ಸ್ಥಳೀಯ
Sauthadka-ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಕೆಗೆ ಖರೀದಿಸಿದ ಜಮೀನಿನಲ್ಲಿ ಅಕ್ರಮ ದೂರು – ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ತಹಶೀಲ್ದಾರ್, ದೇಗುಲದ ಇಒ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ಎಸಿ ಆದೇಶ
ಇತಿಹಾಸ ಪ್ರಸಿದ್ದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಕೆಗಾಗಿ ಖರೀದಿಸಿದ್ದ ಜಮೀನನ್ನು ಖಾಸಗಿ ಟ್ರಸ್ಟ್ಗೆ ಅಕ್ರಮ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಿಯಮಾನುಸಾರ ಪರಿಶೀಲಿಸಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಪುತ್ತೂರು ಸಹಾಯಕ ಆಯುಕ್ತರು ಬೆಳ್ತಂಗಡಿ ತಹಶೀಲ್ದಾರ್, ಸೌತಡ್ಕ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಂಗಳೂರು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಆದೇಶಿಸಿದ್ದಾರೆ.
ನೆಲ್ಯಾಡಿ: ಇತಿಹಾಸ ಪ್ರಸಿದ್ದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಕೆಗಾಗಿ ಖರೀದಿಸಿದ್ದ ಜಮೀನನ್ನು ಖಾಸಗಿ ಟ್ರಸ್ಟ್ಗೆ ಅಕ್ರಮ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಿಯಮಾನುಸಾರ ಪರಿಶೀಲಿಸಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಪುತ್ತೂರು ಸಹಾಯಕ ಆಯುಕ್ತರು ಬೆಳ್ತಂಗಡಿ ತಹಶೀಲ್ದಾರ್, ಸೌತಡ್ಕ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಂಗಳೂರು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಆದೇಶಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಕೆಗಾಗಿ ಜಮೀನನ್ನು ಖೃಈದಿಸಲಾಗಿದ್ದು, ಇದನ್ನು ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಎಂಬ ಖಾಸಗಿ ಟ್ರಸ್ಟ್ ಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ಮಾಡಲಾಗಿದೆ ಎಂದು ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯವರು ದೂರು ನೀಡಿದ್ದರು.
ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇದನ್ನು ರದ್ದುಪಡಿಸಿ ಎಲ್ಲಾ ಆಸ್ತಿಯನ್ನು ಸೌತಡ್ಕಶ್ರೀ ಮಹಾಗಣಹತಿ ದೇವಸ್ಥಾನಕ್ಕೆ ಹಸ್ತಾಂತರಿಸಬೇಕು, ಟ್ರಸ್ಟ್ ಅಸ್ತಿತ್ವಕ್ಕೆ ಬಂದ ಬಳಿಕ ಈ ತನಕದ ಎಲ್ಲಾ ವ್ಯವಹಾರಗಳ ತನಿಖೆ ನಡೆಸಿ ಎಲ್ಲಾ ಆದಾಯಗಳನ್ನು ದೇವಸ್ಥಾನದ ಖಜಾನೆಗೆ ತುಂಬಿಸಬೇಕು ಹಾಗೂ ದೇವಸ್ಥಾನದ ಅಭಿವೃದ್ಧಿಯ ದೃಷ್ಟಿಯಿಂದ ಭಕ್ತರ ಸಹಾಯದಿಂದ ಖರೀದಿಸಲಾಗಿದ್ದ, ವಾಸುದೇವ ಶಬರಾಯ, ರಾಘವ ಕೆ., ಹಾಗೂ ವಿಶ್ವನಾಥ ಕೆ.ಅವರ ಹೆಸರಿನಲ್ಲಿರುವ ಜಾಗವನ್ನು ದೇವಸ್ಥಾನದ ಹೆಸರಿಗೆ ಬರೆಸಲು ಸೂಕ್ತ ಆದೇಶ ಮಾಡುವಂತೆ ದೂರಿನಲ್ಲಿ ಕೋರಲಾಗಿತ್ತು.
ಈ ದೂರಿಗೆ ಸ್ಪಂದಿಸಿರುವ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು, ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯವರು ನೀಡಿದ ದೂರಿನ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕಾನೂನು ಪ್ರಕಾರ ಸೂಕ್ತ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಬೆಳ್ತಂಗಡಿ ತಹಶೀಲ್ದಾರ್, ಸೌತಡ್ಕ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಂಗಳೂರು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಆದೇಶಿಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ10 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು8 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ10 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಮಂಗಳೂರು6 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ9 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ10 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ9 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ11 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?




















