ಅಂತರ ರಾಜ್ಯ
Rahul Gandhi-ಉದ್ಯಮಿ ಗೌತಮ್ ಅದಾನಿ ವಿರುದ್ದ ಅಮೇರಿಕಾ ಲಂಚ ಮತ್ತು ವಂಚನೆ ಚಾರ್ಜ್ ಶೀಟ್ : ‘ಮೋದಿ ಸರ್ಕಾರ ಅದಾನಿಯನ್ನು ಬಂದಿಸುವುದಿಲ್ಲ, ತನಿಖೆಯನ್ನೂ ನಡೆಸುವುದಿಲ್ಲ ಎನ್ನುವ ಖಾತ್ರಿ ಇದೆ’ ಎಂದ ರಾಹುಲ್ ಗಾಂಧಿ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪ ಕೇಳಿ ಬಂದಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಗುರುವಾರ ಆಗ್ರಹಿಸಿದ್ದಾರೆ.
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪ ಕೇಳಿ ಬಂದಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಗುರುವಾರ ಆಗ್ರಹಿಸಿದ್ದಾರೆ.
ಭಾರತೀಯ ಅಧಿಕಾರಿಗಳಿಗೆ ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ನೀಡಿರುವುದು ಹಾಗೂ ವಂಚಿಸಿರುವ ಆರೋಪ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಅವರ ಮೇಲಿದೆ. ಈ ಸಂಬಂಧ ಅದಾನಿ ಸೇರಿದಂತೆ ಹಲವರ ವಿರುದ್ಧ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಅಮೆರಿಕದ ನ್ಯಾಯಾಲಯ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ರಾಹುಲ್ ಗಾಂಧಿ, ಉದ್ಯಮಿಯು ಭಾರತ ಹಾಗೂ ಅಮೆರಿಕದ ಕಾನೂನುಗಳನ್ನು ಉಲ್ಲಂಘಿಸಿರುವುದು ಇದೀಗ ಸ್ಪಷ್ಟವಾಗಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಜಾರ್ಖಂಡ್ ಹಾಗು ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಡಿದ್ದ ‘ಒಂದಾಗಿದ್ದರೆ ಸುರಕ್ಷಿತರಾಗಿರುತ್ತೀರಿ’ ಎಂಬ ಹೇಳಿಕೆಯನ್ನು ಉಲ್ಲೇಖಿಸಿರುವ ರಾಹುಲ್, ಪ್ರಧಾನಿ ಹಾಗೂ ಉದ್ಯಮಿಯ ಕಾಲೆಳೆದಿದ್ದಾರೆ.
ಅದಾನಿ ಅವರನ್ನು ತಕ್ಷಣವೇ ಬಂಧಿಸಿ ವಿಚಾರಣೆಗೊಳಪಡಿಸಬೇಕು. ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಹಾಗೂ ಅದಾನಿಯನ್ನು ರಕ್ಷಿಸುತ್ತಿರುವ ಮಾಧಬಿ ಪುರಿ ಬುಚ್ ಅವರನ್ನು ಸ್ಥಾನದಿಂದ ವಜಾಗೊಳಿಸಿ, ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
‘ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚಿಸಬೇಕು’ ಎಂದೂ ಹೇಳಿರುವ ರಾಹುಲ್, ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ವಿಚಾರ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.
‘ಮೋದಿ ಸರ್ಕಾರವು ಅದಾನಿ ಅವರನ್ನು ರಕ್ಷಿಸುತ್ತಿದೆ. ಹಾಗಾಗಿ, ಅವರನ್ನು ಭಾರತದಲ್ಲಿ ಬಂಧಿಸುವುದೂ ಇಲ್ಲ, ತನಿಖೆ ನಡೆಸುವುದೂ ಇಲ್ಲ ಎಂಬ ಖಾತ್ರಿ ಇದೆ’ ಎಂದು ಕುಟುಕಿದ್ದಾರೆ.
ಯಾವುದೇ ಪಕ್ಷ ಅಧಿಕಾರಲ್ಲಿ ಇದ್ದರೂ ಸರಿ, ಅದಾನಿ ಸಮೂಹಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳಲ್ಲಿಯೂ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಆರೋಪಗಳಿಗೆ ಸಂಬಂಧಿಸಿದಂತೆ ‘ಅದಾನಿ ಸಮೂಹ’ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಮತ್ತು ಅವರ ಪತಿ ಪಾಲುದಾರಿಕೆ ಹೊಂದಿದ್ದಾರೆ ಎಂದು ಅಮೆರಿಕದ ಶಾರ್ಟ್ ಶೆಲ್ಲರ್ ಕಂಪನಿ ‘ಹಿಂಡೆನ್‌ಬರ್ಗ್’ ಆರೋಪಿಸಿತ್ತು. ಅದಾನಿಯವರು ಮಾರಿಷಸ್ ಮತ್ತು ಇನ್ನಿತರ ದೇಶಗಳಲ್ಲಿ ಹೊಂದಿರುವ ‘ಶೆಲ್ ಕಂಪನಿ’ಗಳ ಬಗ್ಗೆ ತನಿಖೆ ನಡೆಸಲು ಸೆಬಿ ಯಾವುದೇ ಆಸಕ್ತಿ ತೋರದಿರುವುದು ಅಚ್ಚರಿ ಮೂಡಿಸಿದೆ ಎಂದೂ ಹೇಳಿತ್ತು.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಂತರ ರಾಜ್ಯ
By-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.
ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ ಸೆಳೆದಿದೆ. ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.
ಪಶ್ಚಿಮ ಬಂಗಾಳದ ರೇಜಿನಗರ ಮತ್ತು ನಂದಿಗ್ರಾಮ, ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ಹಾಗೂ ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರ ಜತೆಗೆ ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ನಡೆದಿತ್ತು. ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಲವು ಕ್ಷೇತ್ರಗಳಲ್ಲಿ ಫಲಿತಾಂಶದ ಚಿತ್ರಣ ಸ್ಪಷ್ಟವಾಗಿದ್ದರೂ ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಬಾಕಿಯಿದೆ.
ನಾಗೌನ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರವು ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರದ್ಯುತ್ ಬೊರ್ದೊಲೊಯಿ ಅವರು ಬಿಜೆಪಿ ಅಭ್ಯರ್ಥಿ ಸುರೇಶ್ ಬೋರಾ ವಿರುದ್ಧ 2,12,231 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಬಳಿಕ ಪ್ರದ್ಯುತ್ ಬೊರ್ದೊಲೊಯಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಿಸ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ನಾಗೌನ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು.
ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ಅಭ್ಯರ್ಥಿ ದೇವಶಿಸ್ ಶರ್ಮಾ ಅವರು ಎಐಯುಡಿಎಫ್ ಅಭ್ಯರ್ಥಿ ಬದ್ರುದ್ದೀನ್ ಅಜ್ಮಲ್ ವಿರುದ್ಧ ಸುಮಾರು 1.2 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಬಾಮಣಿ ಬೋರಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.
ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿ ಪೈಪೋಟಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ ಸುಮಾರು 1.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.
ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.
ಇನ್ನು ರೇಜಿನಗರ ಕ್ಷೇತ್ರದಲ್ಲಿ ಸಖಾರವ್ ಸರ್ಕಾರ್ ಅವರು ಎಜೆಯುಪಿ ಅಭ್ಯರ್ಥಿ ಗೋಲಂ ನಬಿ ಆಜಾದ್ ವಿರುದ್ಧ ಸುಮಾರು 38 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿಯೂ ಮತ ಎಣಿಕೆಯ ಬೆಳವಣಿಗೆಗಳ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.
ತಮಿಳುನಾಡಿನಲ್ಲಿ ಟಿವಿಕೆ ಅಭ್ಯರ್ಥಿಗಳಿಗೆ ಮುನ್ನಡೆ
ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಮಧುರಂಟಕಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಮರಗತಂ ಕುಮಾರವೇಲು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಮಾರು 6 ಸಾವಿರ ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಎಐಎಡಿಎಂಕೆ ಅಭ್ಯರ್ಥಿಯಾಗಿದ್ದ ಅವರು, ನಂತರ ಟಿವಿಕೆ ಸೇರಿ ಸ್ಪರ್ಧಿಸಿದ್ದರು ಎನ್ನಲಾಗಿದೆ.
ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಸುಮಾರು 9,600 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯಭಾಮಾ, ಡಿಎಂಕೆ ಅಭ್ಯರ್ಥಿ ಟಿ. ಇಂದಿರಾಣಿ ವಿರುದ್ಧ 16,727 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.
ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವು
ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಆನಂದ್ ಅವರು ಕಾಂಗ್ರೆಸ್ ಅಭ್ಯರ್ಥಿ ಇ. ವಿನಾಯಗಂ ವಿರುದ್ಧ 8,482 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.
ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ತಟ್ಟನಚಾವಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.
ಉಪಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳ ಮೇಲೆ ಇದರ ಪರಿಣಾಮದ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
-
ಬಿಗ್ ನ್ಯೂಸ್23 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಶಿಕ್ಷಣ24 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಮಂಗಳೂರು4 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ


















