ಬಿಗ್ ನ್ಯೂಸ್
ಹಿಜಾಬ್ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟಿನ ಜಡ್ಜ್ʼಗಳ ಹತ್ಯೆ ಬೆದರಿಕೆ – ತೌಹೀದ್ ಜಮಾತ್ ಸಂಘಟನೆಯ ಇಬ್ಬರ ಬಂಧನ
ಮದುರೈ/ಬೆಂಗಳೂರು, ಮಾರ್ಚ್ 20: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಿರಪತ್ತೂರು ಜೈಲಿನಲ್ಲಿರಿಸಲಾಗಿದೆ. ತಮಿಳುನಾಡಿನ ತೌಹೀದ್ ಜಮಾತ್ ಸಂಘಟನೆಯ ಮೂವರು ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಹಿಜಾಬ್ ಪ್ರಕರಣದಲ್ಲಿ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿಗೆ ತೌಹೀದ್ ಜಮಾತ್ ಸಂಘಟನೆಯ ಸದಸ್ಯರು ಸಾರ್ವಜನಿಕ ಸಭೆಯಲ್ಲಿ ಬೆದರಿಕೆ ಹಾಕಿದ್ದರು. ಮದುರೈನ ಕೋರಿಪಾಳ್ಯಂನಲ್ಲಿ ಮಾರ್ಚ್ 17ರಂದು ಭಾಷಣ ಮೂಲಕ ಮುಖ್ಯ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಕಾರ್ಯಕರ್ತ ರಹಮತ್ ಉಲ್ಲಾ ಸೇರಿದಂತೆ ಮೂವರು ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಜಾರ್ಖಂಡ್ ಹೈಕೋರ್ಟ್ ನ್ಯಾಯಾಧೀಶರ ಸಾವಿನ ಉದಾಹರಣೆ ಉಲ್ಲೇಖಿಸಿದ ಪದಾಧಿಕಾರಿಯೊಬ್ಬ ಹಿಜಾಬ್ ತೀರ್ಪಿನ ಮೇಲೆ ನ್ಯಾಯಾಧೀಶರು ಈಗ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಮಧುರೈ ಪೊಲೀಸರು ಮೂವರು ಟಿಎನ್‌ಟಿಜೆ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಐಪಿಸಿಯ ಕಲಂ 153(ಎ), 505(1)(ಸಿ), 505(2), 506(1) ಆರ್/ಡಬ್ಲ್ಯು 109 ಐಪಿಸಿ ಸೇರಿದಂತೆ ಐದು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ತೀರ್ಪಿನ ವಿರುದ್ಧ ಹಲವಾರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಸಂಘಟನೆಗಳು ತಮಿಳುನಾಡಿನಾದ್ಯಂತ ಪ್ರತಿಭಟನೆ ನಡೆಸಿದ್ದವು. ತಮಿಳುನಾಡಿನ ಮಧುರೈನಲ್ಲಿ ನಡೆದ ಇಂತಹ ಪ್ರತಿಭಟನಾ ಸಭೆಯ ವಿಡಿಯೋ ತುಣುಕು ಎರಡು ದಿನಗಳ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ) ಲೆಕ್ಕಪರಿಶೋಧನಾ ಸಮಿತಿಯ ಸದಸ್ಯ ಕೋವೈ ರಹಮತುಲ್ಲಾ ಅವರು ತೀರ್ಪು ನೀಡಿದ ನ್ಯಾಯಾಧೀಶರನ್ನು ಜಾರ್ಖಂಡ್‌ನಲ್ಲಿ ಬೆಳಗಿನ ವಾಕ್ ಮಾಡುವಾಗ ಹತ್ಯೆ ಮಾಡಿದ್ದನ್ನು ಉಲ್ಲೇಖಿಸಿ ಭಾಷಣ ಮಾಡಿದ್ದರು.
ಬಿಗ್ ನ್ಯೂಸ್
Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.
ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.
ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಿನೆಮಾ
Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.
ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ
ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್22 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್21 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ21 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ20 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು19 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ




















