Connect with us

ನಿಧನ ವಾರ್ತೆ

Belthangady-ಬೆಳ್ತಂಗಡಿ : ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಳ್ತಂಗಡಿ: ಹಿರಿಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget

Ad Widget <> Ad Widget

ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ.



Ad Widget

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿದ್ದರು.

Ad Widget

Ad Widget

ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನಡೆಯಲಿದೆ.

Ad Widget
Click to comment

Leave a Reply

ನಿಧನ ವಾರ್ತೆ

Uppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

Published

on



Ad Widget

Ad Widget

Ad Widget

Ad Widget

ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ ಅಂಗಡಿಗೆ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ, ಅವರ ಬೈಕ್ ಮತ್ತು ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆ ಸೇತುವೆ ಮೇಲೆ ಪತ್ತೆಯಾಗಿತ್ತು.

Ad Widget

Ad Widget <> Ad Widget

ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅ.4ರಂದು ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ದೋಣಿಯ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಮಧ್ಯಾಹ್ನದಿಂದ ಸಂಜೆಯವರೆಗೆ ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.



Ad Widget

ಇದೀಗ ಎರಡು ದಿನಗಳ ಬಳಿಕ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಸಮೀಪ ನೇತ್ರಾವತಿ ನದಿಯಲ್ಲಿ ಮಾಧವ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಅವರ ನಾಪತ್ತೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading

ನಿಧನ ವಾರ್ತೆ

Accident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು

Published

on



Ad Widget

Ad Widget

Ad Widget

Ad Widget

ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget

Ad Widget

ಸುಲ್ತಾನ್‌ಪುರ (ಉತ್ತರ ಪ್ರದೇಶ): ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಯೋಧ್ಯೆ-ಸುಲ್ತಾನ್‌ಪುರ ಗಡಿಯಲ್ಲಿರುವ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 79.6ನೇ ಕಿಲೋಮೀಟರ್ ಬಳಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.

Ad Widget

Ad Widget <> Ad Widget

ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಲಿಯಾ ದುದೈಲಾ ಗ್ರಾಮದ ನಿವಾಸಿ ಸುಬೇದಾರ್ ಮೇಜರ್ ಸತ್ಯವಾನ್ ಅವರು ಚಂಡೀಗಢದಲ್ಲಿ ನಿಯೋಜನೆಗೊಂಡಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದು, ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು.



Ad Widget

ಆಂಬ್ಯುಲೆನ್ಸ್‌ನಲ್ಲಿ ಸತ್ಯವಾನ್ ಅವರ ಮಗ ಗೌರವ್ ಸಿಂಗ್, ಸಹೋದರ ರಾಜನ್ ಚೌಧರಿ, ಸೋದರಳಿಯ ರಾಮ್ ಸಂಜು ಸಿಂಗ್ ಹಾಗೂ ಚಾಲಕ ಜಸ್ಪಾಲ್ ಪ್ರಯಾಣಿಸುತ್ತಿದ್ದರು.

Ad Widget

Ad Widget

ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೌರವ್ ಸಿಂಗ್ ಹಾಗೂ ಚಾಲಕ ಜಸ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ರಾಜನ್ ಚೌಧರಿ ಹಾಗೂ ರಾಮ್ ಸಂಜು ಸಿಂಗ್ ಅವರನ್ನು ಅಯೋಧ್ಯೆಯ ಕುಮಾರ್‌ಗಂಜ್‌ನ ಸಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಪೊಲೀಸ್ ಠಾಣೆ ಆವರಣದಲ್ಲಿ ಯೋಧರ ಪೂರ್ಣ ಗೌರವದೊಂದಿಗೆ ಇರಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವುದರ ಜೊತೆಗೆ ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Lalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

Published

on



Ad Widget

Ad Widget

Ad Widget

Ad Widget

ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಲವು ದಶಕಗಳಿಂದ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಲಲಿತಮ್ಮ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ‘ಅಮ್ಮನ ಮಡಿಲು ಟ್ರಸ್ಟ್’ ಅವರ ನೆರವಿಗೆ ನಿಂತು ಆಸರೆ ನೀಡಿತ್ತು.

Ad Widget

Ad Widget <> Ad Widget

ನಟ ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನಿಮಾದಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಲಲಿತಮ್ಮ ಅವರು ತಮ್ಮ ನೈಜ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈ ಸಿನಿಮಾದ ಪಾತ್ರ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.



Ad Widget

ಬಳಿಕ ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ತಮ್ಮ ವಿಭಿನ್ನ ನಟನಾ ಶೈಲಿಯಿಂದ ಗುರುತಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ‘ರಂಗೋಲಿ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳು ಹಾಗೂ ನಾಟಕಗಳಲ್ಲಿಯೂ ಅಭಿನಯಿಸಿ ಮೆಚ್ಚುಗೆ ಗಳಿಸಿದ್ದರು.

Ad Widget

Ad Widget

ಹಿರಿಯ ನಟಿ ಲಲಿತಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಅಗಲಿಕೆಗೆ ತೀವ್ರ ಕಂಬನಿ ಮಿಡಿದಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading