ಕಾರ್ಯಕ್ರಮಗಳು
Dharmasthala-ಧರ್ಮಸ್ಥಳ : ಶ್ರೀ ಕ್ಷೇತ್ರದಲ್ಲಿ ನ.26 ರಿಂದ 30ರ ವರೆಗೆ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ
ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ 30ರ ವರೆಗೆ ಜರಗಲಿದೆ.
ಬೆಳ್ತಂಗಡಿ, ನ.21: ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ 30ರ ವರೆಗೆ ಜರಗಲಿದೆ.
ನ.26ರಂದು 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಮಾಜಿ ವಿ.ಪ.ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಪ್ರಾರ್ಥನೆ, ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು.
ಅಮೃತವರ್ಷಿಣಿ ಸಭಾಭವನದಲ್ಲಿ ನ.28ರಂದು ಸಂಜೆ 5.30ರಿಂದ 7 ಗಂಟೆ ವರೆಗೆ ನಾಗಸ್ವರ ವಾದನ, 7ರಿಂದ 8ರ ವರೆಗೆ ಸಾತ್ವಿಕ ಸಂಗೀತ, ಬಳಿಕ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ.
ಸರ್ವಧರ್ಮ ಸಮ್ಮೇಳನ:
ನ.29ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಬೆಂಗಳೂರು ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ವಹಿಸುವರು. ಬಳಿಕ ಸಂಶೋಧಕ ಡಾ. ಜಿ.ಬಿ.ಹರೀಶ, ಡಾ. ಜೋಸೆಫ್ ಎನ್.ಎಂ., ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಹಾಗೂ 8.30ರಿಂದ ಭರತನಾಟ್ಯ ನೆರವೇರಲಿದೆ.
ಸಾಹಿತ್ಯ ಸಮ್ಮೇಳನ:
ಅಮೃತವರ್ಷಿಣಿ ಸಭಾಭವನದಲ್ಲಿ ನ.30ರಂದು ಸಂಜೆ 5 ಗಂಟೆಯಿಂದ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನೀ ಡಾ। ರಾ. ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ. ಬಿ.ವಿ.ವಸಂತ ಕುಮಾರ್, ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ರಾತ್ರಿ 8.30ರಿಂದ ಶ್ರೀ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮವಿದೆ.
ವಸ್ತು ಪ್ರದರ್ಶನ ಮಂಟಪ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಪ್ರತಿದಿನ ಸಂಜೆ 6.30ರಿಂದ ರಾತ್ರಿ 11ರ ವರೆಗೆ ಸಾಂಸ್ಕೃತಿಕ-ಸಂಗೀತ ಹಬ್ಬ ನೆರವೇರಲಿದೆ.
ಲಕ್ಷದೀಪೋತ್ಸವ ಉತ್ಸವಗಳು:
ಲಕ್ಷದೀಪೋತ್ಸವ ಪ್ರಯುಕ್ತ ಮಂಜುನಾಥ ಸ್ವಾಮಿಗೆ ನ.26ರಂದು ಹೊಸಕಟ್ಟೆ ಉತ್ಸವ, 27ರಂದು ಕೆರೆ ಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ ಉತ್ಸವ, 30ರಂದು ಗೌರಿಮಾರು ಕಟ್ಟೆ ಉತ್ಸವ (ಲಕ್ಷದೀಪೋತ್ಸವ) ಜರಗಲಿರುವುದು.
ರಾಜ್ಯಮಟ್ಟದ ವಸ್ತುಪ್ರದರ್ಶನ:
ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನ. 26 ರಿಂದ ಡಿ.1ರ ವರೆಗೆ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ನ.26 ರಂದುಬೆಳಗ್ಗೆ 10.30ಕ್ಕೆಎಸ್ ಪಿ ಯತೀಶ್ ಎನ್. ಕಾರ್ಯಕ್ರಮ ಉದ್ಘಾಟಿಸಲಿರುವರು. ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿಕೈಗಾರಿಗಳಿಗೆ ಸಂಬಂಧಿಸಿದ 300ಕ್ಕೂ ಮಿಕ್ಕಿ ಮಳಿಗೆಗಳು ಇರಲಿವೆ.
ಬಸದಿಯಲ್ಲಿ ಸಮವಸರಣ ಪೂಜೆ:
ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ.1ರಂದು ಸಂಜೆ 6.30ರಿಂದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ಈ ವೇಳೆ ಜಿನಗಾನೋತ್ಸವ ನಡೆಯಲಿದೆ. ಹೇಮಾವತಿ ವೀ.ಹೆಗ್ಗಡೆ, ಪ್ರೊ. ಎಸ್. ಪ್ರಭಾಕರ್, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ಸಹಿತ ಸಮಿತಿ, ಸ್ವಾಗತ ಸಮಿತಿ ಪ್ರಮುಖರು ಉಪಸ್ಥಿತರಿರುವರು ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
ಕಾರ್ಯಕ್ರಮಗಳು
Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
ಪುತ್ತೂರು ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಪುತ್ತೂರು: ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.
ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.
ಕಾರ್ಯಕ್ರಮಗಳು
Puttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.
ಪುತ್ತೂರು: ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನ ಅಧ್ಯಕ್ಷ ಜಿ.ಎಲ್. ಬಲರಾಮ ಆಚಾರ್ಯ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಾಗವಹಿಸಲಿದ್ದಾರೆ.
1994ರಲ್ಲಿ ಆರಂಭಗೊಂಡಿರುವ ಪ್ರಾವೀಣ್ ಕ್ಯಾಪಿಟಲ್, ಗ್ರಾಹಕರ ಬೆಂಬಲ ಮತ್ತು ವಿಶ್ವಾಸದೊಂದಿಗೆ ತನ್ನ ಸೇವೆಯನ್ನು ಮುಂದುವರಿಸುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪ್ರಧಾನ ಕಚೇರಿಯನ್ನು ನವೀಕರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
-
ದಕ್ಷಿಣ ಕನ್ನಡ14 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ11 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು6 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ13 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized12 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ12 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಬಿಗ್ ನ್ಯೂಸ್13 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ಮಂಗಳೂರು12 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ



















