Uncategorized
Karkala Naxal encounter ಕಾರ್ಕಳದ ಕಬ್ಬಿನಾಲೆ ಕಾಡಿನಲ್ಲಿ 13 ವರ್ಷಗಳ ಬಳಿಕ ಗುಂಡಿನ ಮೊರೆತ – ಎನ್ ಕೌಂಟರ್ ಗೆ ಮೊಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

ಕಾರ್ಕಳ : ನ 19 13 ವರ್ಷಗಳ ಬಳಿಕ ಕಾರ್ಕಳದ ಕಾಡಿನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಇದರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ನಕ್ಸಲ್ ನಿಗ್ರಹ ದಳ ಕೂಬಿಂಗ್ ನಡೆಸುತ್ತಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ.
ವಾರದ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಡಿನಂಚಿನ ಮನೆಯಲ್ಲಿ ನಕ್ಸಲರು ಬಿಟ್ಟು ಹೋಗಿದ್ದ ಮೂರು ಬಂದೂಕುಗಳು ಪತ್ತೆಯಾಗಿದ್ದವು. ಬಳಿಕ ದಿನಗಳಲ್ಲಿ ಕಾರ್ಕಳದ ಕಾಡುಗಳಲ್ಲಿ ನಕ್ಸಲರ ಓಡಾಟ ನಡೆಸುತ್ತಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ನಿನ್ನೆ (ಸೋಮವಾರ) ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ. ಈ ವೇಳೆ ಪೊಲೀಸರು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ಕಾಳಗದಲ್ಲಿ ನೇತ್ರಾವತಿ ನಕ್ಸಲ್ ತಂಡದ ನೇತ್ರತ್ವ ವಹಿಸಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.
ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ಲೋಕಸಭಾ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅಲ್ಲಿ ಎಎನ್ ಎಫ್ ಕೂಬಿಂಗ್ ಆರಂಭಿಸುತ್ತಿದ್ದಂತೆ ಅವರು ಕಾರ್ಕಳದತ್ತ ಕಾಡಿನ ದಾರಿಯಲ್ಲಿ ಪ್ರಯಾಣಿಸಿದ್ದು ಗೊತ್ತಾಗಿತ್ತು.
ಬಳಿಕ 2-3 ತಿಂಗಳು ಅವರ ಚಲನವಲನದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ . ಆದರೇ ವಾರದ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.
ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನಗಳು ವ್ಯಕ್ತವಾಗಿವೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
-
ಶಿಕ್ಷಣ18 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು18 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್20 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು20 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ19 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಅಪರಾಧ2 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಶಿಕ್ಷಣ18 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಮಂಗಳೂರು1 hour agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















