Connect with us

ಕಾರ್ಯಕ್ರಮಗಳು

Kukke Subramanya-ನ. 26ರಿಂದ ಡಿ.12ರವರೆಗೆ ಕಾರಣಿಕ ಪ್ರಸಿದ್ದ, ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ – ಬ್ರಹ್ಮರಥೋತ್ಸವ – ಕ್ಷೇತ್ರದಲ್ಲಿ ಭರದ ಸಿದ್ದತೆ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ, ನ. 21: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನ. 26ರಿಂದ ಡಿ.12ರವರೆಗೆ ನಡೆಯಲಿರುವ ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರ ಸುರಕ್ಷೆ ಮತ್ತು ಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಳ ಮತ್ತು ದೇವಳದ ಆಡಳಿತಾಧಿಕಾರಿ ಜುಜಿನ್ ಮೊಹಾಪಾತ್ರ ತಿಳಿಸಿದರು. ಉತ್ಸವಕ್ಕಾಗಿ ದೇಗುಲದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಚರ್ಚೆ ನಡೆಯಿತು.

Ad Widget

Ad Widget alt="Ad Widget"/>

Ad Widget

ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯು ನ. 26ರಂದು ಕೊಪ್ಪರಿಗೆ ಏರುವ ಮೂಲಕ ಆರಂಭಗೊಳ್ಳಲಿದೆ. ರಾಜ್ಯ, ಹೊರ ರಾಜ್ಯ, ಹೊರ ದೇಶದ ಭಕ್ತರು ಬರುವುದರಿಂದ ಭಕ್ತರಿಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲು ಯೋಜಿಸಲಾಗಿದೆ ಎಂದು ಶಾಸಕಿ ಹೇಳಿದರು.

Ad Widget

Ad Widget <> Ad Widget

ಜಾತ್ರೆಗೆ ಬೇಕಾದ ಉಪಸಮಿತಿಗಳನ್ನು ರಚಿಸಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೆಲಸಗಳನ್ನು ಶೀಘ್ರವಾಗಿ ನಡೆಸಲಾಗುವುದು. ದೊಡ್ಡ ಪ್ರಮಾಣದಲ್ಲಿ ಬರುವ ಭಕ್ತರಿಗೆ ವಸತಿ ವ್ಯವಸ್ಥೆ ಸಿಗದಿದ್ದಲ್ಲಿ ಮಲಗಲು, ಶೌಚ ಮತ್ತು ಸ್ನಾನಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡುವುದಾಗಿ ಜುಬಿನ್ ಮೊಹಾಪಾತ್ರ ತಿಳಿಸಿದರು.

ದೇವಸ್ಥಾನದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಇಒ ಯೇಸುರಾಜ್, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರ, ತಾ.ಪಂ. ಇಒ ನವೀನ್ ಭಂಡಾರಿ, ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್‌ಬಾಬು, ವೈದ್ಯಾಧಿಕಾರಿ ಡಾ। ತ್ರಿಮೂರ್ತಿ, ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಸುಜಾತ ಕಲ್ಲಾಜಿ, ಮಾಸ್ಟರ್ ಪ್ಯಾನ್ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಎಂ.ಡಿ.ಪವನ್, ಅಚ್ಯುತ ಅಲ್ಕದೆ, ಕೆಎಸ್‌ಆರ್ ಟಿಸಿಯ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು. ಎಂಜಿನಿಯರ್ ಉದಯಕುಮಾರ್ ಸ್ವಾಗತಿಸಿ, ಮಹೇಶ್ ನಿರೂಪಿಸಿ ವಂದಿಸಿದರು.

Ad Widget

Ad Widget

ಕುಣಿತ ಭಜನೆ:
ಲಕ್ಷದೀಪೋತ್ಸವ ದಿನದಂದು ಸಂಜೆ ಗಂಟೆ 6ರಿಂದ 8 ಗಂಟೆ ವರೆಗೆ ಕುಣಿತ ಭಜನೆ ನಡೆಯಲಿದ್ದು, ಈ ಬಾರಿ ರಥಬೀದಿಯಲ್ಲಿ ಮಾತ್ರ ಅವಕಾಶ ಎಂದು ನಿರ್ಧರಿಸಲಾಯಿತು.

ಚಂಪಾಷಷ್ಠಿ ವಿಶೇಷ ಕಾರ್ಯಕ್ರಮಗಳು:
ನ. 26: ಮೂಲ ಮೃತ್ತಿಕಾ ಪ್ರಸಾದ ವಿತರಣೆ
ನ.27: ಕೊಪ್ಪರಿಗೆ ಏರುವುದು
ನ.30: ಲಕ್ಷದೀಪೋತ್ಸವ
ಡಿ.1: ರಾತ್ರಿ ಶೇಷ ವಾಹನೋತ್ಸವ
ಡಿ.2: ಅಶ್ವ ವಾಹನೋತ್ಸವ
ಡಿ. 3: ಮಯೂರ ವಾಹನೋತ್ಸವ
ಡಿ.4: ರಾತ್ರಿ ಶೇಷ ವಾಹನೋತ್ಸವ
ಡಿ.5: ರಾತ್ರಿ ಹೂವಿನ ತೇರಿನ ಉತ್ಸವ
ಡಿ.6: ರಾತ್ರಿ ಪಂಚಮಿ ರಥೋತ್ಸವ
ಡಿ. 7: ಪ್ರಾತಃಕಾಲ ಚಂಪಾಷಷ್ಠಿ
ಡಿ.8: ಅವಭೃಥೋತ್ಸವ, ನೌಕಾ ವಿಹಾರ
ಡಿ. 12: ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರು ಬಂಡಿ ಉತ್ಸವ, ದೈವಗಳ ನಡಾವಳಿ,

ಎಡೆಸ್ನಾನ, ಬೀದಿ ಉರುಳು ಸೇವೆಗೆ ಅವಕಾಶ
ಲಕ್ಷದೀಪೊತ್ಸವ ಬಳಿಕ ಆರಂಭಗೊಳ್ಳುವ ಬೀದಿ ಉರುಳು ಸೇವೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಮಾರ್ಗದರ್ಶನ ನೀಡಲು ಸಿಬಂದಿ ನಿಯೋಜನೆ, ಬೀದಿಯನ್ನು ನೀರು ಹಾಕಿ ಸ್ವಚ್ಛಮಾಡಲಾಗುವುದು. ಚೌತಿ, ಪಂಚಮಿ, ಷಷ್ಠಿ ದಿನದಂದು ಮಧ್ಯಾಹ್ನ ದೇಗುಲದ ಹೊರಾಂಗಣದಲ್ಲಿ ಭಕ್ತರು ಸ್ವಇಚ್ಛೆಯಿಂದ ನಡೆಸುತ್ತಿರುವ ಎಡೆಸ್ನಾನಕ್ಕೆ ಅವಕಾಶ ನೀಡಲಾಗುತ್ತದೆ

ರಥೋತ್ಸವಕ್ಕೆ ಸೂಕ್ತ ಬಂದೋಬಸ್ತ್
ಪಂಚಮಿ ರಥೋತ್ಸವ ಹಾಗೂ ಬ್ರಹ್ಮರಥೋತ್ಸವ ದಿನಗಳಂದು 290ಕ್ಕೂ ಅಧಿಕ ಪೊಲೀಸ್, 130ಕ್ಕೂ ಅಧಿಕ ಗೃಹ ರಕ್ಷಕ ದಳದ ಸಿಬಂದಿ ನಿಯೋಜಿಸಲಾ ಗುತ್ತದೆ ಎಂದು ಎಸ್‌ಐ ಕಾರ್ತಿಕ್ ಮಾಹಿತಿ ನೀಡಿದರು. ಭಕ್ತರಿಗೆ ಮಾರ್ಗದರ್ಶನ ನೀಡಲು, ಕಳ್ಳತನ-ಅಪರಾಧ ತಡೆ, ಪಾರ್ಕಿಂಗ್‌ ನಿಯಂತ್ರಣಕ್ಕೆ ಪೊಲೀಸರನ್ನು ನಿಯೋಜಿಸಲಾಗುವುದು, ಸಿಸಿ ಕೆಮರಾ ಅಳವಡಿಸಲಾಗುವುದು ಎಂದರು. ಬ್ರಹ್ಮರಥೋತ್ಸವ ಎಳೆಯುವ ಸಂದರ್ಭ ಸೇವೆ ನೀಡುವವರಿಗೆ ಆದ್ಯತೆ ನೀಡುವುದು, ರಥ ಎಳೆಯುವವರನ್ನು ಹೊರತಾಗಿ ಉಳಿದ ಭಕ್ತರನ್ನು ರಥದ ಬಳಿ ಬಾರದಂತೆ ತಡೆಯಲಾಗುವುದು ಎಂದು ಎಸ್ ಐ ವಿವರಿಸಿದರು.

ಪಾರ್ಕಿಂಗ್ ವ್ಯವಸ್ಥೆ
ಪಂಜ, ಕಡಬ ಭಾಗದಿಂದ ಬರುವ ವಾಹನಗಳಿಗೆ ಹೆಲಿಪ್ಯಾಡ್ ಗ್ರೌಂಡ್, ಎಸ್‌ಎಸ್‌ಪಿಯು ಕಾಲೇಜು ಗ್ರೌಂಡ್‌ ಬಳಿ ಪಾರ್ಕಿಂಗ್‌, ದ್ವಿಚಕ್ರ ವಾಹನಗಳಿಗೆ ಕೆಎಸ್ ಎಸ್ ಕಾಲೇಜು ಬಳಿ ಪಾರ್ಕಿಂಗ್ ಹಾಗೂ ಸುಳ್ಯ, ಹರಿಹರ ಭಾಗದಿಂದ ಬರುವ ವಾಹನಗಳನ್ನು ಇಂಜಾಡಿ ಬಳಿ ಪಾರ್ಕಿಂಗ್, ಹೆಚ್ಚುವರಿ ವಾಹನ ದಟ್ಟಣೆ ಉಂಟಾದಲ್ಲಿ 2-3 ಕಡೆಗಳಲ್ಲಿ ಪಾರ್ಕಿಂಗ್ ಪ್ರದೇಶ ಸಿದ್ಧ ಮಾಡಿಟ್ಟುಕೊಳ್ಳಲಾಗುವುದು.

ಹಿರಿಯರಿಗೆ ಉಚಿತ ರಿಕ್ಷಾ ವ್ಯವಸ್ಥೆ:
55-60 ವರ್ಷ ಮೇಲ್ಪಟ್ಟ ಹಿರಿಯರಿಗೆ ಆಟೋ ರಿಕ್ಷಾ ಮೂಲಕ ದೇಗುಲದ ವರೆಗೆ ಉಚಿತ ಕರೆತರುವ ವ್ಯವಸ್ಥೆ ಕಲ್ಪಿಸಲಾಗುವುದು.

ಸಭೆಯಲ್ಲಿ ಚರ್ಚಿಸಲಾದ ಇತರ ವಿಷಯಗಳು:

  • * ಅಗ್ನಿಶಾಮಕ ವಾಹನ, ಪೊಲೀಸ್ ಸುರಕ್ಷತೆಯೊಂದಿಗೆ ವಿಶಾಲ ಪ್ರದೇಶದಲ್ಲಿ ಅದ್ದೂರಿ ಸುಡುಮದ್ದು ಪ್ರದರ್ಶನ.
  • * ಶುಚಿತ್ವಕ್ಕೆ ಒತ್ತು ನೀಡುವುದು. ನಿರಂತರ ವಿದ್ಯುತ್ ಸರಬರಾಜು
  • * ತಾತ್ಕಾಲಿಕ ಸಂತೆ, ಅಂಗಡಿ ಮಳಿಗೆಗಳ ತೆರೆಯುವ ಬಗ್ಗೆ ಕೃಷಿಮೇಳ ಆಯೋಜನೆ ಬಗ್ಗೆ ಚರ್ಚೆ
  • * ಕುಮಾರಧಾರಾ ಸ್ನಾನ ಘಟ್ಟ ಮತ್ತು ಆದಿ ಸುಬ್ರಹ್ಮಣ್ಯ ಹೊಳೆಯ ಹೂಳೆತ್ತುವ ಬಗ್ಗೆ ಚರ್ಚೆ
Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಸ್ಥಳೀಯ

Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

Ad Widget

Ad Widget <> Ad Widget

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್‌ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್‌. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

Ad Widget

Ad Widget

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!