ಆರೋಗ್ಯ
Sugar control-ಶುಗರ್ ಕಂಟ್ರೋಲ್‍ಗೆ ಬರಬೇಕಾ? ಬೆಳಗ್ಗೆ ಎದ್ದ ಕೂಡಲೇ ಈ ನೀರು ಸೇವಿಸಿ…
ಮಧುಮೇಹ ನಿಯಂತ್ರಣಕ್ಕೆ ಕೆಲವು ಮಸಾಲೆಗಳು ಔಷಧಿಯಾಗಿ ಕೆಲಸ ಮಾಡುತ್ತವೆ.. ಅಂತಹ ಸಾಂಬಾರ ಪದಾರ್ಥಗಳಲ್ಲಿ ಮೆಂತ್ಯವೂ ಒಂದು.. ಆಹಾರದ ರುಚಿಯನ್ನು ಹೆಚ್ಚಿಸುವುದರಿಂದ ಹಿಡಿದು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.. ಮಧುಮೇಹ ಪೀಡಿತರಿಗೆ ವರದಾನ ಎನ್ನುತ್ತಾರೆ ಆಯುರ್ವೇದ ತಜ್ಞರು.
ಪ್ರಪಂಚದಾದ್ಯಂತ ಮಧುಮೇಹ ರೋಗವು ತುಂಬಾ ಅಪಾಯಕಾರಿಯಾಗುತ್ತಿದೆ ಎಂದು ಅಧ್ಯಯನಗಳು ತೋರಿಸುತ್ತಿವೆ.. ರಕ್ತದಲ್ಲಿನ ಸಕ್ಕರೆಯ (ಗ್ಲೂಕೋಸ್) ಮಟ್ಟ ಹೆಚ್ಚಾಗುವುದರಿಂದ ಮಧುಮೇಹ ಬರುತ್ತದೆ. ಮಧುಮೇಹವನ್ನು ಸಕಾಲದಲ್ಲಿ ನಿಯಂತ್ರಿಸದಿದ್ದರೆ ಇದು ಹೃದ್ರೋಗ, ಪಾರ್ಶ್ವವಾಯು, ಮೂತ್ರಪಿಂಡದ ಕಾಯಿಲೆ, ಕಣ್ಣಿನ ಸಮಸ್ಯೆಗಳಂತಹ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
ಈ ಕಾಯಿಲೆ ನಿಯಂತ್ರಣಕ್ಕೆ ಇದುವರೆಗೂ ಸೂಕ್ತ ಔಷಧ ಕಂಡು ಬಂದಿಲ್ಲ.. ಆದರೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಇದನ್ನು ನಿಯಂತ್ರಣದಲ್ಲಿಡಬಹುದು ಎನ್ನುತ್ತಾರೆ ವೈದ್ಯಕೀಯ ತಜ್ಞರು.
ಮಧುಮೇಹ ನಿಯಂತ್ರಣಕ್ಕೆ ಕೆಲವು ಮಸಾಲೆಗಳು ಔಷಧಿಯಾಗಿ ಕೆಲಸ ಮಾಡುತ್ತವೆ.. ಅಂತಹ ಸಾಂಬಾರ ಪದಾರ್ಥಗಳಲ್ಲಿ ಮೆಂತ್ಯವೂ ಒಂದು.. ಆಹಾರದ ರುಚಿಯನ್ನು ಹೆಚ್ಚಿಸುವುದರಿಂದ ಹಿಡಿದು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.. ಮಧುಮೇಹ ಪೀಡಿತರಿಗೆ ವರದಾನ ಎನ್ನುತ್ತಾರೆ ಆಯುರ್ವೇದ ತಜ್ಞರು.
ಮೆಂತ್ಯ ಚಹಾ ಅಥವಾ ಮೆಂತ್ಯ ನೀರನ್ನು ಕುಡಿಯುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ. ಮಧುಮೇಹಿಗಳು ಮೆಂತ್ಯದ ನೀರನ್ನು ಪ್ರತಿದಿನ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ಮೆಂತ್ಯವು ಪ್ರೋಬಯಾಟಿಕ್ ಗುಣಗಳನ್ನು ಹೊಂದಿದೆ. ಇದರ ಸೇವನೆಯಿಂದ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚುತ್ತದೆ ಮತ್ತು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.
ಮೆಂತ್ಯವು ಸೋಡಿಯಂ, ಸತು, ರಂಜಕ, ಫೋಲಿಕ್ ಆಮ್ಲ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಎ, ಬಿ ಮತ್ತು ಸಿ ನಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ. ಇದಲ್ಲದೆ, ಇದು ಫೈಬರ್, ಪ್ರೋಟೀನ್, ಪಿಷ್ಟ, ಸಕ್ಕರೆ, ಫಾಸ್ಪರಿಕ್ ಆಮ್ಲದಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ..
ಮೆಂತ್ಯ ಬೀಜದ ನೀರನ್ನು ತಯಾರಿಸಲು, ಮೊದಲು ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ಒಂದು ಲೋಟ ನೀರಿನಲ್ಲಿ ನೆನೆಸಿಡಿ. ನಂತರ ನೀರನ್ನು ಸೋಸಿ ಮರುದಿನ ಬೆಳಿಗ್ಗೆ ಕುಡಿಯಿರಿ.
ಮೆಂತ್ಯವನ್ನು ನೀರಿನಲ್ಲಿ ಕುದಿಸಿ ನಂತರ ಅದಕ್ಕೆ ನಿಂಬೆ ರಸವನ್ನು ಸೇರಿಸಿ ಮೆಂತ್ಯ ಚಹಾವನ್ನೂ ತಯಾರಿಸಿ ಕುಡಿಯಬಹುದು. ಮುಂಜಾನೆ ಈ ನೀರನ್ನು ಕುಡಿಯುವುದು ಒಳ್ಳೆಯದು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.. ಇದರಿಂದ ಶುಗರ್ ನಿಯಂತ್ರಣದಲ್ಲಿರುತ್ತದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಬಿಗ್ ನ್ಯೂಸ್19 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು22 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ23 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized23 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ24 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ22 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್23 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
-
ಅಪರಾಧ24 hours agoMangalore-ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


















