Connect with us

ವರದಿಗಳು

78ನೇ ವರ್ಷದ ವಾರ್ಷಿಕ ಮಹಾಸಭೆ – ಡಾ.ಕಜೆ ಪುನರಾಯ್ಕೆ |
ಜನರ ಅವಶ್ಯಕತೆಗೆ ಸ್ಪಂದಿಸಿದಾಗ ಮಾತ್ರ ಸೇವೆ ಸಫಲ – IPS ತಿಮ್ಮಪ್ಪಯ್ಯ ಮಡಿಯಾಲ

Published

on

Ad Widget

Ad Widget

Ad Widget

Ad Widget

ಬೆಂಗಳೂರು, ಮಾ 20 : ಜನರ ಅವಶ್ಯಕತೆಗೆ ಸ್ಪಂದಿಸಿದಾಗ ಮಾತ್ರ ನಮ್ಮ ಸೇವೆ ಸಾಫಲ್ಯ ಹೊಂದಲು ಸಾಧ್ಯ ಎಂದು ಮಾಜಿ ರಾಜ್ಯ ಪೋಲಿಸ್ ಮಹಾನಿರ್ದೇಶಕ IPS ತಿಮ್ಮಪ್ಪಯ್ಯ ಮಡಿಯಾಲ್ ಹೇಳಿದರು.

Ad Widget

Ad Widget

Ad Widget

Ad Widget

ಹವ್ಯಕ ಮಹಾಸಭೆಯಲ್ಲಿ ನಡೆದ “ವಿಜಯೀ ಭವ” -3 ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಸ್ಪೂರ್ತಿಯ ನುಡಿಗಳನ್ನಾಡಿದ ಶ್ರೀರಾಮಚಂದ್ರಾಪುರಮಠದ ಸಮ್ಮುಖ ಸರ್ವಾಧಿಕಾರಿ, IPS ತಿಮ್ಮಪ್ಪಯ್ಯ ಮಡಿಯಾಲ, ನಾನು ಸಾಧನೆ ಮಾಡಿದೆ ಎಂಬುದು ಸರಿಯಲ್ಲ, ಜೀವನದಲ್ಲಿ ಅವಕಾಶಗಳು ಬಂದಾಗ ಅವುಗಳ ಸದುಪಯೋಗ ಮಾಡಿಕೊಳ್ಳುವುದು ಮುಖ್ಯ. ಅವಕಾಶಗಳು ಬಂದಾಗ ಅದನ್ನು ಸಮರ್ಥವಾಗಿ ಬಳಸಿಕೊಂಡಿದ್ದರಿಂದ ವಿವಿಧ ರೀತಿಯಲ್ಲಿ ಸಮಾಜಕ್ಕೆ ಸೇವೆಸಲ್ಲಿಸಲು ಸಾಧ್ಯವಾಯಿತು ಎಂದು ಸೈನ್ಯದಲ್ಲಿ 7 ವರ್ಷ, ಆನಂತರ 33 ವರ್ಷ ಪೋಲಿಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯ ಬಗ್ಗೆ ವಿವರಿಸಿದರು.

Ad Widget

Ad Widget alt="Ad Widget"/>

Ad Widget

1965ರ ಭಾರತ – ಪಾಕ್ ಯುಧ್ಹದ ಸಂದರ್ಭವನ್ನು ಸ್ಮರಿಸಿದ ಅವರು, ಯುದ್ದದಲ್ಲಿ ಯಾವ ಸಂದರ್ಭದಲ್ಲಿ ಏನೂ ಬೇಕಾದರೂ ಆಗಬಹುದು, ನನ್ನ ಜೀವನ ಅಲ್ಲಿಗೇ ಮುಗಿಯಬಹುದಿತ್ತು, ಯಾವ ತಿರುವನ್ನೂ ಪಡೆದುಕೊಳ್ಳುವ ಸಾಧ್ಯತೆ ಇತ್ತು. ಯುದ್ದದಲ್ಲಿ ನಾವು ಪಾಕಿಸ್ತಾನವನ್ನು ಪ್ರವೇಶಿಸಿ ಆಕ್ರಮಣವನ್ನು ಮಾಡಿದೆವು. ಇದೇ ನನ್ನ ಜೀವನದ ಮೊದಲು ವಿದೇಶಿ ಯಾತ್ರೆ ಎಂದು ವಿವರಿಸಿದರು.

Ad Widget

Ad Widget <> Ad Widget

ಮೊದಲಿಂದಲೂ ಸನಾತನ ಸಂಪ್ರದಾಯದಲ್ಲಿ ಜೀವನ ಕ್ರಮವಿದ್ದ ಕಾರಣ, ಮೊದಲು ಸೈನ್ಯದಲ್ಲಿ,ಆನಂತರ ಧಾರ್ಮಿಕ ಕ್ಷೇತ್ರದಲ್ಲಿ (ಶ್ರೀರಾಮಚಂದ್ರಾಪುರಮಠದಲ್ಲಿ) ನೀವು ಸೇವೆ ಸಲ್ಲಿಸಿದರೂ ಹೆಚ್ಚಿನ ವ್ಯತ್ಯಾಸ ನನಗೆ ಅನಿಸಲಿಲ್ಲ. ನನ್ನ ಜೀವನ ಸಿದ್ಧಾಂತದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ ಎಂದು ತಿಳಿಸಿದರು.

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿಗಳಾದ ಶ್ರೀ ಅಶೋಕ್ ಹಾರನಹಳ್ಳಿ ಉದ್ಘಾಟನಾ ನುಡಿಗಳನ್ನಾಡಿ, ಹವ್ಯಕರಲ್ಲಿ ಏಕತೆ ಇದೆ, ಸಮಗ್ರ ಬ್ರಾಹ್ಮರಲ್ಲಿ ಇದು ಬರಬೇಕು.
ಹವ್ಯಕ ಮಹಾಸಭೆಯು ಉಳಿದೆಲ್ಲ ಸಂಘಟನೆಗಳಿಗೆ ಆದರ್ಶಪ್ರಾಯವಾಗಿದೆ. ಹವ್ಯಕ ಸಂಘಟನೆ – ವಿಶೇಷ ಕಾರ್ಯಕ್ರಮಗಳು ಹಾಗೂ ಪತ್ರಿಕೆಯನ್ನು ಮಾದರಿಯಾಗಿಟ್ಟುಕೊಂಡು ಬ್ರಾಹ್ಮಣ ಮಹಾಸಭೆಯಲ್ಲಿ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದರು.

Ad Widget

Ad Widget

ಸೈನ್ಯ – ಪೋಲಿಸ್ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ; ನಿವೃತ್ತ ಜೀವನದಲ್ಲಿ ಶ್ರೀರಾಮಚಂದ್ರಾಪುರಮಠದ ಸಮ್ಮುಖ ಸರ್ವಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ತಿಮ್ಮಪ್ಪಯ್ಯ ಮಡಿಯಾಲ ಅವರ ಸಾಧನೆ ಅಮೋಘವಾದದ್ದು. ಹಾಗೆಯೇ ಪತ್ರಿಕಾರಂಗದಲ್ಲಿ ವಿಶ್ವೇಶ್ವರ ಭಟ್ಟರ ಸಾಧನೆ ಅಪ್ರತಿಮವಾದದ್ದು ಎಂದು ಸಾಧಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಪತ್ರಕರ್ತರು ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ಶ್ರೀ ವಿಶ್ವೇಶ್ವರ ಭಟ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಸಾಧನೆ ಮಾಡಲು ಅವಕಾಶ ಸಿಗುತ್ತದೆ. ಆದರೆ ಬಹುತೇಕ ಸಮಯಗಳಲ್ಲಿ ನಾವು ಆ ಅವಕಾಶವನ್ನು ಎದುರಿಸಲು ಸಿದ್ಧರಿರುವುದಿಲ್ಲ. ಹರಿಯುವ ನದಿ ಹರಿಯಲು ಆರಂಭಿಸುವಾಗ ಸಣ್ಣ ಸೆಲೆಯಾಗಿ ಮಾತ್ರ ಇರುತ್ತದೆ. ಆನಂತರ ಉಪನದಿಗಳು ಸೇರಿಕೊಂಡು, ಅದು ದೊಡ್ಡ ನದಿಯಾಗಿ ಹರಿಯುತ್ತದೆ. ಹಾಗೆಯೇ ನಮ್ಮ ಜೀವನವೂ ಬೇರೆಬೇರೆ ರೀತಿಯ ಮಜಲನ್ನು ಪಡೆದುಕೊಳ್ಳುತ್ತದೆ. ಆ ಸಂದರ್ಭಗಳಲ್ಲಿ ನಾವು ಹೇಗೆ ಎದುರಿಸುತ್ತೇವೆ, ಹೇಗೆ ಸ್ಪಂದಿಸುತ್ತೇವೆ ಎಂಬುದು ನಮ್ಮ ಸಾಧನೆಯನ್ನು ನಿರ್ಧರಿಸುತ್ತದೆ ಎಂದರು.

ಕುಗ್ರಾಮದಲ್ಲಿ ಹುಟ್ಟಿದ ನಾನು, ಸಂಪಾದಕನಾಗುತ್ತೇನೆ ಎಂಬ ಯಾವ ಕನಸೂ ಇರಲಿಲ್ಲ. ಬೆಂಗಳೂರಿಗೆ ಬಂದಿದ್ದೇ ಸಾಧನೆ ಎಂದುಕೊಂಡಿದ್ದೆ. ಬಾಲ್ಯದಲ್ಲಿ ನನ್ನ ಅಜ್ಜನಿಗೆ ಪತ್ರಿಕೆಯನ್ನು ಪ್ರತಿದಿನ ಓದಿ ಹೇಳಬೇಕಿತ್ತು, ಆ ಕಾರಣದಿಂದಲೋ ಏನೋ ನಾನು ಪತ್ರಿಕಾ ರಂಗದೆಡೆಗೆ ಆಕರ್ಷಿತನಾದೆ ಎಂದು ತಮ್ಮ ಬಾಲ್ಯವನ್ನು ಮೆಲುಕು ಹಾಕಿದರು. 15-20 ವರ್ಷಕ್ಕೊಮ್ಮೆ ಎಲ್ಲಾ ಕ್ಷೇತ್ರಗಳು ಬದಲಾವಣೆಯನ್ನು ಬಯಸುತ್ತವೆ. ಆ ಸಂದರ್ಭದಲ್ಲಿ ನಾವು ಸರಿಯಾಗಿ ಬಳಸಿಕೊಂಡರೇ ನಾವು ಬೆಳೆದು, ಆ ಕ್ಷೇತ್ರವನ್ನು ಬೆಳೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ ಕಜೆ, ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ, ಉಪಾಧ್ಯಕ್ಷ ಆರ್ ಎಂ ಹೆಗಡೆ, ಶ್ರೀಧರ ಜೆ ಭಟ್ಟ ಕೆಕ್ಕಾರು, ಕಾರ್ಯದರ್ಶಿಗಳಾದ ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ, ರವಿನಾರಾಯಣ ಪಟ್ಟಾಜೆ ಉಪಸ್ಥಿತರಿದ್ದರು.

ಹುಳೇಗಾರು ನಾರಾಯಣ ಭಟ್, ಸುಕನ್ಯಾ ಸಂಪತ್ ಸಾಧಕರ ಜೊತೆ ಸಂವಾದ ನಡೆಸಿಕೊಟ್ಟರು. ಮೋಹನ ಭಾಸ್ಕರ ಹೆಗಡೆ, ಶ್ರೀಕಾಂತ್ ಹೆಗಡೆ ಅಂತ್ರವಌ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಕೊನೆಗೆ ಪಾಣಿನಿ ದೆರಾಜೆ ತಂಡದಿಂದ ನಾಕಾರು ತಂತಿ ಸಂಗೀತ ಕಾರ್ಯಕ್ರಮ ಜನಮನ ರಂಜಿಸಿತು.

78ನೇ ವರ್ಷದ ವಾರ್ಷಿಕ ಮಹಾಸಭೆ – ಡಾ.ಕಜೆ ಪುನರಾಯ್ಕೆ
ಮಲ್ಲೇಶ್ವರದ ಹವ್ಯಕ ಭವನದಲ್ಲಿ 78ನೇ ವರ್ಷದ ವಾರ್ಷಿಕ ಮಹಾಸಭೆ ನಡೆಯಿತು. ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಂಗಳೂರು, ಹಾಸನ, ಕರ್ನಾಟಕ ಇತರೆ ಹಾಗೂ ಸಂಘ ಸಂಸ್ಥೆಗಳಿಗೆ ಸಂಬಂಧಿಸಿ ಚುನಾವಣಾ ಪ್ರಕ್ರಿಯೆ ನಡೆಯಿತು. ಎಲ್ಲಾ ಕ್ಷೇತ್ರಗಳಿಗೂ ಅವಿರೋಧವಾಗಿ ನಿರ್ದೇಶಕರು ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ರಾಮ ಭಟ್ ಘೋಷಿಸಿದರು. ಆನಂತರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಡಾ. ಗಿರಿಧರ ಕಜೆ 7ನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು.

ಆಡಳಿತ ಮಂಡಳಿ:
ಡಾ. ಗಿರಿಧರ ಕಜೆ – ಅಧ್ಯಕ್ಷರು
ಆರ್ ಎಂ ಹೆಗಡೆ – ಉಪಾಧ್ಯಕ್ಷರು
ಶ್ರೀಧರ ಜೆ ಭಟ್ಟ ಕೆಕ್ಕಾರು – ಉಪಾಧ್ಯಕ್ಷರು
ಸಿಎ. ವೇಣುವಿಘ್ನೇಶ ಸಂಪ – ಪ್ರಧಾನ ಕಾರ್ಯದರ್ಶಿ
ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ – ಕಾರ್ಯದರ್ಶಿ
ಆದಿತ್ಯ ಹೆಗಡೆ ಕಲಗಾರು – ಕಾರ್ಯದರ್ಶಿ
ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ – ಕೋಶಾಧಿಕಾರಿ

ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು :
ಬೆಂಗಳೂರು: ಪ್ರಶಾಂತ ಕುಮಾರ್ ಭಟ್, ಕೃಷ್ಣಮೂರ್ತಿ ಭಟ್, ಮಹಾಬಲೇಶ್ವರ ಭಟ್, ಮಹಾಬಲೇಶ್ವರ
ಹೆಗಡೆ
ಉತ್ತರಕನ್ನಡ: ಅರುಣ್ ಹೆಗಡೆ, ಪ್ರಶಾಂತ್ ಹೆಗಡೆ
ಶಿವಮೋಗ್ಗ: ಎಮ್ ಮಂಜುನಾಥ್ ರಾವ್, ಗಣಪತಿ ಭಟ್ ಜೆ.ವಿ
ದಕ್ಷಿಣ ಕನ್ನಡ: ಬಿ ಶಿವಶಂಕರ ಭಟ್, ಪಿ ಈಶ್ವರ ಭಟ್, ಶ್ರೀಪ್ರಕಾಶ್, ರಮೇಶ್ ಭಟ್, ಶಿವಪ್ರಸಾದ್
ಹಾಸನ – ಚಿಕ್ಕಮಗಳೂರು: ಜಿ. ರಾಜಗೋಪಾಲ ಜೋಷಿ
ಕರ್ನಾಟಕ – ಇತರೆ: ಸುರೇಶ್ ನಂದಿಕೇಶ್ವರ ಹೆಗಡೆ
ಸಂಘ – ಸಂಸ್ಥೆ: ಗುರುಪಾದ್

Ad Widget
Click to comment

Leave a Reply

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ಅಂತರ ರಾಜ್ಯ

Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ

Published

on

Ad Widget

Ad Widget

Ad Widget

Ad Widget

ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

Ad Widget

Ad Widget <> Ad Widget

ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್‌ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.

Ad Widget

Ad Widget

ರೈಲಿನಲ್ಲಿ ಬೆಂಕಿ ಹಚ್ಚುವುದು ಅಥವಾ ಸುಡುವ ವಸ್ತುಗಳ ಬಳಕೆಯಂತಹ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಪ್ರಯಾಣಿಕರು ತಕ್ಷಣ ದೂರು ನೀಡುವಂತೆ ರೈಲ್ವೆ ಸೂಚಿಸಿದೆ. ಇಂತಹ ಘಟನೆಗಳನ್ನು ‘ರೈಲ್ ಮದದ್’ ಪೋರ್ಟಲ್ ಮೂಲಕ ಅಥವಾ 139 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವರದಿ ಮಾಡಬಹುದಾಗಿದೆ

Ad Widget
Continue Reading

ಅಂತರ ರಾಜ್ಯ

WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!

Published

on

Ad Widget

Ad Widget

Ad Widget

Ad Widget

ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.

Ad Widget

Ad Widget <> Ad Widget

ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.

Ad Widget

Ad Widget

WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.

CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.

CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.

CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.

CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.

ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!