Uncategorized
ಜಾತಿನಿಂದನೆ ಪ್ರಕರಣ : ಖ್ಯಾತ ಕ್ರಿಕೇಟರ್ ಯುವರಾಜ್ ಸಿಂಗ್ ಬಂಧನ
ಚಂಡೀಗಢ: ಮಾಜಿ ಆಟಗಾರ, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಬಳಿಕ ಮಧ್ಯಂತರ ಜಾಮೀನಿನ ಮೇಲೆ ಯುವರಾಜ್ ಸಿಂಗ್ ಅವರನ್ನು ಬಿಡುಗಡೆ ಮಾಡಲಾಗಿದೆ.
2020ರಲ್ಲಿ ಲೈವ್ ವಿಡಿಯೋದಲ್ಲಿ ಜಾತಿನಿಂದನೆ ಮಾಡಿದ ಕಾರಣಕ್ಕಾಗಿ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಗಿದೆ. 2020ರ ಜೂನ್ ನಲ್ಲಿ ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ವಿಡಿಯೋದಲ್ಲಿ ಯುವರಾಜ್ ಸಿಂಗ್ ಅವರು ಮಾತನಾಡುತ್ತಿದ್ದರು. ಈ ವೇಳೆ ಯುಜುವೇಂದ್ರ ಚಾಹಲ್ ಬಗ್ಗೆ ಮಾತನಾಡುವ ಭರದಲ್ಲಿ ಜಾತಿನಿಂದನೆ ಮಾಡುವಂತಹ ಶಬ್ಧವನ್ನು ಬಳಸಿದ್ದರು. ಬಳಿಕ ಇದು ವಿವಾದವಾದಾಗ ಯುವರಾಜ್ ಕ್ಷಮೆ ಕೇಳಿದ್ದರು.
“ನ್ಯಾಯಾಲಯದ ಆದೇಶದಂತೆ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಶನಿವಾರ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಹರಿಯಾಣದ ಹನ್ಸಿಯ ಹಿರಿಯ ಪೊಲೀಸ್ ಅಧಿಕಾರಿ ನಿತಿಕಾ ಗಹ್ಲೌತ್ ತಿಳಿಸಿದರು. ಆದರೆ, ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ರನ್ನು ಬಂಧಿಸಲಾಗಿಲ್ಲ ಎಂದು ಯುವಿ ಅವರ ಪ್ರತಿನಿಧಿ ಶಜ್ಮೀನ್ ಕಾರಾ ಹೇಳಿದ್ದಾರೆ.
ಫೆಬ್ರವರಿಯಲ್ಲಿ ಹರಿಯಾಣದ ದಲಿತ ಕಾರ್ಯಕರ್ತನೊಬ್ಬ ನೀಡಿದ ದೂರಿನ ಮೇರೆಗೆ, ತಾರತಮ್ಯವನ್ನು ನಿಷೇಧಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಆತನನ್ನು ಬಂಧಿಸುವಂತೆ ಕೋರಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
“ಅಕ್ಟೋಬರ್ 6 ರಂದು, ಯುವರಾಜ್ ಸಿಂಗ್ ಅವರನ್ನು ತನಿಖೆಗೆ ಒಳಪಡಿಸಲು ಪೊಲೀಸರಿಗೆ ಸೂಚಿಸಲಾಗಿತ್ತು. ನಿನ್ನೆ ಯುವರಾಜ್ ಸಿಂಗ್ ಹಿಸಾರ್ ನಲ್ಲಿ ಪೊಲೀಸರ ಮುಂದೆ ಶರಣಾದರು, ನಂತರ ಆವನನ್ನು ಎರಡು ಮೂರು ಗಂಟೆಗಳ ಕಾಲ ಪ್ರಶ್ನಿಸಲಾಯಿತು ಮತ್ತು ನಂತರ ಬಂಧಿಸಲಾಯಿತು. ನಂತರ ಅವರನ್ನು ಜಾಮೀನು ಬಾಂಡ್ ಗಳಲ್ಲಿ ಬಿಡುಗಡೆ ಮಾಡಲಾಯಿತು” ಎಂದು ಕಾರ್ಯಕರ್ತ ರಜತ್ ಕಲ್ಸನ್ ಹೇಳಿದ್ದಾರೆ.
2020ರ ಜೂನ್ ನಲ್ಲಿ ಕೋವಿಡ್ ಲಾಕ್ ಡೌನ್ ಕಾರಣದಿಂದಾಗಿ ಯುವರಾಜ್ ಸಿಂಗ್ ಅವರು ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ನಲ್ಲಿ ಲೈವ್ ಸಂಭಾಷಣೆ ನಡೆಸಿದ್ದರು. ಈ ವೇಳೆ ಟೀಂ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬಗ್ಗೆ ಮಾತು ಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಮಿಂಚುವ ಯುಜಿ ಚಾಹಲ್ ರ ಟಿಕ್ ಟಾಕ್ ವಿಡಿಯೋಗಳಿಗೆ ಯುವಿ ಮತ್ತು ರೋಹಿತ್ ತಮಾಷೆ ಮಾಡಿದ್ದರು.
ಆದರೆ ಮಾತಿನ ಭರದಲ್ಲಿ ಯುವರಾಜ್ ಸಿಂಗ್ ಚಾಹಲ್ ಗೆ ಜಾತಿನಿಂದನೆ ಶಬ್ಧವನ್ನು ಬಳಸಿದ್ದರು. ಈ ಲೈವ್ ಕಾರ್ಯಕ್ರಮ ಮುಗಿದ ಬಳಿಕ ದಲಿತ ಹಕ್ಕು ಕಾರ್ಯಕರ್ತರು ಯುವರಾಜ್ ಸಿಂಗ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು8 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್15 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ13 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ14 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ13 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ14 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ7 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ14 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















