ಶಿಕ್ಷಣ
‘Medha – 2025’-ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ʻಮೇಧಾ – 2025ʼ
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ, ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯುಳ್ಳ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಕೇವಲ ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯವನ್ನು ಒದಗಿಸುತ್ತಾ ಬಂದಿರುವ ನಮ್ಮ ಸಂಸ್ಥೆಯು ಮುಂದಿನ ಶೈಕ್ಷಣಿಕ ವರ್ಷದಿಂದ ಮೇಧಾ – 2025 ಎಂಬ ಶೀರ್ಷಿಕೆಯೊಂದಿಗೆ ಉಚಿತ ಶಿಕ್ಷಣ ಯೋಜನೆಯನ್ನು ಪರಿಚಯಿಸುತ್ತಿದ್ದು, ಪರೀಕ್ಷೆಯೊಂದನ್ನು ನಡೆಸಿ ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೇ. 100 ವಿದ್ಯಾರ್ಥಿವೇತನ ಅರ್ಥಾತ್ ಉಚಿತ ಶಿಕ್ಷಣ ದೊರೆಯಲಿದೆ.

ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ನಡೆಯಲಿದ್ದು, 9 ಹಾಗೂ 10 ನೇ ತರಗತಿಗೆ ಸಂಬಂಧಪಟ್ಟ ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನದ ಆಧಾರದ ಮೇಲೆ 120 ನಿಮಿಷಗಳ ಪರೀಕ್ಷೆ ನಡೆಯಲಿದ್ದು, ಕಲಾ ವಿಭಾಗ, ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.
2024ರ ಡಿಸೆಂಬರ್ 1 ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ 5 ವಿವಿಧ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಲು ನವೆಂಬರ್ 27 ಕೊನೆಯ ದಿನಾಂಕವಾಗಿದೆ. ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು, ತೆಂಕಿಲದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ಕಡಬದ ಆಲಂಕಾರಿನಲ್ಲಿರುವ ಶ್ರೀ ಭಾರತಿ ಪ್ರೌಢಶಾಲೆ, ಸುಳ್ಯದ ಜಾಲ್ಸೂರಿನಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿರುವ ಶ್ರೀ ಭಾರತಿ ವಿದ್ಯಾಪೀಠ ಪರೀಕ್ಷಾ ಕೇಂದ್ರಗಳಾಗಿರಲಿವೆ.
ಹೆಚ್ಚಿನ ಮಾಹಿತಿಗಾಗಿ 9480936010, 8971924424, 8073700468, 8105072386 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಬಿಗ್ ನ್ಯೂಸ್22 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ21 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ16 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ19 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ20 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ19 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ16 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ21 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

















