Uncategorized
ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಭಕ್ತರು ಹಾಗೂ ಅಭಿಮಾನಿಗಳ ಯಶಸ್ವಿ ಪಾದಯಾತ್ರೆ; ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ, ಹೃದಯ ವೈಶಾಲ್ಯದಿಂದ ಕಾಯಕದ ಮೂಲಕ ಶ್ರೀ ಸ್ವಾಮಿಯ ಸೇವೆ: ಡಿ. ವೀರೇಂದ್ರ ಹೆಗ್ಗಡೆಯವರು

ಉಜಿರೆ: ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಮಾರ್ಗದಲ್ಲಿ ನಡೆದು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಹೃದಯ ವೈಶಾಲ್ಯದಿಂದ ಕಾಯಕದ ಮೂಲಕ ತಾನು ಸಂತೋಷದಿAದ ನಿತ್ಯವೂ, ನಿರಂತರವೂ ಶ್ರೀ ಮಂಜುನಾಥ ಸ್ವಾಮಿಯ ಸೇವೆ ಮಾಡುತ್ತಿರುವುದಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಮಂಗಳವಾರ ಲಕ್ಷದೀಪೋತ್ಸವ ಸಂದರ್ಭದಲ್ಲಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ ಬಂದ 25 ಸಾವಿರಕ್ಕೂ ಮಿಕ್ಕಿದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ತಮಗೆ ಸುಖ-ದುಃಖ ಮತ್ತು ಪಾಪ – ಪುಣ್ಯದ ಭಯ ಹಾಗೂ ಚಿಂತೆ ಇಲ್ಲ. ಎರಡನ್ನೂ ತಾವು ಸಮಾನವಾಗಿ ಸ್ವೀಕರಿಸಿ ಶ್ರೀ ಸ್ವಾಮಿಯ ಸನ್ನಿಧಿಗೆ ಅರ್ಪಿಸಿ ನಿಶ್ಚಿಂತೆಯಿಂದ ಇರುತ್ತೇನೆ. ಲಕ್ಷಾಂತರ ಮಂದಿ ಭಕ್ತರ ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವವೇ ತಮಗೆ ಶ್ರೀರಕ್ಷೆಯಾಗಿದೆ ಎಂದರು.
2025 ರ ಜನವರಿ 7 ಮತ್ತು 8 ರಂದು ಮಾನ್ಯ ಉಪರಾಷ್ಟ್ರಪತಿಗಳನ್ನು ಧರ್ಮಸ್ಥಳಕ್ಕೆ ಆಹ್ವಾನಿಸಿದ್ದು ನೂತನ ಸರತಿ ಸಾಲಿನ (ಕ್ಯೂ ಕಾಂಪ್ಲೆಕ್ಸ್) ಕಟ್ಟಡವನ್ನು ಉದ್ಘಾಟಿಸುವರು. ಅಂದು 60 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಗುವುದು.
ಉಡುಪಿಯಲ್ಲಿ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದು ಸದ್ಯದಲ್ಲಿಯೇ ಉದ್ಘಾಟಿಸಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು. ಕಳೆದ ಕೆಲವು ವರ್ಷಗಳಿಂದ ಧರ್ಮಸ್ಥಳಕ್ಕೆ ಬೇಕಾದಷ್ಟು ಅಕ್ಕಿ, ತರಕಾರಿಗಳನ್ನು ಭಕ್ತರೇ ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ. ಹಾಗಾಗಿ ತಾವು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯಾವುದೇ ಚಿಂತೆ ಮಾಡದೆ ತಾವು ಎಲ್ಲವನ್ನೂ ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿಯ ಸನ್ನಿಧಿಗೆ ಅರ್ಪಿಸಿ ಸಂತೋಷದಿಂದ ಸೇವಾಕಾರ್ಯಗಳ ಮೂಲಕ ಶ್ರೀ ಸ್ವಾಮಿ ಸೇವೆ ಮಾಡುತ್ತಿರುವುದಾಗಿ ತಿಳಿಸಿದರು. ಲಕ್ಷದೀಪೋತ್ಸವವು ಎಲ್ಲರ ಮನೆಗಳಿಗೂ, ಮನಗಳಿಗೂ ಬೆಳಕನ್ನು ನೀಡಲಿ. ಎಲ್ಲೆಲ್ಲೂ ಸುಖ-ಶಾಂತಿ ಹಾಗೂ ನೆಮ್ಮದಿ ನೆಲೆಸಲಿ ಎಂದು ಹೆಗ್ಗಡೆಯವರು ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ ಸಾಗುವುದೇ ಲಕ್ಷದೀಪೋತ್ಸವದ ಉದ್ದೇಶವಾಗಿದೆ. 12 ವರ್ಷಗಳ ಹಿಂದೆ ಉಜಿರೆಯಿಂದ ಧರ್ಮಸ್ಥಳಕ್ಕೆ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆರಂಭಿಸಿದ ಪಾದಯಾತ್ರೆಯಲ್ಲಿ ವರ್ಷದಿಂದ ವರ್ಷಕ್ಕೆ ಪಾದಯಾತ್ರೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.
ತಮ್ಮೆಲ್ಲರ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳಕ್ಕೆ ಯಾವುದೇ ರೀತಿಯಲ್ಲಿ ಅಪಚಾರ, ಅಪಪ್ರಚಾರವಾದರೂ ಎಲ್ಲರೂ ನ್ಯಾಯಾಲಯದಲ್ಲಿ ಹಾಗೂ ಜನತಾನ್ಯಾಯಾಲಯದಲ್ಲಿ ಹೋರಾಡಲು ತಾವು ಸಿದ್ಧರು ಹಾಗೂ ಬದ್ಧರು ಎಂದು ಅವರು ಭರವಸೆ ನೀಡಿದರು.
ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಿ ಸುಗಮ ಪಾದಯಾತ್ರೆ ಬಗ್ಗೆ ಎಲ್ಲರನ್ನೂ ಶ್ಲಾಘಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆ, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರ ಕುಮಾರ್, ಉಜಿರೆಯ ಶರತ್‌ಕೃಷ್ಣ ಪಡ್ವೆಟ್ನಾಯ, ಸೋನಿಯಾ ಯಶೋವರ್ಮ, ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಪೂರನ್‌ವರ್ಮ ಉಪಸ್ಥಿತರಿದ್ದರು.
ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
Uncategorized
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.
ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.
ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.
ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.
Uncategorized
Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
Uncategorized
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ (36) ಬಂಧಿತ ಆರೋಪಿ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 394 ಜೊತೆಗೆ 34ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಈ ತೀರ್ಪಿನ ವಿರುದ್ಧ ಅರೋಪಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅಪೀಲು ಹಾಕಿದ್ದರು .
ಈ ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ದಸ್ತಗಿರಿ ವಾರೆಂಟ್ ಜಾರಿಗೊಳಿಸಿತ್ತು.ವಾರೆಂಟ್ ಆಧರಿಸಿ ಮಂಗಳವಾರ ಬೆಳಿಗ್ಗೆ ಪುತ್ತೂರು ತಾಲ್ಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್‌ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದರು.
ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಠಾಣೆಯ ಸಿಬ್ಬಂದಿಯೂ ಸಹಕರಿಸಿದರು.
-
ದಕ್ಷಿಣ ಕನ್ನಡ14 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized20 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ21 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ21 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ21 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ13 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್19 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು20 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















