Connect with us

ಅಂತರ ರಾಜ್ಯ

Manipur violence-ಮಣಿಪುರ ಹಿಂಸಾಚಾರ: ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್.ಪಿ.ಪಿ – 14 ಬಿಜೆಪಿ ಶಾಸಕರು ಗೈರು

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಇಂಫಾಲ: ಮಣಿಪುರ ಹಿಂಸಾಚಾರ ನಿಯಂತ್ರಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಅವರ ವಿರುದ್ಧ ಪಕ್ಷದೊಳಗೆ ಅಸಮಾಧಾನ ಅಪಸ್ವರ ಕೇಳಿ ಬಂದಿದೆ. ಎನ್‌ಪಿಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲು ಸಿಎಂ ಬಿರೇನ್‌ ಸಿಂಗ್‌ ಕರೆದಿದ್ದ ಎನ್‌ಡಿಎ ಶಾಸಕರ ಸಭೆಗೆ ಬಿಜೆಪಿಯ 14 ಶಾಸಕರು ಸೇರಿ 25 ಮಂದಿ ಗೈರು ಹಾಜರಾಗಿದ್ದಾರೆ. 49 ಶಾಸಕರ ಪೈಕಿ ಬಿಜೆಪಿಯ 14 ಶಾಸಕರು ಸೇರಿ 24 ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಕುಕಿ-ಜೋ ಬುಡಕಟ್ಟು ಸಮುದಾಯಕ್ಕೆ ಸೇರಿದ 10 ಬಿಜೆಪಿ ಶಾಸಕರು ಸಿಎಂ ಬಿರೇನ್‌ ಸಿಂಗ್‌ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ಸಭೆಯಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಕುಕಿ ವಿರುದ್ಧ ಕ್ರಮ ಜರುಗಿಸಲು ನಿರ್ಣಯ:
ಜಿರಿಬಾಮ್‌ ಜಿಲ್ಲೆಯಲ್ಲಿ ಮೂವರು ಮಕ್ಕಳು ಸೇರಿ ಆರು ಮಂದಿಯನ್ನು ಅಪಹರಿಸಿ, ಹತ್ಯೆ ಮಾಡಿದ ಕುಕಿ ಬಂಡುಕೋರರ ವಿರುದ್ಧ ಕ್ರಮ ಜರುಗಿಸಲು ಸಿಎಂ ಬಿರೇನ್‌ ಸಿಂಗ್‌ ಕರೆದಿದ್ದ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕುಕಿ ಬಂಡುಕೋರ ಗುಂಪನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಣೆ ಮಾಡುವಂತೆ ಒತ್ತಾಯಿಸಲಾಗಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮರು ಜಾರಿ ಮಾಡಿರುವ ಸೇನಾ ವಿಶೇಷಾಧಿಕಾರಿ ಕಾಯಿದೆ (ಆಫ್‌ಸ್ಪಾ) ಬಗ್ಗೆ ಪುನರ್‌ ಪರಿಶೀಲಿಸುವಂತೆ ಕೇಂದ್ರವನ್ನು ಒತ್ತಾಯಿಸಿ, ನಿರ್ಣಯ ಕೈಗೊಳ್ಳಲಾಗಿದೆ.



Ad Widget

24 ಗಂಟೆ ಗಡುವು ನೀಡಿದ ಸಂಘಟನೆಗಳು:
ಜರಿಬಾಮ್‌ ಜಿಲ್ಲೆಯಲ್ಲಿಮಹಿಳೆಯರು ಹಾಗೂ ಮಕ್ಕಳ ಹತ್ಯೆಯ ವಿರುದ್ಧದ ಪ್ರತಿಭಟನೆ ಹಿಂಸಾಚಾರ ರೂಪಕ್ಕೆ ತಿರುಗಿ ಸಿಎಂ ಬಿರೇನ್‌ ಸಿಂಗ್‌ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಕುಕಿ ಉಗ್ರರು ಹಾಗೂ ಇತರ ದಾಳಿಕೋರರನ್ನು ಹತ್ಯೆಗೈಯಲು 24 ಗಂಟೆಯ ಗಡುವನ್ನು ಸಾಮಾಜಿಕ ಸಂಘಟನೆಗಳು ನೀಡಿವೆ.

Ad Widget

Ad Widget

ಮಣಿಪುರದ ಪ್ರಮುಖ ಸಂಘಟನೆಗಳು (ಮಣಿಪುರ ಸಮಗ್ರತೆಗೆ ಸಮನ್ವಯ ಸಮಿತಿ) ಮಂಗಳವಾರ ಸಭೆ ಸೇರಿದ್ದು, ರಾಜ್ಯ ಸರಕಾರಕ್ಕೆ 24 ಗಂಟೆಗಳ ಗಡುವು ನೀಡಿವೆ. ಇಲ್ಲವಾದಲ್ಲಿ, ಮಣಿಪುರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗುವ ಎಚ್ಚರಿಕೆ ರವಾನಿಸಿವೆ. ಮಣಿಪುರದ ಛುರಾಛಾಂದ್‌ಪುರ ಜಿಲ್ಲೆಯಲ್ಲಿ ಜಾಯಿಂಟ್‌ ಫಿಲಾಂತ್ರಿಫಿಕ್‌ ಸಂಘಟನೆಯು (ಜೆಪಿಒ) ಮಂಗಳವಾರ ಶವಪೆಟ್ಟಿಗೆಗಳನ್ನು ಹೊತ್ತು ಸಾಗುವ ಮೂಲಕ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.

ರಾಷ್ಟ್ರಪತಿಗೆ ಪತ್ರ ಬರೆದ ಖರ್ಗೆ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಮಧ್ಯ ಪ್ರವೇಶಿಸುವಂತೆ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

”ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣ ವಿಫಲವಾಗಿವೆ. ಜನರು ಆಡಳಿತದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಇದುವರೆಗೂ 300ಕ್ಕೂ ಹೆಚ್ಚು ಜೀವಗಳು ಬಲಿಯಾಗಿವೆ. ಸಂವಿಧಾನವನ್ನು ಎತ್ತಿಹಿಡಿಯಲು ನೀವು ಮಧ್ಯಪ್ರವೇಶಿಸಬೇಕು,” ಎಂದು ಎರಡು ಪುಟಗಳ ಪತ್ರದಲ್ಲಿ ಖರ್ಗೆ ಮನವಿಯನ್ನು ಮಾಡಿದ್ದಾರೆ.

Ad Widget

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಅಂತರ ರಾಜ್ಯ

By-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ

Published

on



Ad Widget

Ad Widget

Ad Widget

Ad Widget

ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ ಸೆಳೆದಿದೆ. ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪಶ್ಚಿಮ ಬಂಗಾಳದ ರೇಜಿನಗರ ಮತ್ತು ನಂದಿಗ್ರಾಮ, ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ಹಾಗೂ ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರ ಜತೆಗೆ ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ನಡೆದಿತ್ತು. ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಲವು ಕ್ಷೇತ್ರಗಳಲ್ಲಿ ಫಲಿತಾಂಶದ ಚಿತ್ರಣ ಸ್ಪಷ್ಟವಾಗಿದ್ದರೂ ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಬಾಕಿಯಿದೆ.

Ad Widget

Ad Widget <> Ad Widget

ನಾಗೌನ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರವು ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರದ್ಯುತ್ ಬೊರ್ದೊಲೊಯಿ ಅವರು ಬಿಜೆಪಿ ಅಭ್ಯರ್ಥಿ ಸುರೇಶ್ ಬೋರಾ ವಿರುದ್ಧ 2,12,231 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.



Ad Widget

ಬಳಿಕ ಪ್ರದ್ಯುತ್ ಬೊರ್ದೊಲೊಯಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಿಸ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ನಾಗೌನ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು.

Ad Widget

Ad Widget

ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ಅಭ್ಯರ್ಥಿ ದೇವಶಿಸ್ ಶರ್ಮಾ ಅವರು ಎಐಯುಡಿಎಫ್ ಅಭ್ಯರ್ಥಿ ಬದ್ರುದ್ದೀನ್ ಅಜ್ಮಲ್ ವಿರುದ್ಧ ಸುಮಾರು 1.2 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಬಾಮಣಿ ಬೋರಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿ ಪೈಪೋಟಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ ಸುಮಾರು 1.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಇನ್ನು ರೇಜಿನಗರ ಕ್ಷೇತ್ರದಲ್ಲಿ ಸಖಾರವ್ ಸರ್ಕಾರ್ ಅವರು ಎಜೆಯುಪಿ ಅಭ್ಯರ್ಥಿ ಗೋಲಂ ನಬಿ ಆಜಾದ್ ವಿರುದ್ಧ ಸುಮಾರು 38 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿಯೂ ಮತ ಎಣಿಕೆಯ ಬೆಳವಣಿಗೆಗಳ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.

ತಮಿಳುನಾಡಿನಲ್ಲಿ ಟಿವಿಕೆ ಅಭ್ಯರ್ಥಿಗಳಿಗೆ ಮುನ್ನಡೆ
ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಮಧುರಂಟಕಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಮರಗತಂ ಕುಮಾರವೇಲು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಮಾರು 6 ಸಾವಿರ ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಎಐಎಡಿಎಂಕೆ ಅಭ್ಯರ್ಥಿಯಾಗಿದ್ದ ಅವರು, ನಂತರ ಟಿವಿಕೆ ಸೇರಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಸುಮಾರು 9,600 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯಭಾಮಾ, ಡಿಎಂಕೆ ಅಭ್ಯರ್ಥಿ ಟಿ. ಇಂದಿರಾಣಿ ವಿರುದ್ಧ 16,727 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.

ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವು
ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಆನಂದ್ ಅವರು ಕಾಂಗ್ರೆಸ್ ಅಭ್ಯರ್ಥಿ ಇ. ವಿನಾಯಗಂ ವಿರುದ್ಧ 8,482 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.

ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ತಟ್ಟನಚಾವಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಉಪಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳ ಮೇಲೆ ಇದರ ಪರಿಣಾಮದ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ.

Ad Widget
Continue Reading

ಅಂತರ ರಾಜ್ಯ

Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ

Published

on



Ad Widget

Ad Widget

Ad Widget

Ad Widget

ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.



Ad Widget

ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.

ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading