Connect with us

ಕಾರ್ಯಕ್ರಮಗಳು

Ramachandra PU College-ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ ಲ್ಲಿ ಬೃಹತ್ ಆರೋಗ್ಯ ಮೇಳ, ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಸಂಪನ್ನ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ, ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಪ್ರಯುಕ್ತ ಯೆನೆಪೋಯ ವಿಶ್ವವಿದ್ಯಾನಿಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ನ.10, ಆದಿತ್ಯವಾರ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಪೆರ್ನೆಯಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಸಭೆಯ ಅಧ್ಯಕ್ಷತೆಯನ್ನು ಹರೀಶ್ ಭಂಡಾರಿ, ಸಂಚಾಲಕರು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ, ಅಯೋದ್ಯ ನಗರ-ಪೆರ್ನೆ ಇವರು ವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಭೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ ರವರು ಪ್ರಾಸ್ತಾವಿಕ ಮಾತಿನೊಂದಿಗೆ ಎಲ್ಲಾ ಅತಿಥಿಗಳನ್ನು ಮತ್ತು ನೆರೆದಿರುವವರನ್ನು ಸ್ವಾಗತಿಸಿದರು.

Ad Widget

Ad Widget <> Ad Widget

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ತೋಯಜಾಕ್ಷ ಶೆಟ್ಟಿ, ಅಧ್ಯಕ್ಷರು ವ್ಯವಸಾಯ ಸೇವಾ ಸಹಕಾರಿ ಸಂಘ ಪೆರ್ನೆ ಇವರು ಉದ್ಘಾಟಿಸಿದರು. ವಿದ್ಯಾಲಯದ ಪ್ರಾಂಶುಪಾಲರಾದ ಶೇಖರ್ ರೈ ಯವರು ವಿದ್ಯಾ ಸಂಸ್ಥೆಯ ಬಗ್ಗೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಬಗ್ಗೆ ವಿವರಣೆಯನ್ನು ನೀಡಿದರು,ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ, ಕಾರ್ಯದರ್ಶಿ ಸನತ್ ಆಳ್ವ, ಕೋಶಾಧಿಕಾರಿ ಶ್ರೀಮತಿ ಮಮತಾ ಮತ್ತು ಇತರ ಪದಾಧಿಕಾರಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಪದ ಪ್ರಧಾನ ನಡೆಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ತಿಮ್ಮಯ್ಯ ಹೆಚ್ ಆರ್, ಜಿಲ್ಲಾ ಆರೋಗ್ಯ ಅಧಿಕಾರಿ ದ. ಕ ಜಿಲ್ಲೆ ಇವರು ಕಾರ್ಯಕ್ರಮ ದ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ರಕ್ತದಾನದ ಮಹತ್ವ ಮತ್ತು ಸರಕಾರದ ವಿವಿಧ ವೈದ್ಯಕೀಯ ಸೌಲಭ್ಯಗಳ ಬಗ್ಗೆ ನೆರೆದಿರುವವರಿಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ಹನೀಫ್ ಹಾಜಿ ಗೋಳ್ತಮಜಲು, ಅಧ್ಯಕ್ಷರು ಹಿದಾಯ ಫೌಂಡೇಶನ್ ಮಂಗಳೂರು ಇವರು ತಾವು ನಡೆಸುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

Ad Widget

Ad Widget

ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಹಾಗೂ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ ಡಾ.ಮಹಾಲಿಂಗೇಶ್ವರ ಭಟ್, ಧನ್ವಂತರಿ ಆಸ್ಪತ್ರೆ, ಪುತ್ತೂರು ಇವರು ಆರೋಗ್ಯದ ಸಮಸ್ಯೆಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್, ಸಂಚಾಲಕರು ಮಜೀದಿಯಾ ಹಿರಿಯ ಪ್ರಾಥಮಿಕ ಶಾಲೆ, ದೋರ್ಮೆ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ
ಡಾ.ಅಶೋಕ್ ಕುಮಾರ್ ರೈ, ತಾಲೂಕು ಆರೋಗ್ಯ ಅಧಿಕಾರಿ, ಬಂಟ್ವಾಳ ತಾಲೂಕು. ಡಾ.ಶಶಿಕಲಾ, ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ. ರಜಾಕ್, ವಿಸ್ತರಣಾ ಅಧಿಕಾರಿ ಯೆನೆಪೋಯ ವಿಶ್ವವಿದ್ಯಾನಿಲಯ. ಕೇಶವ ರಾಮ್, ವ್ಯವಸ್ಥಾಪಕ ನಿರ್ದೇಶಕರು, COCO ಗುರು, ಪುತ್ತೂರು. ಶ್ರೀಮತಿ ಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ,ದ.ಕ ಜಿಲ್ಲೆ.ಮುಸ್ತಾಫ ಕಡಂಬು, ಉದ್ಯಮಿಗಳು ಅನಿತಾ ಬೀಡಿ,
ಶ್ರೀಮತಿ ಆಯಿಷಾ ಪೆರ್ನೆ, ಆರೋಗ್ಯ ನೈರ್ಮಲ್ಯ ನಿರೀಕ್ಷಕರು, ಮಂಗಳೂರು ವಿಶ್ವವಿದ್ಯಾನಿಲಯ, ಸತ್ಯನಾರಾಯಣ ರೈ, ಮುಖ್ಯ ಗುರುಗಳು, ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ, ಮುಂತಾದವರು ಅತಿಥಿಗಳಾಗಿ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿಗಳಾದ ನಜೀರ್ ಧನ್ಯವಾದ ಸಮರ್ಪಿಸಿ, ಗೌತಮ್ ಕುಕ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಈ ಆರೋಗ್ಯ ಮೇಳದಲ್ಲಿ ವೈದ್ಯಕೀಯ ತಜ್ಞರು,ಶಸ್ತ್ರ ಚಿಕಿತ್ಸಕರು,ಮಕ್ಕಳ ತಜ್ಞರು,ಸ್ತ್ರೀ ರೋಗ ತಜ್ಞರು,ಎಲುಬು ಮತ್ತು ಕೀಲು ತಜ್ಞರು,ಚರ್ಮ ಮತ್ತು ಲೈಂಗಿಕ ತಜ್ಞರು,ಕಿವಿ, ಮೂಗು, ಗಂಟಲು ತಜ್ಞರು,ಕಣ್ಣಿನ ಪರೀಕ್ಷಾ ಕೇಂದ್ರ,ದಂತ ಚಿಕಿತ್ಸಾ ಕೇಂದ್ರ,.ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೇವೆ,ಅಸಾಂಕ್ರಾಮಿಕ ರೋಗ ತಪಾಸಣೆ (NCP Clinic),ಆಯುಷ್ಯ, ಆಯುರ್ವೇದಿಕ್, ಸಿದ್ಧ,ಹೋಮಿಯೋಪತಿ, ಯುನಾನಿ ಔಷದಿ,ಕ್ಷಯರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆ,ಆಪ್ತ ಸಮಾಲೋಚನೆ (ಹದಿಹರೆಯದ ಮಕ್ಕಳಿಗೆ),ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಪಾಸಣೆ ಮತ್ತು “ಮಹಿಳೆಯರಿಗೆ ಅತ್ಯಾಧುನಿಕ ತಂತ್ರಜ್ಞಾನದ Screening test for breast (Mammogram) ಮೊಬೈಲ್ ಕ್ಲಿನಿಕ್ ಬಸ್ಸಿನಲ್ಲಿ ತಪಾಸಣಾ ವ್ಯವಸ್ಥೆ,ಮುಂತಾದ ಎಲ್ಲಾ ಸೌಲಭ್ಯಗಳ ಸೇವೆ ಮತ್ತು ನುರಿತ ವೈದ್ಯರುಗಳಿಂದ ತಪಾಸಣೆ ಮತ್ತು ಸಲಹೆಗಳನ್ನು ನೂರಾರು ಪಡೆದುಕೊಂಡರು.ರಕ್ತದಾನ ಶಿಬಿರದಲ್ಲಿ ಹತ್ತಾರು ಜನ ರಕ್ತದಾನ ಮಾಡಿದರು.

ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು
ಅಧ್ಯಕ್ಷರು — ಮ್ಯಾಕ್ಸಿಮ್ ಲೋಬೊ
ಉಪಾಧ್ಯಕ್ಷರು–ರಾಧಾಕೃಷ್ಣ ಗೌಡ (ASI)
ಲೋಹಿತಾಕ್ಷ ಬರಮೇಲು,
ಸುಚಿತ್ರಾ ನಾಯಕ್ ಶಕ್ತಿನಗರ-ಮಂಗಳೂರು
ಕಾರ್ಯದರ್ಶಿ — ಸನತ್ ಆಳ್ವ ಅಮೈ ಭಂಡಾಸಾಲೆ
ಕೋಶಾಧಿಕಾರಿ– ಶ್ರೀಮತಿ ಮಮತಾ ಟಿ(ಉಪನ್ಯಾಸಕಿ)
ಸಂಘಟನಾ ಕಾರ್ಯದರ್ಶಿ — ಸುರೇಶ್ ಶೆಟ್ಟಿ ದುರ್ಗಿಪಾಲ್
ಮೊಹಮ್ಮದ್ ನಝಿರ್
ಶರತ್ ಶೆಟ್ಟಿ ಅಮೈ
ಮಾಧ್ಯಮ ಸಂಚಾಲಕರು — ವಿಕ್ರಂ ಬಿಳಿಯೂರು
ಅಕ್ಷತ್ ಬಿಳಿಯೂರು
ಕ್ರೀಡಾ ಕಾರ್ಯದರ್ಶಿ — ಸೀತಾರಾಮ ಕಾರ್ಲ
ನಿತಿನ್ ಅತ್ರಬೈಲು
ಸಾಂಸ್ಕೃತಿಕ ಸಂಚಾಲಕರು- ಆಯಿಷಾ.ಪಿ
ಸುನೀಲ್ ನೆಕ್ಕರೆ

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಸ್ಥಳೀಯ

Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

Ad Widget

Ad Widget <> Ad Widget

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್‌ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್‌. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

Ad Widget

Ad Widget

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!