ಬಿಗ್ ನ್ಯೂಸ್
Puttur-ಸಿಎಂ ಬಾರದಿದ್ದರೂ ಬಂದಿದ್ದಾರೆ ಎಂದು ಗುತ್ತಿಗೆದಾರ ಹಂಝನಿಗೆ ಬಿಲ್ ಪಾಸ್ !; ಅನುಮಾನ ಮೂಡಿಸಿದ ಬಿಜೆಪಿ ಆಡಳಿತದ ಪುತ್ತೂರು ನಗರಸಭೆಯ ಸಾಮಾನ್ಯ ಸಭೆಯ ಅನುಮೋದನೆ
ಮುಖ್ಯಮಂತ್ರಿ ಭೇಟಿ ನೀಡದಿದ್ದರೂ, ಪುತ್ತೂರಿನಲ್ಲಿ ನಗರೋತ್ಥಾನ ಕಾಮಗಾರಿಗಳ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಬಂದಿದ್ದರು ಮತ್ತು ಅವರ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ನಗರದ 4 ರಸ್ತೆಗಳನ್ನು ದುರಸ್ತಿ ಮಾಡಲಾಗಿದೆ ಎಂದು ತೋರಿಸಿ 50 ಸಾವಿರ ರೂ. ಬಿಲ್ ಮಾಡುವ ಕೆಲಸವೊಂದು ಪುತ್ತೂರು ನಗರಸಭೆಯಿಂದ ನಡೆದಿದೆ. ಈ ಬಿಲ್ ಅನ್ನು ಶುಕ್ರವಾರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಜೆಂಡಾವಿಟ್ಟು ಅನುಮೋದನೆಗೆ ಇಡಲಾಗಿದ್ದು, ಇದಕ್ಕೆ ಆಡಳಿತ ಪಕ್ಷ ಹಾಗೂ ವಿಪಕ್ಷದ ನಾಯಕರು ಆಕ್ಷೇಪ ವ್ಯಕ್ತಪಡಿಸದೆ ಅಚ್ಚರಿ ಮೂಡಿಸಿದ್ದಾರೆ.
ಪುತ್ತೂರು : ನ 16 : ಮುಖ್ಯಮಂತ್ರಿ ಭೇಟಿ ನೀಡದಿದ್ದರೂ, ಪುತ್ತೂರಿನಲ್ಲಿ ನಗರೋತ್ಥಾನ ಕಾಮಗಾರಿಗಳ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಬಂದಿದ್ದರು ಮತ್ತು ಅವರ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ನಗರದ 4 ರಸ್ತೆಗಳನ್ನು ದುರಸ್ತಿ ಮಾಡಲಾಗಿದೆ ಎಂದು ತೋರಿಸಿ 50 ಸಾವಿರ ರೂ. ಬಿಲ್ ಮಾಡುವ ಕೆಲಸವೊಂದು ಪುತ್ತೂರು ನಗರಸಭೆಯಿಂದ ನಡೆದಿದೆ. ಈ ಬಿಲ್ ಅನ್ನು ಶುಕ್ರವಾರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಜೆಂಡಾವಿಟ್ಟು ಅನುಮೋದನೆಗೆ ಇಡಲಾಗಿದ್ದು, ಇದಕ್ಕೆ ಆಡಳಿತ ಪಕ್ಷ ಹಾಗೂ ವಿಪಕ್ಷದ ನಾಯಕರು ಆಕ್ಷೇಪ ವ್ಯಕ್ತಪಡಿಸದೆ ಅಚ್ಚರಿ ಮೂಡಿಸಿದ್ದಾರೆ.
2018ರ ಜ.7ರಂದು ಶಾಸಕಿ ಶಕುಂತಳಾ ಶೆಟ್ಟಿ ಅವಧಿಯಲ್ಲಿ ಕಾಮಗಾರಿಗಳ ಚಾಲನೆಗೆ ಅಂದಿನ ಸಿಎಂ ಸಿದ್ದರಾಮಯ್ಯ ಬಂದಿದ್ದರು. ಆ ಬಳಿಕ ಪುತ್ತೂರಿಗೆ ರಾಜ್ಯದ ಯಾವ ಸಿಎಂ ಇಲ್ಲಿಯವರೆಗೆ ಭೇಟಿ ನೀಡಿರಲಿಲ್ಲ. ಹಾಗಿದ್ದೂ ಸಿ ಎಂ ಭೇಟಿಯ ಹಿನ್ನಲೆಯಲ್ಲಿ ನಗರದ 4 ರಸ್ತೆಗಳನ್ನು ದುರಸ್ತಿ ಮಾಡಲಾಗಿದೆ ಎಂದು ಬರೆದು 50 ಸಾವಿರದ ಬಿಲ್ ಪಾವತಿ ಮಾಡಲಾಗಿದೆ. ಮತ್ತು ಅದನ್ನು ಸಾಮಾನ್ಯ ಸಭೆಯ ಅಜೆಂಡಾದಲ್ಲಿ ನಮೊದಿಸಿ ಸಭೆಯ ಒಪ್ಪಿಗೆ ಪಡೆಯಲಾಗಿದೆ.
ಅಜೆಂಡಾದಲ್ಲಿ ಏನಿತ್ತು?
“ಪುತ್ತೂರಿನಲ್ಲಿ ನಡೆದ ನಗರೋತ್ಥಾನ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಪುತ್ತೂರಿಗೆ ಮುಖ್ಯಮಂತ್ರಿ ಭೇಟಿ ನೀಡಿದ ಸಮಯದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಈ ಕೆಳಗೆ ತಿಳಿಸಿದ ಸ್ಥಳಗಳಲ್ಲಿ ರಸ್ತೆಗಳನ್ನು ದುರಸ್ತಿಪಡಿಸಿದ ಬಗ್ಗೆ ಗುತ್ತಿಗೆದಾರರಾದ ಹಂಝ ಅವರಿಗೆ 50 ಸಾವಿರ ರೂ. ಬಿಲ್ ಮೊತ್ತ ಪಾವತಿಸಲು ಬಾಕಿ ಇದ್ದು, ಅದನ್ನು ನಗರಸಭೆ ನಿಧಿಯಿಂದ ಪಾವತಿಸುವ ಬಗ್ಗೆ ಸಭೆಯ ಅನುಮೋದನೆಗೆ ಮಂಡಿಸಿದೆ” ಎಂದು 1024ನೇ ಅಜೆಂಡಾದಲ್ಲಿ ಬರೆಯಲಾಗಿದೆ.
ಮಾರ್ಕೆಟ್ ರಸ್ತೆ, ಫಿಲೋಮಿನಾ ಕಾಲೇಜು ರಸ್ತೆ, ಪತ್ರಾವೋ ಸರ್ಕಲ್ ಬಳಿ, ಬಪ್ಪಳಿಗೆ ಜೈನ ಭವನದ ಬಳಿ 4 ಕಡೆ ರಸ್ತೆ ದುರಸ್ತಿ ಮಾಡಿ 50 ಸಾವಿರ ಬಿಲ್ ಪಾವತಿಸಲು ಸಿಎಂ ಕಾರ್ಯಕ್ರಮದ ಉಲ್ಲೇಖ ಮಾಡಲಾಗಿದೆ. ಇನ್ನು ಕಾಮಗಾರಿ ನಡೆದ ದಿನಾಂಕವನ್ನೂ ಕೂಡ ಅಜೆಂಡಾದಲ್ಲಿ ನಮೂದಿಸಿಲ್ಲ..!
.ವಿಷಯ ನಿರ್ವಾಹಕರು ಈ ಅಜೆಂಡಾ ಓದಿದ್ದು ಸಭೆಯಲ್ಲಿ ಹಾಜರಿದ್ದ ಯಾವ ಸದಸ್ಯರು ಕೂಡ ಮುಖ್ಯಮಂತ್ರಿ ಯಾವಾಗ ಪುತ್ತೂರಿಗೆ ಬಂದಿದ್ದು ಎಂದು ಪ್ರಶ್ನಿಸಲಿಲ್ಲ. ಚರ್ಚೆಯೇ ಇಲ್ಲದೆ ಅಜೆಂಡಾ ಅನುಮೋದನೆ ಪಡೆಯಿತು !
ಭ್ರಷ್ಟಚಾರದ ವಾಸನೆ
ಈ ವಿಷಯ ಬಹಿರಂಗವಾಗುತ್ತಲೇ ಸಾರ್ವಜನಿಕ ವಲಯದಲ್ಲಿ ತರಹವೇರಿ ಅನುಮಾನಗಳ ಸೃಷ್ಟಿಯಾಗಿದೆ. ಪುತ್ತೂರು ನಗರಸಭೆ ಭ್ರಷ್ಟಚಾರದಲ್ಲಿ ತೊಡಗಿಸಿಕೊಂಡಿದೆಯೆ, ಹಣ ಲಪಟಾಯಿಸುವ ಉದ್ದೇಶದಿಂದ ನಕಲಿ ಬಿಲ್ ತಯಾರಿಸುತ್ತಿದ್ದೇಯೆ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಸಿಎಂ ಬಾರದೇ ಇರುವ ಕಾರ್ಯಕ್ರಮಕ್ಕೆ ಬಿಲ್ ತಯಾರಿಸುವುದರಿಂದ ಉದ್ದೇಶಪೂರ್ವಕವಾಗಿ ದಿನಾಂಕ ನಮೊದಿಸಿಲ್ಲ ಎಂಬ ಆರೋಪ ಇದೀಗ ಕೇಳಿ ಬಂದಿದೆ
ಈ ಹಿಂದೆಯೂ ಹಲವು ಆರೋಪ
ಕೆಲ ವರ್ಷಗಳ ಹಿಂದೆ ಜಲ ಸಿರಿ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ನಗರ ಸಭೆಯ ಸದಸ್ಯರೊಬ್ಬರು ಸಾಮಾನ್ಯ ಸಭೆಯಲ್ಲಿ ಖುಲ್ಲಾಂಖುಲ್ಲಾ ಆರೋಪ ಮಾಡಿದರು. ಕೆಲ ಸಮಯದ ಬಳಿಕ ಅವರಿಗೆ ಅಯಕಟ್ಟಿನ ಹುದ್ದೆ ಸಿಕ್ಕಿದ್ದು ಬಳಿಕ ಇವರೆಗೆ ಅವರು ಈ ಆರೋಪದ ಬಗ್ಗೆ ಸೊಲ್ಲೆತ್ತಿಲ್ಲ.
ನಗರ ಸಭೆಯು ಲಕ್ಷಾಂತರ ಮೌಲ್ಯದ ಹಲವು ಬಿಲ್ ಗಳನ್ನು ಪಾಸ್ ಮಾಡಿದ್ದು ಆದರೇ ಆ ಕಾಮಾಗರಿಗಳು ನಡೆದಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪುರಾವೆ ಸಮೇತ ಹಾಕಿದ್ದರು. ನಗರ ಸಭೆ ವ್ಯಾಪ್ತಿಯ ಪಾರ್ಕ್ವೊಂದರಲ್ಲಿ ನಡೆದ ಕಾಮಾಗರಿಗಳ ಬಗ್ಗೆ , ಹೈ ಮಾಸ್ಕ್ ಬೀದಿ ದೀಪ ಕಾಮಗಾರಿ ಬಗ್ಗೆ ಹಾಗೂ ಕೆಲ ರಸ್ತೆ ಕಾಮಗಾರಿಗಳ ಬಗ್ಗೆ ಅವರು ಪ್ರಶ್ನಿಸಿದ್ದರು. ಒಮ್ಮೆ ಮಾಡಿದ ಕಾಮಾಗಾರಿಗೆ ಎರೆಡರಡು ಬಾರಿ ಬಿಲ್ ಪಾಸ್ ಮಾಡಿದನ್ನು ಸಾಕ್ಷಿ ಸಮೇತ ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು. ಆ ವೇಳೆ ಅವರನ್ನು ಬೆದರಿಸುವ ಪ್ರಯತ್ನ ಕೆಲವರಿಂದ ಆಯಿತೆ ಹೊರತು ತನಿಖೆ ನಡೆಯಲಿಲ್ಲ. ಸಾರ್ವಜನಿಕರಿಂದ ಒತ್ತಡ ಹೆಚ್ಚಿದಾಗ ಒಂದೆರಡು ಕಾಮಾಗರಿಗಳನ್ನು ಹಿಂತೆಗೆದುಕೊಳ್ಳಲಾಯಿತು.
ಹೋಗಲಿ ಎಲ್ಲಾ ಅದುವೆ..
ಸಾಮಾನ್ಯ ಸಭೆಯಲ್ಲಿ ವಿಷಯ ಸೂಚಿಯನ್ನು ಓದುವ ಸಂದರ್ಭ, ಅದರ ಚರ್ಚೆ ಬಯಸದ ಹಿರಿಯ ನಗರಸಭೆ ಸದಸ್ಯರೊಬ್ಬರು ಹೋಗಲಿ ಎಲ್ಲಾ ಅದುವೆ ಅಲ್ಲಾ ಎಂದು ಆದೇಶಿಸುತ್ತಿದ್ದರು. ಅಜೆಂಡಾದಲ್ಲಿರುವ ಎಲ್ಲ ಸೂಚಿಗಳನ್ನು ಓದದಂತೆ ನಿರ್ದೇಶಿಸಿದ ಆ ಸದಸ್ಯರು ಯಾವ ಯಾವ ಅಜೆಂಡಾಗಳನ್ನು ಓದಬೇಕೇಂದು ವಿಷಯ ನಿರ್ವಾಹಕರಿಗೆ ಸೂಚಿಸುತ್ತಿದ್ದರು. ಇದನ್ನು ವಿಷಯ ವಿಷಯ ನಿರ್ವಾಹಕರು ಚಾಚೂ ತಪ್ಪದೇ ಪಾಲಿಸಿದ್ದು ಸಭೆಯ ಪ್ರಮುಖಾಂಶವಾಗಿತ್ತು.
ಇದನ್ನು ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಇತರೆ ಅಧಿಕಾರಿಗಳು ಮೌನವಾಗಿ ನೋಡಿಕೊಂಡು ಕೂತಿದ್ದರು. ಆಡಳಿತ ಪಕ್ಷದ ಸದಸ್ಯರ ಸಭೆಯ ಮಾರ್ಗದರ್ಶನಕ್ಕೆ ವಿರೋಧ ಪಕ್ಷದ ಸದಸ್ಯರೂ ತಲೆಯಾಡಿಸುತ್ತಿದ್ದುದು ಅಚ್ಚರಿ ಮೂಡಿಸಿದೆ.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized22 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ20 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು16 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















