ಆರೋಗ್ಯ
Almonds-ಚಳಿಗಾಲದಲ್ಲಿ ಬಾದಾಮಿ ಈ ರೀತಿ ಸೇವಿಸುವುದರಿಂದ ಬಾದಾಮಿ ಶಕ್ತಿ ದುಪ್ಪಟ್ಟಾಗುತ್ತದೆ !!
ಬಾದಾಮಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೂಳೆಗಳ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ಪ್ರತಿಯೊಬ್ಬರೂ ಪ್ರತಿದಿನ ಬಾದಾಮಿಯನ್ನು ಸೇವಿಸಬೇಕು. ನಾವೆಲ್ಲರೂ ಸಾಮಾನ್ಯವಾಗಿ ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು, ಅಥವಾ ಹಸಿಯಾಗಿಯೇ ತಿನ್ನುತ್ತೇವೆ. ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನೋದ್ರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು ಎನ್ನಲಾಗುತ್ತದೆ.
ಬಾದಾಮಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೂಳೆಗಳ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ಪ್ರತಿಯೊಬ್ಬರೂ ಪ್ರತಿದಿನ ಬಾದಾಮಿಯನ್ನು ಸೇವಿಸಬೇಕು. ನಾವೆಲ್ಲರೂ ಸಾಮಾನ್ಯವಾಗಿ ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು, ಅಥವಾ ಹಸಿಯಾಗಿಯೇ ತಿನ್ನುತ್ತೇವೆ. ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನೋದ್ರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು ಎನ್ನಲಾಗುತ್ತದೆ.
ಆದರೆ ಚಳಿಗಾಲದಲ್ಲಿ ಬಾದಾಮಿಯನ್ನು ಹಸಿಯಾಗಿ ಅಥವಾ ನೀರಿನಲ್ಲಿ ನೆನೆಸಿಟ್ಟು ತಿನ್ನಬಾರದು ಎನ್ನುತ್ತಾರೆ ಪೌಷ್ಟಿಕ ತಜ್ಞರು. ಹಾಗಾದ್ರೆ ಬಾದಾಮಿಯನ್ನು ಯಾವ ರೀತಿ ತಿನ್ನಬೇಕು ಎನ್ನುವುದನ್ನು ತಿಳಿಯೋಣ.
ಬಾದಾಮಿಯಲ್ಲಿರುವ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳು ಮೆದುಳನ್ನು ಚುರುಕುಗೊಳಿಸುತ್ತವೆ. ಅದರ ಮೊನೊಸಾಚುರೇಟೆಡ್ ಕೊಬ್ಬುಗಳು, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.
ಬಾದಾಮಿಯಲ್ಲಿರುವ ಫೈಬರ್ ಮತ್ತು ಪ್ರೋಟೀನ್ ತೂಕವನ್ನು ಕಡಿಮೆ ಮಾಡಲು ಮತ್ತು ದೇಹದ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಅದರ ಖನಿಜಗಳಾದ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕವು ಮೂಳೆಗಳನ್ನು ಬಲಪಡಿಸುತ್ತದೆ, ಬಾದಾಮಿಯಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ.
ಬಾದಾಮಿಯಲ್ಲಿ ಕಾರ್ಬೋಹೈಡ್ರೇಟ್‌ಗಳು ಕಡಿಮೆ ಇದ್ದು ಹೆಚ್ಚಿನ ಫೈಬರ್, ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬಿನಿಂದ ಕೂಡಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರ ಫೈಬರ್ ಗುಣಲಕ್ಷಣಗಳು ಮಲಬದ್ಧತೆಯಿಂದ ಪರಿಹಾರವನ್ನು ನೀಡುತ್ತದೆ.
ಬಾದಾಮಿ ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ ಮತ್ತು ಕಡಿಮೆ ಸೋಡಿಯಂ ಅನ್ನು ಹೊಂದಿರುತ್ತದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಾದಾಮಿಯ ನಿಯಮಿತ ಸೇವನೆಯು ನಿಮ್ಮ ದೇಹವನ್ನು ಆರೋಗ್ಯಕರವಾಗಿ ಮತ್ತು ಶಕ್ತಿಯುತವಾಗಿರಿಸಲು ಸಹಾಯ ಮಾಡುತ್ತದೆ.
ಚಳಿಗಾಲದಲ್ಲಿ ಬಾದಾಮಿಯನ್ನು ಹೇಗೆ ಸೇವಿಸಬೇಕು ಎಂದು ಪೌಷ್ಟಿಕತಜ್ಞೆ ಶಿಖಾ ಅಗರ್ವಾಲ್ ಶರ್ಮಾ ಅವರು ತಿಳಿಸಿದ್ದಾರೆ. ಇದರಿಂದ ಬಾದಾಮಿ ಶಕ್ತಿ ದುಪ್ಪಟ್ಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಲಘುವಾಗಿ ಹುರಿದ ಅಥವಾ ತಾಜಾ ಬಾದಾಮಿಗಳನ್ನು ಸೇವಿಸಬಹುದು. ಚಳಿಗಾಲದ ಚಳಿಯಲ್ಲಿ ಹಸಿವು ನೀಗಿಸಲು ಮತ್ತು ದೇಹದಲ್ಲಿ ಶಕ್ತಿಯನ್ನು ಕಾಪಾಡಿಕೊಳ್ಳಲು ಇದು ಸಹಕಾರಿ. ಚಳಿಗಾಲದಲ್ಲಿ ಬಾದಾಮಿ ಪುಡಿ ಅಥವಾ ಲಡ್ಡು ಮಾಡಿ ತಿನ್ನಬಹುದು. ಇದು ಆರೋಗ್ಯಕ್ಕೆ ಪ್ರಯೋಜನಕಾರಿ ಮತ್ತು ದೇಹಕ್ಕೆ ಅಗತ್ಯವಾದ ಶಕ್ತಿ ಮತ್ತು ಶಾಖವನ್ನು ಒದಗಿಸುತ್ತದೆ.
ಬಾದಾಮಿಯನ್ನು ಬಿಸಿ ಹಾಲಿಗೆ ಸೇರಿಸಿ ಸೇವಿಸಬಹುದು. ಇದು ಪಾನೀಯದ ರುಚಿಯನ್ನು ಹೆಚ್ಚಿಸುವುದಲ್ಲದೆ, ಬಾದಾಮಿಯ ಪೋಷಕಾಂಶಗಳೊಂದಿಗೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಬಾದಾಮಿ ಹಾಲನ್ನು ಬೆಚ್ಚಗೆ ಸೇವಿಸಿ. ಇದು ದೇಹವನ್ನು ಬೆಚ್ಚಗಾಗಿಸುತ್ತದೆ ಮತ್ತು ಸಾಕಷ್ಟು ವಿಟಮಿನ್ಗಳು ಮತ್ತು ಪ್ರೋಟೀನ್ಗಳನ್ನು ಹೊಂದಿರುತ್ತದೆ. ಅರಿಶಿನ ಮತ್ತು ಸ್ವಲ್ಪ ಸಕ್ಕರೆಯನ್ನು ಬೆರೆಸಿ ನೀವು ಇದನ್ನು ಕುಡಿಯಬಹುದು.
ಪ್ರತಿದಿನ ನಾಲ್ಕೈದು ಬಾದಾಮಿಯನ್ನು ಲಘುವಾಗಿ ಹುರಿದು ತುಪ್ಪ ಮತ್ತು ಜೇನುತುಪ್ಪದೊಂದಿಗೆ ತಿನ್ನಿರಿ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹಕ್ಕೆ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized24 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized12 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು9 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized10 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ11 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ10 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಬಿಗ್ ನ್ಯೂಸ್6 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ನಿಧನ ವಾರ್ತೆ10 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















