ಮಂಗಳೂರು
Naxal Vikram Gowda-ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಗುಂಡೇಟಿಗೆ ಬಲಿ – ಆಂತರಿಕ ಭದ್ರತಾ ಡಿಐಜಿ ರೂಪಾ ನೀಡಿದ್ರು ಮಹತ್ವದ ಹೇಳಿಕೆ
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೆಬ್ರಿಯ ಕಬ್ಬಿನಾಲೆಯ ಪಿತ್ತಬೈಲ್ ಅರಣ್ಯ ಪ್ರದೇಶದಲ್ಲಿ ಪೊಲೀಸರ ಕಾರ್ಯಾಚರಣೆ ವೇಳೆ ಎರಡೂ ಕಡೆ ಗುಂಡಿನ ಚಕಮಕಿಯಾಗಿದ್ದು, ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ಆಂತರಿಕ ಭದ್ರತಾ ಡಿಐಜಿ ರೂಪಾ ಹೇಳಿಕೆಯನ್ನು ನೀಡಿದ್ದಾರೆ.
ಮಂಗಳೂರು : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೆಬ್ರಿಯ ಕಬ್ಬಿನಾಲೆಯ ಪಿತ್ತಬೈಲ್ ಅರಣ್ಯ ಪ್ರದೇಶದಲ್ಲಿ ಪೊಲೀಸರ ಕಾರ್ಯಾಚರಣೆ ವೇಳೆ ಎರಡೂ ಕಡೆ ಗುಂಡಿನ ಚಕಮಕಿಯಾಗಿದ್ದು, ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ಆಂತರಿಕ ಭದ್ರತಾ ಡಿಐಜಿ ರೂಪಾ ಹೇಳಿಕೆಯನ್ನು ನೀಡಿದ್ದಾರೆ.
ವಿಕ್ರಂ ಗೌಡನ ಮೇಲೆ 61 ಕೇಸ್ ಇದ್ದು, 19 ಕೇಸ್ ಕೇರಳದಲ್ಲೇ ಇದೆ. 2005 ರ ಬಳಿಕ ಇದು ನಾಲ್ಕನೇ ಎನ್ ಕೌಂಟರ್. ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಸಾವನ್ನಪ್ಪಿದ್ದು ಇನ್ನೂ ಐದಾರು ಜನ ನಕ್ಸಲ್ಸ್ ಇದ್ದಾರೆ. ಅವರ ರೆಸ್ಪಾನ್ಸ್ ಗೆ ಕಾದು ನೋಡುತ್ತೇವೆ. ನಿರಂತರ ಕೂಂಬಿಂಗ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಹತ್ತು ದಿನಗಳಿಂದ ಕೂಂಬಿಂಗ್ ಮಾಡುತ್ತಿದ್ದೇವೆ. ನ 10ರಿಂದ ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಈ ಕಾರ್ಯಾಚರಣೆಗೆ ಬೆಂಗಳೂರುನಿಂದ 75, ಶಿವಮೊಗ್ಗದಿಂದ 25 ಸಿಬ್ಬಂದಿಗಳು ಬಂದಿದ್ದರು.
ಕಬಿನಿ ದಳಂ 2 ನೇ ತಂಡ ಲೀಡ್ ನ್ನು ವಿಕ್ರಂ ಗೌಡ ಮಾಡುತ್ತಿದ್ದ. ನಾಲ್ಕನೇ ತರಗತಿ ಕಲಿತಿದ್ದ ವಿಕ್ರಂಗೆ 46 ವರ್ಷ ವಯಸ್ಸಾಗಿತ್ತು. ಈತ ಕಾರ್ಕಳ ತಾಲೂಕು ನಿವಾಸಿ.
ಜಿತೇಂದ್ರ ದಯಾಮ, ಎಎನ್ ಎಫ್ ಎಸ್ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು ವಿಕ್ರಂ ನ ಪೋಸ್ಟ್ ಮಾರ್ಟಂ ಕೆಎಂಸಿ ಮಣಿಪಾಲದಲ್ಲಿ ನಡೆಯಲಿದೆ.
ಈಗಾಗಲೇ ಆತನ ಫ್ಯಾಮಿಲಿಗೆ ತಿಳಿಸಿದ್ದೇವೆ ಎಂದು ತಿಳಿಸಿದರು.
ನಕ್ಸಲರ ಶರಣಾಗತಿಗೆ ನಾವು ಮೊದಲ ಆದ್ಯತೆ ನೀಡಿದ್ದೇವೆ. ಆದರೆ ಅವರು ಶರಣಾಗತಿಗೆ ಬಗ್ಗಿಲ್ಲ. ಹಾಗಾಗಿ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಕಬ್ಬಿನಾಲೆಯ ಪಿತ್ತಬೈಲ್ ನಲ್ಲಿ ಆಂತರಿಕ ಭಧ್ರತೆ ಡಿಐಜಿ ರೂಪಾ ಹೇಳಿಕೆ ನೀಡಿದ್ದಾರೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
-
ಬಿಗ್ ನ್ಯೂಸ್21 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು23 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ21 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು22 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ23 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ22 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ4 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















