ರಸಿದ್ಧ:
ಮುಳಿಯ ಶಂಕರ ಭಟ್ ಯಾರು ಎಂದು ಫಕ್ಕನೆ ಯಾರಿಗೂ ಗೊತ್ತಾಗಲಿಕ್ಕಿಲ್ಲ. ಆದರೆ, ಎಳೆಯರ ಗೆಳೆಯ ಮುಳಿಯ ಯಾರು ಎಂದು ಕೇಳಿದರೆ ಎಲ್ಲರೂ ನಾನವರ ಕೃತಿ ಓದಿದ್ದೇನೆ ಎನ್ನುತ್ತಾರೆ. ಶ್ರೀಮುಳಿಯ ರಜತಾದ್ರಿ, ಗೌರೀಶಂಕರ, ಗುರುಶರಣ ರಜತಾದ್ರಿ, ಎಳೆಯರ ಗೆಳೆಯ ಮುಳಿಯ, ನಾಗಭೂಷಣ, ಶ್ರೀಶೈಲ, ರಜತಾದ್ರಿವಾಸ, ಮಂಕ, ಬೆಳ್ಳಿಬೆಟ್ಟ ಕಾವ್ಯನಾಮಗಳ ಮೂಲಕ ಅವರು ಕವನ, ಅಂಕಣ ಬರೆಹಗಳನ್ನು ಬರೆಯುತ್ತಿದ್ದಾರೆ.

ಪ್ರಶಸ್ತಿ, ಸನ್ಮಾನ, ಗೌರವಗಳು:
2002ರಲ್ಲಿ ಪುತ್ತೂರಿನಲ್ಲಿ ನಡೆದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ಅವರು, ಒಡಿಯೂರಿನಲ್ಲಿ 2006ರಲ್ಲಿ ನಡೆದ ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದರು. 2021ರಲ್ಲಿ ಮಂಚಿಯಲ್ಲಿ ನಡೆದ ತಾಲೂಕು ಗಮಕ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು, ಅಳಕೆಯಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.

1998ರಲ್ಲಿ ಒಡಿಯೂರಿನಲ್ಲಿ ಕಾವ್ಯಕಲಾವಿಶಾರದ ಪ್ರಶಸ್ತಿ, 1999ರಲ್ಲಿ ಕೊಲ್ಯ ಕ್ಷೇತ್ರದಲ್ಲಿ ಸನ್ಮಾನ, 2002ರಲ್ಲಿ ಕಟೀಲಿನಲ್ಲಿ ನಡೆದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ, 2003ರಲ್ಲಿ ಮುಂಬಯಿಯಲ್ಲಿ ನಡೆದ ಹೊರನಾಡ ಕನ್ನಡಿಗ ಸನ್ಮಾನ, 2003ರಲ್ಲಿ ಮೂಡುಬಿದಿರೆ ನುಡಿಸಿರಿಯಲ್ಲಿ ಸನ್ಮಾನ, ನಂದಾವರದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ, ಮಂಜೇಶ್ವರದಲ್ಲಿ ನಡೆದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಗೌರವ, 2011ರಲ್ಲಿ ಬೆಂಗಳೂರು ಬಸವ ಸಮಿತಿ ವತಿಯಿಂದ ರಾಜ್ಯಮಟ್ಟದ ಕವಿ ಪ್ರಶಂಸಾಪತ್ರ, 2015ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ, 2015ರಲ್ಲಿ ತುಳು ಸಾಹಿತ್ಯ ಸಮ್ಮೇಳನದಲ್ಲಿ ತುಳುಸಿರಿ ಪ್ರಶಸ್ತಿ, 2016ರಲ್ಲಿ ಪೆರಡಾಲದಲ್ಲಿ ನಡೆದ ತುಳುವೆರ ಆಯನೊದಲ್ಲಿ ಸನ್ಮಾನ, 2015ರಲ್ಲಿ ಬೆಂಗಳೂರಲ್ಲಿ ನಡೆದ ಅಖಿಲ ಕರ್ನಾಟಕ ಗಮಕ ಸಮ್ಮೇಳನದಲ್ಲಿ ಸನ್ಮಾನ, 2019ರಲ್ಲಿ ಯಕ್ಷ ಕೌಸ್ತುಭ ಪ್ರಶಸ್ತಿ ಸಹಿತ ಸುಮಾರು 14ರಷ್ಟು ಪ್ರಶಸ್ತಿ, ಸನ್ಮಾನಗಳು ಸಂದಿವೆ.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!