Connect with us

ನಿಧನ ವಾರ್ತೆ

Google Map-ಗೂಗಲ್ ಮ್ಯಾಪ್ ಎಡವಟ್ಟು : ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು – ಮೂವರು ಯುವಕರು ಮೃತ್ಯು

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಉತ್ತರಪ್ರದೇಶ: ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಈ ದುರ್ಘಟನೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಫರೂಕಾಬಾದ್‌ನ ಮೂವರು ಯುವಕರು ಬದೌನ್‌ನ ದತಗಂಜ್‌ನಿಂದ ಫರೀದ್‌ಪುರ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಖಾಲ್‌ಪುರದ ರಾಮಗಂಗಾ ನದಿಯ ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದಿದೆ. ಎತ್ತರದಿಂದ ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad Widget

Ad Widget <> Ad Widget

ಗೂಗಲ್ ಮ್ಯಾಪ್ ದಾರಿ ನೋಡಿ ಬರುತ್ತಿದ್ದ ಯುವಕರು
ಗುರ್‌ಗಾಂವ್‌ನಿಂದ ಮೂವರು ಯುವಕರು ಗೂಗಲ್ ಮ್ಯಾಪ್‌ನಲ್ಲಿ ದಾರಿ ನೋಡಿಕೊಂಡು ಬರುತ್ತಿದ್ದರು ಎಂಬುದು ತಿಳಿದು ಬಂದಿದೆ. ಗೂಗಲ್ ಮ್ಯಾಪ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಮಾರ್ಗವನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಆದರೆ ಸೇತುವೆಯ ಒಂದು ಬದಿ ಮಾರ್ಗ ಇನ್ನೂ ನಿರ್ಮಾಣವಾಗಿಲ್ಲ. ಹೀಗಾಗಿ ರಾತ್ರಿ ವೇಳೆ ಗೊತ್ತಾಗದೆ, ಕಾರು ಸುಮಾರು 50 ಅಡಿ ಕೆಳಗೆ ಬಿದ್ದಿದೆ.



Ad Widget

ಭಾನುವಾರ ಬೆಳಗ್ಗೆ ರಾಮಲಿಂಗಾ ನದಿಯಲ್ಲಿ ಬಿದ್ದಿರುವ ಕಾರನ್ನು ಸ್ಥಳೀಯರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ತಿಳಿದು ಬಂದಿದೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget

Ad Widget

ಫರೀದ್‌ಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಹುಲ್ ಸಿಂಗ್ ಘಟನೆ ಕುರಿತು ಮಾತನಾಡಿ ”ನಿರ್ಮಾಣ ಹಂತದ ಸೇತುವೆಯಿಂದ ಶನಿವಾರ ರಾತ್ರಿ ಕಾರೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಅಮಿತ್ ಕುಮಾರ್, ವಿವೇಕ್ ಕುಮಾರ್, ಕೌಶಲ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಫರೂಕಾಬಾದ್ ನಿವಾಸಿಗಳು. ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.

ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸೇತುವೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಿರುವಾಗ ಸೇತುವೆಯಲ್ಲಿ ಯಾಕೆ ಬ್ಯಾರಿಕೇಡ್‌ಗಳನ್ನು ಅಳವಡಿಸಿಲ್ಲ? ಪಿಡಬ್ಲ್ಯುಡಿ ಇಲಾಖೆ ಸೇತುವೆ ಮಾರ್ಗವನ್ನು ಬಂದ್ ಮಾಡಿದ್ದರೆ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಿದ್ದರೆ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಮೃತರ ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಗೂಗಲ್ ಮ್ಯಾಪ್ ದಾರಿ ನೋಡಿ ಹಳ್ಳಕ್ಕೆ ಕಾರು ಇಳಿಸಿ ಎಡವಟ್ಟು:
ಕೆಲ ತಿಂಗಳ ಹಿಂದೆ ಇಂತಹದೆ ಇನ್ನೊಂದು ಘಟನೆ ನಡೆದಿದ್ದು ಗೂಗಲ್ ಮ್ಯಾಪ್‌ ಸಹಾಯದಿಂದ ದಾರಿ ನೋಡಿಕೊಂಡು ಹೈದರಾಬಾದ್‌ನಿಂದ ಪ್ರವಾಸ ಹೋಗುತ್ತಿದ್ದವರು, ದಕ್ಷಿಣ ಕೇರಳದ ಕುರುಪ್ಪಂತರಾ ಸಮೀಪ ನೀರು ತುಂಬಿದ್ದ ಹಳ್ಳವೊಂದಕ್ಕೆ ಕಾರು ಇಳಿಸಿ ಎಡವಟ್ಟು ಮಾಡಿಕೊಂಡಿದ್ದರು. ಅಪರಿಚಿತ ಪ್ರದೇಶವಾಗಿದ್ದರಿಂದ ಗೂಗಲ್ ಮ್ಯಾಪ್ ಬಳಸಿಕೊಂಡು ಸಾಗುತ್ತಿದ್ದರು. ಭಾರೀ ಮಳೆಯಿಂದಾಗಿ ಹಳ್ಳ ತುಂಬಿ ಹರಿಯುತ್ತಿತ್ತು. ರಸ್ತೆಯಲ್ಲೂ ನೀರು ತುಂಬಿಕೊಂಡಿತ್ತು. ಇದರಿಂದ ಯಾವುದು ಹಳ್ಳ, ಯಾವುದು ರಸ್ತೆ ಎಂಬುದು ಗೊತ್ತಾಗದೆ ಅವಘಡ ಸಂಭವಿಸಿತ್ತು. ಬಳಿಕ ಪ್ರವಾಸಿಗರು ಪೊಲೀಸ್ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದ್ದರು. ಸಮೀಪದಲ್ಲಿದ್ದ ಪೊಲೀಸ್ ಗಸ್ತು ಘಟಕ ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ನೆರವಿಗೆ ಬಂದಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿ, ನಾಲ್ವರು ಪ್ರವಾಸಿಗರು ಅಪಾಯದಿಂದ ಪಾರಾಗಿದ್ದರು.

Ad Widget
Click to comment

Leave a Reply

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ನಿಧನ ವಾರ್ತೆ

Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ

Published

on



Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

Ad Widget

Ad Widget <> Ad Widget

ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.



Ad Widget

ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

Ad Widget

Ad Widget

‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.

ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading