Connect with us

ಶಿಕ್ಷಣ

Scholarship-ವಿದ್ಯಾರ್ಥಿ ವೇತನ ಮಾಹಿತಿ; ವಾರ್ಷಿಕ ಸುಮಾರು ರೂ. 1,20,000 ವರೆಗೆ ಸ್ಕಾಲರ್‌ಶಿಪ್

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಶ್ರೀ ತುಳಸಿ ತಂತಿ ಸ್ಕಾಲರ್‌ಷಿಪ್:
ಸುಜ್ಞಾನ್ ಗ್ರೂಪ್ ಆರ್ಥಿಕವಾಗಿ ದುರ್ಬಲರಾಗಿರುವ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸಲು ನೀಡುವ ನೆರವು ಇದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿದ್ಯಾರ್ಹತೆ:
9ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಬಿಇ/ ಬಿ.ಟೆಕ್ ಪದವಿ ಅಥವಾ ಡಿಪ್ಲೊಮಾ ಇನ್ ಎಂಜಿನಿಯರಿಂಗ್‌ನ ಮೊದಲ ವರ್ಷಕ್ಕೆ ದಾಖಲಾಗಿರುವ ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ.

Ad Widget

Ad Widget <> Ad Widget

ಎಲ್ಲಾ ಮೂಲಗಳಿಂದಲೂ ಕುಟುಂಬದ ವಾರ್ಷಿಕ ಆದಾಯವು ರೂ 6 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.



Ad Widget

ಬಿಇ/ಬಿ.ಟೆಕ್ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿನಿಯರು 10ನೇ ತರಗತಿ ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ ಶೇ 50 ಅಂಕಗಳನ್ನು ಗಳಿಸಿರಬೇಕು.

Ad Widget

Ad Widget

ಆರ್ಥಿಕ ನೆರವು :
9ನೇ ತರಗತಿಯ ವಿದ್ಯಾರ್ಥಿನಿಯರಿಗೆ ವಾರ್ಷಿಕ ರೂ. 6000 (ಗಮನಿಸಿ 9 ಮತ್ತು 10ನೇ ತರಗತಿಗಳೆರಡಕ್ಕೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.)

ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ- ₹60,000.
ಬಿಇ/ಬಿ.ಟೆಕ್ ಪದವಿ ವಿದ್ಯಾರ್ಥಿಗಳಿಗೆ- ವಾರ್ಷಿಕ ₹1,20,000

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: Short Url: http://www.b4s.in/pjvi/SZSP1

ಡಿಎಕ್ಸ್‌ಸಿ ಪ್ರೋಗ್ರೆಸಿಂಗ್ ಮೈಂಡ್ಸ್:
ಡಿಎಕ್ಸ್‌ಸಿ ಟೆಕ್ನಾಲಜಿಯ ಉಪಕ್ರಮವಾಗಿದ್ದು, ಶೈಕ್ಷಣಿಕ ಹಾಗೂ ಕ್ರೀಡಾ ವೆಚ್ಚಗಳಿಗೆ ಸಹಾಯ ಮಾಡುತ್ತದೆ.

ಅರ್ಹತೆ:
ಸ್ಟೆಮ್-ಸಂಬಂಧಿತ ಕ್ಷೇತ್ರಗಳಲ್ಲಿ ಯಾವುದೇ ವರ್ಷದ ಪದವಿ ಅಭ್ಯಾಸ ಮಾಡುತ್ತಿರುವ ಮಹಿಳೆಯರು ಮತ್ತು ಲಿಂಗ ಪರಿವರ್ತಿತ ವಿದ್ಯಾರ್ಥಿಗಳು ಅರ್ಹರು, 13ರಿಂದ 25 ವರ್ಷ ವಯಸ್ಸಿನೊಳಗಿನ ರಾಜ್ಯ/ ರಾಷ್ಟ್ರೀಯ / ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ / ದೇಶವನ್ನು ಪ್ರತಿನಿಧಿಸಿರುವ ಮಹಿಳಾ ಕ್ರೀಡಾ ಪಟುಗಳು ಕೂಡ ಅರ್ಜಿ ಸಲ್ಲಿಸಬಹುದು.

ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿ/ಸೆಮಿಸ್ಟರ್‌ನಲ್ಲಿ ಕನಿಷ್ಠ ಶೇ 60 ಅಂಕಗಳನ್ನು ಪಡೆದಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹4,00,000ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು (ಕ್ರೀಡಾಪಟುಗಳಿಗೆ ₹5,00,000)

ಆರ್ಥಿಕ ಸಹಾಯ: ಸ್ಟೆಮ್‌ನಲ್ಲಿ ಪದವಿಗೆ – ₹50,000, ಕ್ರೀಡಾಪಟುಗಳಿಗೆ – ₹1,25,000
ಅರ್ಜಿ ಸಲ್ಲಿಸಲು ಕೊನೆ ದಿನ: 30-11-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: Short Url: http://www.b4s.in/pjvi/DXCS4

ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ಸ್:
ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ನೆರವು ನೀಡುತ್ತದೆ.

ಅರ್ಹತೆ:
ವಿದ್ಯಾರ್ಥಿವೇತನವು ಭಾರತೀಯ ಪ್ರಜೆಗಳಿಗೆ ಮುಕ್ತವಾಗಿದೆ. ವಿದ್ಯಾರ್ಥಿಗಳು 1 ರಿಂದ 12ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಪದವಿ ಅಥವಾ ಸ್ನಾತಕೋತ್ತರ (ಸಾಮಾನ್ಯ ಮತ್ತು ವೃತ್ತಿಪರ ಸೇರಿದಂತೆ) ಕೋರ್ಸ್‌ಗಳನ್ನು ಅಭ್ಯಾಸ ಮಾಡುತ್ತಿರಬೇಕು.

ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇ 55 ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹ 2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.

ಆರ್ಥಿಕ ಸಹಾಯ: ₹ 75,000ದ ವರೆಗೆ
ಅರ್ಜಿ ಸಲ್ಲಿಸಲು ಕೊನೆ ದಿನ : 31-12-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಮಾಹಿತಿಗೆ : Short Url: http://www.b4s.in/pjvi/HDFC54

ಟಿಎಸ್‌ಡಿಪಿಎಲ್ ಸಿಲ್ವ‌ರ್ ಜುಬಿಲಿ ಸ್ಕಾಲರ್‌ಷಿಪ್:
ಟಾಟಾ ಸ್ಟೀಲ್ ಡೌನ್‌ಸ್ಟ್ರೀಮ್ ಪ್ರಾಡಕ್ಟ್ ಲಿಮಿಟೆಡ್ ನೀಡುವ ವಿದ್ಯಾರ್ಥಿವೇತನ ಇದಾಗಿದೆ.

ಅರ್ಹತೆ:
ಸರ್ಕಾರಿ-ಮಾನ್ಯತೆ ಪಡೆದ ಸಂಸ್ಥೆಗಳಿಂದ ಫಿಟ್ಟ‌ರ್, ಎಲೆಕ್ನಿಕಲ್, ವೆಲ್ಡರ್ಸ್, ಸೇಫ್ಟಿ ಇತ್ಯಾದಿ ಕ್ಷೇತ್ರಗಳಲ್ಲಿ ಐಟಿಐ/ ಡಿಪ್ಲೊಮಾವನ್ನು ಅಭ್ಯಾಸ ಮಾಡುತ್ತಿರಬೇಕು. ಅಭ್ಯರ್ಥಿಗಳು ತಮ್ಮ 10ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ ಶೇ 50 ಅಂಕಗಳನ್ನು ಗಳಿಸಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ₹ 5.00.000ಕಿಂತ ಹೆಚ್ಚಿರಬಾರದು.

ಆರ್ಥಿಕ ಸಹಾಯ: 1 ವರ್ಷಕ್ಕೆ ₹50,000
ಅರ್ಜಿ ಸಲ್ಲಿಸಲು ಕೊನೆ ದಿನ: 03-12-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ ಪರಿಚಯಗೈದರು. 9ನೇ ತರಗತಿಯ ಕುವೀರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಡಾಟಾಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಸ್ವಾಗತಿಸಿ, ನಿಹಾರಿಕಾ ಅತಿಥಿಗಳನ್ನು ಪರಿಚಯಿಸಿದರು. ಆಶ್ಲೇಷ್ ವಂದನಾರ್ಪಣೆಗೈದರು. ಶ್ರೇಯಾ ಎಮ್. ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading