ಆರೋಗ್ಯ
Water-ತಣ್ಣೀರಿಗೆ ಬಿಸಿ ನೀರು ಬೆರೆಸಿ ಕುಡಿದರೆ ಅಪಾಯ ಪಿಕ್ಸ್! ನೀರನ್ನು ಹೇಗೆ ಕುಡಿಯಬೇಕು? ಇಲ್ಲಿದೆ ಮಾಹಿತಿ
ತಣ್ಣೀರಿಗೆ ಬಿಸಿ ನೀರು ಬೆರೆಸಿ ಕುಡಿಯುವ ಅಭ್ಯಾಸ ನಿಮಗಿದ್ದರೆ ನೀವು ಈ ವಿಷಯಗಳನ್ನು ಖಂಡಿತವಾಗಿ ತಿಳಿದುಕೊಳ್ಳಬೇಕು. ಆಯುರ್ವೇದ ಪ್ರಕಾರ ಬಿಸಿ ನೀರು ಹಾಗೂ ತಣ್ಣೀರನ್ನು ಒಟ್ಟಿಗೆ ಕುಡಿಯಬಾರದು. ತಣ್ಣೀರು ಭಾರವಾಗಿರುತ್ತದೆ ಮತ್ತು ಬಿಸಿನೀರು ಹಗುರವಾಗಿರುತ್ತದೆ. ಇವೆರಡನ್ನು ಬೆರೆಸಿ ಕುಡಿದರೆ ಅಜೀರ್ಣ ಸಮಸ್ಯೆ ಕಾಡುತ್ತದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.
ತಣ್ಣೀರಿಗೆ ಬಿಸಿ ನೀರು ಬೆರೆಸಿ ಕುಡಿಯುವ ಅಭ್ಯಾಸ ನಿಮಗಿದ್ದರೆ ನೀವು ಈ ವಿಷಯಗಳನ್ನು ಖಂಡಿತವಾಗಿ ತಿಳಿದುಕೊಳ್ಳಬೇಕು. ಆಯುರ್ವೇದ ಪ್ರಕಾರ ಬಿಸಿ ನೀರು ಹಾಗೂ ತಣ್ಣೀರನ್ನು ಒಟ್ಟಿಗೆ ಕುಡಿಯಬಾರದು. ತಣ್ಣೀರು ಭಾರವಾಗಿರುತ್ತದೆ ಮತ್ತು ಬಿಸಿನೀರು ಹಗುರವಾಗಿರುತ್ತದೆ. ಇವೆರಡನ್ನು ಬೆರೆಸಿ ಕುಡಿದರೆ ಅಜೀರ್ಣ ಸಮಸ್ಯೆ ಕಾಡುತ್ತದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.
ತಣ್ಣೀರು -ಬಿಸಿನೀರು ಮಿಶ್ರಣವಾದಾಗ ಏನಾಗುತ್ತದೆ?
* ಬಿಸಿನೀರು ಗ್ಯಾಸ್ ಮತ್ತು ಕಫವನ್ನು ಶಮನಗೊಳಿಸುತ್ತದೆ. ಆದರೆ, ತಣ್ಣೀರು ಎರಡನ್ನೂ ಕೆರಳಿಸುತ್ತದೆ ಮತ್ತು ಪಿತ್ತ ದೋಷವನ್ನು ಹೆಚ್ಚಿಸುತ್ತದೆ.
* ಬಿಸಿ ನೀರು ಮತ್ತು ತಣ್ಣೀರಿನ ಮಿಶ್ರಣವು ಜೀರ್ಣಕ್ರಿಯೆಯನ್ನು ದುರ್ಬಲಗೊಳಿಸುತ್ತದೆ ಮತ್ತು ವಾಯು ದೋಷಕ್ಕೆ ಕಾರಣವಾಗುತ್ತದೆ. ಇದಿಷ್ಟೇ ಅಲ್ಲದೆ, ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸುತ್ತದೆ.
* ಕುದಿಯುವ ನೀರು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಆದರೆ, ಫ್ರಿಡ್ಜ್‌ನಲ್ಲಿ ಕುದಿಸದೆ ಇಟ್ಟಿರುವ ನೀರು ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಆದ್ದರಿಂದ ಇವೆರಡನ್ನು ಬೆರೆಸುವುದು ಆರೋಗ್ಯಕ್ಕೆ ಹಾನಿಕರ.
* ಬಿಸಿನೀರು ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ಶುದ್ಧಗೊಳಿಸುತ್ತದೆ. ಆದರೆ, ತಣ್ಣೀರು ಅವುಗಳನ್ನು ಸಂಕುಚಿತಗೊಳಿಸುತ್ತದೆ.
ಮಣ್ಣಿನ ಪಾತ್ರೆಯಲ್ಲಿನ ನೀರು ಆರೋಗ್ಯಕ್ಕೆ ಒಳ್ಳೆಯದು
ಮಣ್ಣಿನ ಪಾತ್ರೆಯಲ್ಲಿನ ನೀರು ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ನೈಸರ್ಗಿಕವಾಗಿ ತಣ್ಣಗಾಗುತ್ತದೆ ಮತ್ತು ನೀರನ್ನು ಶುದ್ಧವಾಗಿಡುತ್ತದೆ. ಇದು ನೀರಿನಲ್ಲಿರುವ ಖನಿಜಗಳನ್ನು ಸಹ ರಕ್ಷಿಸುತ್ತದೆ. ಮಣ್ಣಿನ ಮಡಕೆಗಳು ಸ್ಥಿರ ಮತ್ತು ಮಧ್ಯಮ ತಾಪಮಾನವನ್ನು ನಿರ್ವಹಿಸುತ್ತವೆ. ಹಾಗಾಗಿ ಮಣ್ಣಿನ ಪಾತ್ರೆಯಲ್ಲಿರುವ ನೀರು ದೇಹಕ್ಕೆ ಒಳ್ಳೆಯದು ಎಂದು ಆಯುರ್ವೇದ ತಿಳಿಸುತ್ತದೆ.
ಮಣ್ಣಿನ ಪಾತ್ರೆಯಲ್ಲಿ ಸಂಗ್ರಹವಾಗಿರುವ ನೀರು ಹೆಚ್ಚು ಆಮ್ಲಜನಕಯುಕ್ತವಾಗಿರುತ್ತದೆ. ಅದಕ್ಕಾಗಿಯೇ ಇದು ಬಿಸಿ ವಾತಾವರಣದಲ್ಲಿಯೂ ತಂಪಾಗಿರುತ್ತದೆ. ಈ ನೀರು ನಿಮ್ಮ ಜೀರ್ಣಕ್ರಿಯೆಗೆ ತೊಂದರೆಯಾಗದಂತೆ ಮತ್ತು ಕಫ ದೋಷವನ್ನು ಹೆಚ್ಚಿಸದೆ ನಿಮ್ಮ ದೇಹವನ್ನು ತಂಪಾಗಿಸುತ್ತದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized22 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್16 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು20 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ20 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized20 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ21 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ20 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್21 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















