ಅಂತರ ರಾಜ್ಯ
Non-religious-ತಿರುಪತಿ ದೇವಸ್ಥಾನದ ಆಡಳಿತ ಮಂಡಲಿಯಲ್ಲಿ ಇನ್ನು ಮುಂದೆ ಅನ್ಯಮತೀಯರಿಗಿರೋಲ್ವಾ ಅವಕಾಶ – ಟಿಟಿಡಿ ಅಧ್ಯಕ್ಷರು ಏನಂದ್ರು?
ಕಲಿಯುಗದ ವೈಕುಂಠ ಎಂದೇ ಕರೆಯಲಾಗುವ ತಿರುಪತಿ ಹಿಂದೂಗಳ ಆರಾಧ್ಯ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಪವಿತ್ರ ದೇವಾಲಯದಲ್ಲಿ ಇತರ ಧರ್ಮದ ಜನರು ಕೆಲಸ ಮಾಡುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ.
ಕಲಿಯುಗದ ವೈಕುಂಠ ಎಂದೇ ಕರೆಯಲಾಗುವ ತಿರುಪತಿ ಹಿಂದೂಗಳ ಆರಾಧ್ಯ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಪವಿತ್ರ ದೇವಾಲಯದಲ್ಲಿ ಇತರ ಧರ್ಮದ ಜನರು ಕೆಲಸ ಮಾಡುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ.
ಹಿಂದೂ ಸಂಘಟನೆಗಳು ಅನ್ಯ ಧರ್ಮದವರಿಗೆ ಹಿಂದೂ ದೇಗುಲಗಳಲ್ಲಿ ಉದ್ಯೋಗ ನೀಡಬಾರದು ಹಾಗೂ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿವೆ. ನೂತನ ಟಿಟಿಡಿ ಆಡಳಿತ ಮಂಡಳಿ ಅಧಿಕಾರ ಸ್ವೀಕರಿಸಿದ ಬಳಿಕ ಈ ವಿಚಾರ ಮತ್ತೆ ಬೆಳಕಿಗೆ ಬಂದಿದೆ.
ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಕೂಡ ಮಾಧ್ಯಮಗಳ ಮೂಲಕ ಈ ವಿಷಯದ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.
ತಿರುಪತಿಯಲ್ಲಿ 1000ಕ್ಕೂ ಹೆಚ್ಚು ಅನ್ಯಧರ್ಮೀಯ ನೌಕರರಿದ್ದು, ಇವರಲ್ಲಿ ಕೆಲವರು ಟಿಟಿಡಿಯ ಖಾಯಂ ನೌಕರರು, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಟಿಟಿಡಿ ಮತ್ತು ಪ್ರಸ್ತುತ ಎಪಿ ಸರ್ಕಾರ ತಿರುಮಲದ ಪಾವಿತ್ರ್ಯತೆಯನ್ನು ರಕ್ಷಿಸಲು ಬಲವಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
ಅನ್ಯಧರ್ಮೀಯ ನೌಕರರನ್ನು ಗುರುತಿಸಿ ಕ್ರಮ ಕೈಗೊಳ್ಳಲು 2018ರಲ್ಲಿ ಅಂದಿನ ಸಿಎಸ್ ಎಲ್ ವಿ ಸುಬ್ರಹ್ಮಣ್ಯಂ ಅವರು ಮುಂದಾಗಿದ್ದರು. ಆಗಿನ ದಾಖಲೆಗಳಲ್ಲಿ ದಾಖಲಾಗಿದ್ದ ವಿವರಗಳ ಆಧಾರದ ಮೇಲೆ ಅನ್ಯಧರ್ಮೀಯರೆಂದು ಪರಿಗಣಿಸಲ್ಪಟ್ಟ ನೌಕರರನ್ನು ಗುರುತಿಸಲಾಗಿದೆ.
ಚುನಾವಣೆ ಬಂದು ವೈಎಸ್ ಜಗನ್ ಸಿಎಂ ಆದ ಬಳಿಕ ಈ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಆ ನಂತರ ಸುಬ್ರಹ್ಮಣ್ಯಂ ಅವರನ್ನು ಸಿಎಸ್ ಹುದ್ದೆಯಿಂದ ಕೆಳಗಿಳಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.
ತಿರುಮಲದಲ್ಲಿ ಪೇಗನ್ ಪ್ರಚಾರ ಮತ್ತು ಪೇಗನ್ ಉದ್ಯೋಗಿಗಳ ನೇಮಕಾತಿಯಂತಹ ವಿವಾದಾತ್ಮಕ ಸಮಸ್ಯೆಗಳನ್ನು ಸರಿಯಾಗಿ ಪರಿಹರಿಸುವ ಸಾಧ್ಯತೆಯಿದೆ ಎಂದು ತೋರುತ್ತದೆ. ಎನ್ಡಿಎ ಸರ್ಕಾರವೂ ಈ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಸಿಎಂ ಚಂದ್ರಬಾಬು ಅವರು ಮಾತುಕತೆ ಮೂಲಕ ಕಾನೂನು ಸಮಸ್ಯೆಗಳನ್ನು ಬಗೆಹರಿಸಿ ಅನ್ಯಧರ್ಮೀಯ ನೌಕರರ ವರ್ಗಾವಣೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆಯಂತೆ.
ತಿರುಮಲದ ಅನ್ನಮಯ್ಯ ಭವನದಲ್ಲಿ ಅಧ್ಯಕ್ಷ ಬಿ.ಆರ್.ನಾಯ್ಡು ನೇತೃತ್ವದಲ್ಲಿ ನೂತನವಾಗಿ ರಚನೆಯಾದ ಟಿಟಿಡಿ ಟ್ರಸ್ಟ್ ಬೋರ್ಡ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದ ಕಲಬೆರಕೆ ವಿವಾದದ ನಂತರ ಟಿಟಿಡಿಯ ಮೊದಲ ಸಭೆ ಇದಾಗಿದೆ.
ದೇವಾಲಯದ ಆಡಳಿತದಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುವ ಒಟ್ಟು ಹಿಂದೂಯೇತರರ ಸಂಖ್ಯೆಯನ್ನು ಟಿಟಿಡಿ ಮೌಲ್ಯಮಾಪನ ಮಾಡುತ್ತದೆ. 2018 ರ ವರದಿಯ ಪ್ರಕಾರ, ಟಿಟಿಡಿಯಲ್ಲಿ ಇತರ ಧಾರ್ಮಿಕ ನಂಬಿಕೆಗಳ 44 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ.
ತಿರುಮಲದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ನಾವು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದಿದ್ದಾರೆ.
ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿದ್ದು, ದೇವಸ್ಥಾನದಲ್ಲಿ ಕೆಲಸ ಮಾಡಲು ಹಿಂದೂಯೇತರರನ್ನು ನೇಮಿಸಿಕೊಳ್ಳಬಾರದು ಎಂದು ಮಂಡಳಿ ಅಭಿಪ್ರಾಯಪಟ್ಟಿದೆ. ಅವರನ್ನು ಬೇರೆ ಬೇರೆ ಇಲಾಖೆಗಳಲ್ಲಿ ಸೇರಿಸಿಕೊಳ್ಳಲು ಅಥವಾ ಅವರಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್ಎಸ್) ನೀಡಲು ನಾವು ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ನಾಯ್ಡು ಹೇಳಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ನ ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್ಮೆಂಟ್ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.
ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.
ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.
ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.
ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.
ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.
ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.
ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.
ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.
ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
-
ಅಪರಾಧ19 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್16 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ16 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು17 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ13 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ17 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು18 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ18 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















