Uncategorized
Dead Body Brought in pickup: ಕೆಲಸದ ವೇಳೆ ಮೃತಪಟ್ಟ ಕಾರ್ಮಿಕನ ಶವವನ್ನು ಪಿಕಪ್‌ನಲ್ಲಿ ತಂದು ಮನೆ ಮುಂದಿನ ರಸ್ತೆಯಲ್ಲಿ ಮಲಗಿಸಿ ಹೋದ ಆರೋಪ – ಅಮಾನವೀಯ ಘಟನೆಗೆ ಸಾಕ್ಷಿಯಾದ ಪುತ್ತೂರು – ಎತ್ತ ಸಾಗುತ್ತಿದೆ ಸಮಾಜ ?

ಪುತ್ತೂರು : ನ. 17: ಕೆಲಸಕ್ಕೆ ಬಂದ ವಯೋವೃದ್ದ ವ್ಯಕ್ತಿ ಮೃತಪಟ್ಟ ಸಂದರ್ಭ ಆತನ ಮೃತ ದೇಹವನ್ನು, ಕಾರ್ಮಿಕನ ಮನೆ ಮುಂದಿನ ರಸ್ತೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆಯೊಂದು ಮಾನವೀಯ ಅಂತ:ಕರಣಕ್ಕೆ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ದೂರದ ಉತ್ತರ ಭಾರತದ ರಾಜ್ಯಗಳಲ್ಲಿ ಈ ರೀತಿಯ ಅಮಾನವೀಯ ಘಟನೆಯ ಬಗ್ಗೆ ಓದಿ ತಿಳಿದಿದ್ದ ಪುತ್ತೂರಿನ ಜನತೆ ಈ ಸುದ್ದಿಯಿಂದ ತಲೆ ತಗ್ಗಿಸುವಂತಾಗಿದೆ. ಶವವನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳುವುದು ಭಾರತೀಯ ಸಂಸ್ಕೃತಿ. ಪ್ರಾಣಿ, ಸರಿಸೃಪಗಳ ಶವಕ್ಕೂ ಗೌರವ ಕೂಡುವ ಈ ಮಣ್ಣಿನಲ್ಲಿ ಇದಕ್ಕೆ ವ್ಯತಿರಿಕ್ತವಾಗಿ ನಡೆದ ಘಟನೆ ಸಮಾಜ ಅದ:ಪತನಕ್ಕೆ ಸಾಗುತ್ತಿರುವ ಸಂಕೇತ ಎಂಬ ಮಾತುಗಳು ಈ ಘಟನೆಯ ಬಳಿಕ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಏನಿದು ಪ್ರಕರಣ ?
ಸಿಮೆಂಟ್ ಸಾರಣೆ ಮೇಸ್ತಿ ಜೊತೆ ಸಹಾಯಕರಾಗಿ ಹೋಗುತ್ತಿದ್ದ ಕೂಲಿ ಕಾರ್ಮಿಕ ಶಿವಪ್ಪ (69) ಎಂಬವರ ಮೃತದೇಹವನ್ನು, ಅವರ ಉದ್ಯೋಗದಾತ ಪಿಕಪ್ ವಾಹನದಲ್ಲಿ ತಂದು ಅವರ ಮನೆ ಸಮೀಪದ ರಸ್ತೆ ಬಳಿ ಮಲಗಿಸಿ ಹೋಗಿದ್ದಾರೆ ಎನ್ನಲಾಗಿದೆ. ಘಟನೆಯೂ ನ 16 ರಂದು ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಕೆರೆಮೂಲೆ ಎಂಬಲ್ಲಿ ನಡೆದಿದೆ.
ನ.16ರಂದು ಬೆಳಿಗ್ಗೆ ಪರಿಶಿಷ್ಟ ಜಾತಿಗೆ ಸೇರಿದ ಶಿವಪ್ಪರವರನ್ನು ಸಾಲ್ಮರ ತಾವೋ ಇಂಡಸ್ಟ್ರೀಸ್‌ನ ಹೆನ್ರಿ ತಾವೋ ಎಂಬವರು ಕೆಲಸಕ್ಕೆಂದು ಪಿಕಪ್ ವಾಹನದಲ್ಲಿ ಕರೆದೊಯ್ಯಿದಿದ್ದರು ಎಂದು ಶಿವಪ್ಪರವರ ಪುತ್ರಿ ಉಷಾ ತಿಳಿಸಿದ್ದಾರೆ. ಕೆಲಸಕ್ಕೆ ಹೋಗುವಾಗ ಆರೋಗ್ಯದಿಂದ ಇದ್ದ ಅವರು ಕೆಲಸದ ಅವಧಿಯಲ್ಲಿ ಮೃತಪಟ್ಟಿರುವುದು ಸಂಶಯ ಮೂಡಿಸಿದೆ ಎಂದು ತಿಳಿಸಿದ್ದಾರೆ.
ನ. 16 ರಂದು ಮಧ್ಯಾಹ್ನ ಉಷಾ ಹಾಗೂ ಶಿವಪ್ಪರ ಪತ್ನಿ ಮನೆಯಲ್ಲಿದ್ದಾಗ, ಪಿಕಪ್ ವಾಹನದಲ್ಲಿ ಬಂದವರು ಶಿವಪ್ಪರವರನ್ನು ಕರೆದುಕೊಂಡು ಬಂದು ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದಾರೆ. ತಕ್ಷಣ ನಾನು ಹಾಗೂ ತಾಯಿ ರಸ್ತೆ ಬದಿ ಹೋಗಿ ನೋಡಿದಾಗ ತಂದೆ ಮೃತಪಟ್ಟಿದ್ದರು ಎಂದು ಉಷಾರವರು ತಿಳಿಸಿದ್ದಾರೆ.
ಬಳಿಕ ಸ್ಥಳೀಯರ ನೆರವಿನಿಂದ ಮೃತದೇಹವನ್ನು ಮನೆಯೊಳಗಡೆ ತರಲಾಗಿದೆ. ಇದೊಂದು ಅಮಾನವೀಯ ಘಟನೆಯಾಗಿದೆ. ಯಾರದೇ ಆರೋಗ್ಯ ಕೆಟ್ಟರೂ ಅಥಾವ ಮೃತಪಟ್ಟರೆ ಮೊದಲು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಹೊರತು ರಸ್ತೆ ಬದಿಯಲ್ಲಿ ಬಿಟ್ಟು ಹೋಗುವುದಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ತನಿಖೆ
ಮೃತ ಶಿವಪ್ಪರ ಮನೆಗೆ ಠಾಣೆ ಇನ್ಸ್ʼಪೆಕ್ಟರ್ ಜಾನ್ಸನ್ ಡಿ ಸೋಜಾ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಂಜೆ ವೇಳೆ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ಪಿಕಪ್ ಹಿಂಭಾಗದಲ್ಲಿ ಮಲಗಿಸಿಕೊಂಡು ಬಂದಿದ್ರು !
ಶಿವಪ್ಪ ಅವರನ್ನು ಹೆನ್ರಿ ಅವರು ಪಿಕಪ್ ಹಿಂಭಾಗದಲ್ಲಿ ಮಲಗಿಸಿಕೊಂಡು ಬಂದಿದ್ದು, ಮನೆ ಸಂಪರ್ಕದ ರಸ್ತೆ ಬಳಿಯಲ್ಲೇ ಮೃತದೇಹವನ್ನು ಮಲಗಿಸಿ ಹೋಗಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಅಸೌಖ್ಯಕ್ಕೆ ಒಳಗಾಗಿದ್ದ ಕಾರಣ ಮನೆಗೆ ತಂದು ಬಿಟ್ಟಿದ್ದೇನೆ. ಆಗ ಅವರು ಮೃತಪಟ್ಟಿರಲಿಲ್ಲ ಎಂದು ಹೇನ್ರಿಯವರು ನಮ್ಮಲ್ಲಿ ಹೇಳಿದ್ದಾರೆ. ಆದರೆ ಇದು ಸುಳ್ಳು. ಈ ಸಾವಿನ ಬಗ್ಗೆ ನಮಗೆ ಅನುಮಾನವಿದ್ದು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದೇವೆ. – ಶಶಿ, ಮೃತ ಶಿವಪ್ಪರ ಆಳಿಯ
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ22 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು22 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















