Connect with us

ಅಪರಾಧ

ಶಿವಮೊಗ್ಗದಲ್ಲಿ ಉಪನ್ಯಾಸಕರ ಪ್ರೇಮ ಪುರಾಣ : ಪ್ರೀತಿಸಿ ವಂಚಿಸಿ ಬೇರೊಂದು ವಿವಾಹವಾದ ಪ್ರಿಯಕರ – ಇತ್ತ ಪ್ರೆಯಸಿ ಆತ್ಮಹತ್ಯೆ | ಸುದ್ದಿ ತಿಳಿಯುತ್ತಲೇ ಮಂಟಪದಿಂದ ವರ ಎಸ್ಕೆಪ್ – ಬೇಸೆತ್ತ ಮದುಮಗಳಿಂದಲೂ ಆತ್ಮಹತ್ಯೆಗೆ ಯತ್ನ

Published

on

Ad Widget

Ad Widget

Ad Widget

Ad Widget

ಶಿವಮೊಗ್ಗ: ಪ್ರೀತಿಸಿದಾತ ತನಗೆ ಕೈಕೊಟ್ಟು ಬೇರೆ ಯುವತಿಯನ್ನು ಮದುವೆಯಾದನೆಂದು‌ ಮನನೊಂದ ಯುವತಿಯೊಬ್ಬಳು, ತನ್ನ ಪ್ರಿಯಕರನ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ್ರದಲ್ಲಿ‌  ಮಾ 20 ರಂದು ನಡೆದಿದೆ. ಇತ್ತ ತನ್ನ ಪ್ರೆಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ಮದುವೆ ಮನೆಯಲ್ಲಿದ್ದ ತಿಳಿಯುತ್ತಲೆ ಛತ್ರದಿಂದ ಮದುಮಗ ಪರಾರಿಯಾಗಿದ್ದನೆ . ಇನ್ನು ಈ ಎರಡು ಅಘಾತಗಳಿಂದ ಕಂಗೆಟ್ಟ ಮದುಮಗಳು ಆತ್ಮಹತ್ಯೆಗೆ ಯತ್ನಿಸುವ ಮೂಲಕ ಮದುವೆ ಮನೆ ಹೈಡ್ರಾಮಕ್ಕೆ ಸಾಕ್ಷಿಯಾಯಿತು

Ad Widget

Ad Widget

Ad Widget

Ad Widget

ಶಿವಮೊಗ್ಗದ  ಓ.ಟಿ.ರಸ್ತೆಯ‌ ನಿವಾಸಿ ರೂಪಶ್ರೀ ಆತ್ಮಹತ್ಯೆ ಮಾಡಿಕೊಂಡ ಯುವತಿ. ರೂಪಶ್ರಿ ಮತ್ತು ಮುರಳಿ ಕಳೆದ 6 ವರ್ಷದಿಂದ ಪ್ರೀತಿಸುತ್ತಿದ್ದರು. ಆದರೇ ಮುರಳಿಯ ವಿವಾಹವೂ ಬೇರೊಂದು ಯುವತಿಯೊಂದಿಗೆ ಮಾ .20 ರಂದು ನಿಗದಿಯಾಗಿತ್ತು. ಇತ್ತ ಮದುವೆ ಛತ್ರದಲ್ಲಿ  ಪೂರ್ವ ನಿಗದಿಯ ಮುಹೂರ್ತದಲ್ಲಿ ಮುರಳಿಯ ವಿವಾಹ ನಡೆಯುತ್ತಿದ್ದರೇ ಅತ್ತ ಅದೇ ಮುಹೂರ್ತದಲ್ಲಿ  ರೂಪಶ್ರೀ  ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಆತ್ಮಹತ್ಯೆಯ  ಮಾಹಿತಿ ಸ್ನೇಹಿತರಿಂದ ಮದುಮಗ ಮುರಳಿಗೆ ತಲುಪಿದೆ. ಕೂಡಲೇ ಆತ ಮದುವೆ ಛತ್ರದಿಂದ ಪರಾರಿಯಾಗಿದ್ದಾನೆ. ಈ ಎರಡು ಅಘಾತಕಾರಿ ಸುದ್ದಿ ಕೇಳಿದ ವಧು ಕೂಡ ಮದುವೆ ನಡೆಯುತ್ತಿದ್ದ ಸಮುದಾಯ ಭವನದಲ್ಲೆ ಆಥ್ಮಹತ್ಯೆಗೆ ಯತ್ನಿಸಿದ್ದಾಳೆ.  

Ad Widget

Ad Widget <> Ad Widget

 ಇಂದು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಪಶ್ರೀ ಅವರು ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಇತ್ತೀಚೆಗೆ ಬೇರೆ ಯುವತಿಯ ಜೊತೆ ಮದುವೆ ಆಗಲು ಮುಂದಾಗಿದ್ದರು. ಇದರಿಂದ ರೂಪಶ್ರೀ ತೀವ್ರವಾಗಿ ನೊಂದಿದ್ದರು ಎನ್ನಲಾಗ್ತಿದೆ.ಪ್ರಿಯಕರನ ಮದುವೆ ದಿನವೇ ಯುವತಿ ಆತ್ಮಹತ್ಯೆಪ್ರಿಯಕರನ ಮದುವೆ ದಿನವೇ ಯುವತಿ ಆತ್ಮಹತ್ಯೆಇಂದು ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭ ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜರುಗಿತ್ತು. ಇತ್ತ ಮುರುಳಿ ಮದುವೆಯಾದ ಮೂಹೂರ್ತದ ಸಮಯಕ್ಕೆ ರೂಪಶ್ರೀ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಇದಾದ ನಂತರ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತ ರೂಪಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಮದುವೆ ಮನೆಯಿಂದಲೇ ಮುರಳಿ ಪರಾರಿಯಾಗಿದ್ದಾನೆ. ಸದ್ಯ ದೊಡ್ಡಪೇಟೆ ಪೊಲೀಸರು ಆತನ ಹುಡುಕಾಟದಲ್ಲಿ ಕಾರ್ಯನಿರತರಾಗಿದ್ದಾರೆ.

Ad Widget

Ad Widget

ರೂಪಶ್ರೀ ಸಹ್ಯಾದ್ರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿ ಜತೆಗೆ ಪಿಎಚ್‌ ಡಿ ಕೂಡ ಮಾಡುತ್ತಿದ್ದಾರೆ. ಮುರುಳಿ ಸಹ ನಗರದ ಡಿವಿಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಬ್ಬರು ಸಹಪಾಠಿಗಳಾಗಿದ್ದು ಕಾಲೇಜು ದಿನಗಳಲ್ಲಿಯೇ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ರೂಪಶ್ರೀ ಪಿಹೆಚ್​ಡಿ ಅಂತಿಮ ಹಂತಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಆಕೆ ಕಾಲೇಜಿಗೆ ಹೋಗುತ್ತಿರಲಿಲ್ಲ.

ರೂಪಶ್ರೀಗೆ ತಂದೆ-ತಾಯಿ ಹಾಗೂ ಒಬ್ಬ ತಮ್ಮನಿದ್ದಾನೆ. ತಂದೆ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದಾರೆ. ತಮ್ಮ ಅಡುಗೆ ಕೆಲಸಕ್ಕೆ ಹೋಗುತ್ತಿದ್ದಾರೆ. ಬಡ ಕುಟುಂಬವಾದ್ರೂ ಸಹ ಮಕ್ಕಳನ್ನು ಚೆನ್ನಾಗಿಯೇ ಸಾಕಿದ್ದರು.‌ ಕಷ್ಟವಾದರು ಸಹ ಮಗಳು ಪಿಹೆಚ್​ಡಿ ಪದವಿ ಪಡೆಯುತ್ತಿರುವುದು ಕುಟುಂಬಕ್ಕೆ ಸಂತೋಷವನ್ನುಂಟು ಮಾಡಿತ್ತು.

ಮುರಳಿಗೆ ಐದು ತಿಂಗಳ ಹಿಂದೆಯಷ್ಟೇ ಶಿವಮೊಗ್ಗದ  ಡಿವಿಎಸ್ ಕಾಲೇಜಿನಲ್ಲಿ  ಖಾಯಂ ಉಪನ್ಯಾಸಕ ಹುದ್ದೆ ಸಿಕ್ಕಿತ್ತು. ಅದಾದ ಬಳಿಕ ಆತ ಮದುವೆಯಾಗಲು ಸಿದ್ದತೆ ನಡೆಸಿದ್ದ. ಈ ಹಂತದಲ್ಲಿ ರೂಪಾಶ್ರೀ ತನ್ನ ಮನೆಯವರಲ್ಲಿ ಮುರಳಿಯನ್ನು ಪ್ರೀತಿಸುತ್ತಿರುವ ವಿಷಯ ತಿಳಿಸಿದ್ದಾಳೆ . ಹೀಗಾಗಿ ರೂಪಶ್ರೀ ಮನೆಯವರು ಮುರುಳಿ ಮನೆಯವರ ಬಳಿ ಮದುವೆ ಮಾತುಕತೆ ನಡೆಸಲು ಹೋಗಿದ್ದಾಗ  ಅವರಿಬ್ಬರು ಜಸ್ಟ್ ಫ್ರೆಂಡ್ಸ್​ ಎಂದು ಹೇಳಿ ಮುರಳಿ ಮನೆಯವರು ಕಳುಹಿಸಿದ್ದರಂತೆ.

ಬಳಿಕ ಮುರಳಿಗೆ ಕುವೆಂಪು ವಿವಿಯ ಪ್ರಾಧ್ಯಾಪಕಿಯೊಬ್ಬರ ಪುತ್ರಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಈ ವಿಷಯ ತಿಳಿದ ರೂಪಶ್ರೀ  ಮುರಳಿ ಮನೆಗೆ ಹೋಗಿ ಗಲಾಟೆ ಕೂಡ ಮಾಡಿದ್ದಳು. ಆದರೇ ಈ ವೇಳೆ ಮುರಳಿ ಆಕೆಯನ್ನು ವಿವಾಹವಾಗಲು ನಿರಾಕರಿಸಿದ್ದ ಎನ್ನಲಾಗಿದೆ.

ಅದಾದ ಬಳಿಕ ಇತ್ತೀಚೆಗೆ ರೂಪಾಶ್ರೀ ತನ್ನ ಮನೆಯಲ್ಲಿಯೇ ವಿಷ ಕುಡಿದಿದ್ದರು. ಶನಿವಾರ ( ಮಾ 19 ರಂದು ) ರಾತ್ರಿ ಮುರಳಿಯ ಮದುವೆ ಅರತಕ್ಷತೆ ನೆರವೆರಿತ್ತು. ಇದರಿಂದ ರಾತ್ರಿಯಿಂದಲೇ ಮಾನಸಿಕವಾಗಿ ನೊಂದಿದ್ದ ಆಕೆ ಭಾನುವಾರ ಬೆಳಿಗ್ಗೆ ಮನೆಯಲ್ಲಿ ಯಾರು ಇಲ್ಲದಿದ್ದ ವೇಳೆ ತನ್ನ ಬೆಡ್‌ ರೂಮ್‌ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಡೆತ್‌ ನೋಟ್‌ ಪತ್ತೆಯಾಗಿದೆ.

ನಾಲ್ಕು ಪುಟಗಳ ಡೆತ್‌ ನೋಟ್‌ ನಲ್ಲಿ “ ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವು. ಮದುವೆ ಆಗಲು ಕೂಡ ನಿರ್ಧಾರ ಮಾಡಿದ್ದೇವು. ಈಗ ಆತ ತನ್ನನ್ನೂ ಬಿಟ್ಟು ಬೇರೊಬ್ಬರ ಜತೆ ವಿವಾಹವಾಗುತ್ತಿದ್ದಾನೆ ಎಂದು ಬರೆಯಲಾಗಿದೆ. ಈ ಬಗ್ಗೆ  ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆತ್ಮಹತ್ಯೆಗೆ ಪ್ರಚೋಧನೆ ನೀಡಿದ ಆರೊಪದಲ್ಲಿ ಪ್ರಕರಣ ದಾಖಲಿಸಿಕೊಂಡ  ದೊಡ್ಡ ಪೇಟೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇತ್ತ ಮುರಳಿಯ  ಮದುವೆ ಸಮಾರಂಭ ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೊಜಿಸಲಾಗಿತ್ತು. ಅಲ್ಲಿ ಮುರುಳಿ ಮದುಮಗಳಿಗೆ ತಾಳಿ ಕಟ್ಟಿದ್ದಾನೆ. ಸ್ವಲ್ಪ ಹೊತ್ತಿನಲ್ಲಿ ರೂಪಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಹಾಗೂ ಠಾನೇಯಲ್ಲಿ ಪ್ರಕರಣ ದಾಖಲಾಗಿರುವ ವಿಚಾರ ಮುರಳಿಗೆ ತನ್ನ ಹಿತೈಷಿಗಳ  ಮೂಲಕ ಗೊತ್ತಾಗಿದೆ. ಕೂಡಲೇ ಆತ ಮದುವೆ ಮಂಟಪದಿಂದ ಪರಾರಿಯಾಗಿದ್ದಾನೆ.  

ಈ ವಿಚಾರ  ಮುರುಳಿಯನ್ನು  ಮದುವೆಯಾದ ಯುವತಿಗೆ ತಿಳಿದು, ಆಕೆಯೂ ಸಹ ಸಮುದಾಯ ಭವನದಲ್ಲಿಯೇ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಮುರಳಿಯ ಬಂಧನಕ್ಕೆ ಬಲೆ ಬೀಸಿದ್ದಾರೆ

Ad Widget
Click to comment

Leave a Reply

ಸ್ಥಳೀಯ

Kadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಕಡಬ: ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಐತ್ತೂರು ನಿವಾಸಿ ನೀಲಮ್ಮ (46) ನೀಡಿದ ದೂರಿನಂತೆ, ಅವರ ಪತಿ ಮೃತಪಟ್ಟಿದ್ದು, ಮಗಳೊಂದಿಗೆ ವಾಸವಾಗಿದ್ದಾರೆ. ನ.25ರಂದು ಮಧ್ಯಾಹ್ನ ಅವರು ಮನೆಯಲ್ಲಿದ್ದ ವೇಳೆ ದಿನಕರ ಯಾನೆ ವಿನೋದ, ಚೈತ್ರಾ ಹಾಗೂ ಇತರ ಆರು ಮಂದಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಜಾಗದ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ನೀಲಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 144/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(4), 118(1), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಘಟನೆಗೆ ಸಂಬಂಧಿಸಿದಂತೆ ದಿನಕರ (27) ಎಂಬವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ. ಐತ್ತೂರು ನಿವಾಸಿ ದಿನಕರ ಅವರು ತಮ್ಮ ತಾಯಿ ಜೀಜಿ ಅವರೊಂದಿಗೆ ವಾಸವಾಗಿದ್ದು, ತಂದೆಯ ಹೆಸರಿನಲ್ಲಿರುವ ಐತ್ತೂರು ಗ್ರಾಮದ ಜಮೀನಿನಿಂದ ನ.25ರಂದು ಬೆಳಗ್ಗೆ ತಾವು ಹಾಗೂ ಪತ್ನಿ ಚೈತ್ರಾ ಸ್ಕೂಟರ್‌ನಲ್ಲಿ ಅಡಿಕೆ ಸಾಗಿಸುತ್ತಿದ್ದ ವೇಳೆ, ಆಸ್ತಿ ವಿಚಾರದ ತಕರಾರಿನ ಹಿನ್ನೆಲೆಯಲ್ಲಿ ನೀಲಮ್ಮ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 143/2026ರಂತೆ BNS ಕಲಂ 126(2), 118(1), 352 ಹಾಗೂ 351(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಕಡಬ ಪೊಲೀಸರು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget
Continue Reading

ಅಪರಾಧ

Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ

Published

on

Ad Widget

Ad Widget

Ad Widget

Ad Widget

ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.

ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.

Continue Reading

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!