ಸ್ಥಳೀಯ
Dharmasthala- ಧರ್ಮಸ್ಥಳ: ಲಕ್ಷದೀಪೋತ್ಸವ: ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ
ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್‌ನಲ್ಲಿರುವ ಯೂನಿಸೆಫ್ ಕಾರ್ಯಾಲಯದ ಮುಖ್ಯಸ್ಥ ಡಾ. ಝೆಲಾಲೆಮ್ ಬಿರಹಾನು ಟಾಪ್ಸಿ ಹೇಳಿದರು.
ಉಜಿರೆ: ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್‌ನಲ್ಲಿರುವ ಯೂನಿಸೆಫ್ ಕಾರ್ಯಾಲಯದ ಮುಖ್ಯಸ್ಥ ಡಾ. ಝೆಲಾಲೆಮ್ ಬಿರಹಾನು ಟಾಪ್ಸಿ ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಪ್ರೌಢಶಾಲಾ ವಠಾರದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ವಿಶೇಷವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾ ಸಬಲೀಕರಣ, ಆರ್ಥಿಕ ಒಳಗೊಳ್ಳುವಿಕೆ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆ, “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಅಮೂಲ್ಯ ಸೇವೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಎಲ್ಲರ ಮನೆಗಳನ್ನು ಹಾಗೂ ಮನಗಳನ್ನು ಬೆಳಗಿಸುವ ಪವಿತ್ರ ಸಮಾರಂಭವಾಗಿದೆ. ಸರ್ವಧರ್ಮಿಯರೂ ಶ್ರದ್ಧಾ-ಭಕ್ತಿಯಿಂದ ದೇವರ ದರ್ಶನ ಪಡೆದು, ಸೇವೆ ಮಾಡಿ ಮಾನಸಿಕ ಶಾಂತಿ, ನೆಮ್ಮದಿ ಹೊಂದುತ್ತಾರೆ. ಲೌಕಿಕ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಾರೆ. ಪ್ರತಿವರ್ಷವೂ ಲಕ್ಷದೀಪೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರೂ ಇದ್ದಾರೆ.

ಮನೋರಂಜನಾ ಕಾರ್ಯಕ್ರಮಗಳು, ಸರ್ವಧರ್ಮಸಮ್ಮೇಳನ ಮತ್ತು ಸಾಹಿತ್ಯಸಮ್ಮೇಳನ, ವಸ್ತುಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು, ಮಂಜೂಷಾ ವಸ್ತುಸಂಗ್ರಹಾಲಯ, ಕಾರ್‌ಮ್ಯೂಸಿಯಂ ಮೊದಲಾದವುಗಳನ್ನು ವೀಕ್ಷಿಸಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಾರೆ. ವಸ್ತುಪ್ರದರ್ಶನದಲ್ಲಿರುವ ಮಳಿಗೆಗಳು ಎಲ್ಲಾ ವರ್ಗದ ಪ್ರೇಕ್ಷಕರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನ ನೀಡುತ್ತವೆ. ಸರ್ಕಾರದ ಮಳಿಗೆಗಳು ವಿವಿಧ ಯೋಜನೆಗಳ ಮಾಹಿತಿಯನ್ನೂ ಕೊಡುತ್ತವೆ.

ಮಾಹಿತಿಯ ಕಣಜ- ವಸ್ತುಪ್ರದರ್ಶನ:
ಧರ್ಮಸ್ಥಳದಲ್ಲಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತುಪ್ರದರ್ಶನದಲ್ಲಿ 350ಕ್ಕೂ ಮಿಕ್ಕಿ ಮಳಿಗೆಗಳಿದ್ದು, ಅಪೂರ್ವ ಮಾಹಿತಿ, ಮಾರ್ಗದರ್ಶನದ ಕಣಜವಾಗಿದೆ.

ಕೃಷಿ, ಹೈನುಗಾರಿಕೆ, ಬ್ಯಾಂಕಿಂಗ್, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಹಾಗೂ ಮಹಿಳಾ ಕಲ್ಯಾಣ ಇಲಾಖೆ, ಜೀವವಿಮೆ, ಗ್ರಾಮಾಭಿವೃಧ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಡಿಕೆ ಹಾಳೆತಟ್ಟೆ ತಯಾರಿ, ಮಡಿಕೆ ತಯಾರಿ, ಗ್ರಾಮೀಣ ಕರಕುಶಲ ಕಲೆಗಳು – ಇತ್ಯಾದಿ ವೈವಿಧ್ಯಮಯ ಮಳಿಗೆಗಳು ಪ್ರೇಕ್ಷಕರನ್ನು ಆಕರ್ಷಿಸುತ್ತಿವೆ.

ನ. 30ರ ವರೆಗೆ ಪ್ರತಿದಿನ ಬೆಳಿಗ್ಯೆ 9 ಗಂಟೆಯಿಂದ ರಾತ್ರಿ 10 ಗಂಟೆ ವರೆಗೂ ವಸ್ತುಪ್ರದರ್ಶನ ವೀಕ್ಷಣೆಗೆ ಉಚಿತ ಅವಕಾಶವಿದೆ.

ಪ್ರತಿದಿನ ಸಂಜೆ ಆರು ಗಂಟೆಯಿಂದ ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.

ಕರ್ಣಾಟಕ ಬ್ಯಾಂಕಿನ ಮಹಾಪ್ರಬಂಧಕ ರಾಜಾ, ಬಿ.ಯಸ್., ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ಪಿ. ವಿಶ್ವನಾಥ್, ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ. ಮಹೇಶ್‌ಕುಮಾರ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್, “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಎನ್. ಜನಾರ್ದನ್ ಮತ್ತು ಎಸ್.ಡಿ.ಎಂ. ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಜನಾರ್ದನ್ ಉಪಸ್ಥಿತರಿದ್ದರು.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.
ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.
ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.
ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.
-
ಅಪರಾಧ16 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್13 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ13 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು14 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ9 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ14 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು15 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ14 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















