ಮಂಗಳೂರು
Adichunchanagiri Swamiji-ಸಚಿವರು, ಜನಪ್ರತಿನಿಧಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಕಲಿಯುವಂತಾಗಬೇಕು-ಆದಿಚುಂಚನಗಿರಿ ಸ್ವಾಮೀಜಿ
ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯವರು ‘ರಾಜ್ಯದ ಎಲ್ಲ ಸಚಿವರು, ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಾಗಬೇಕು. ಇಲ್ಲದಿದ್ದರೆ ಸರ್ಕಾರಿ ಶಾಲೆಗಳು ಉದ್ಧಾರ ಆಗುವುದಿಲ್ಲ. ಇದಕ್ಕಾಗಿ ರಾಜ್ಯದಾದ್ಯಂತ ಚಳವಳಿ ಆರಂಭಿಸಬೇಕಿದೆ’ ಎಂದು ಹೇಳಿದ್ದಾರೆ.
ಮಂಗಳೂರು: ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯವರು ‘ರಾಜ್ಯದ ಎಲ್ಲ ಸಚಿವರು, ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಾಗಬೇಕು. ಇಲ್ಲದಿದ್ದರೆ ಸರ್ಕಾರಿ ಶಾಲೆಗಳು ಉದ್ಧಾರ ಆಗುವುದಿಲ್ಲ. ಇದಕ್ಕಾಗಿ ರಾಜ್ಯದಾದ್ಯಂತ ಚಳವಳಿ ಆರಂಭಿಸಬೇಕಿದೆ’ ಎಂದು ಹೇಳಿದ್ದಾರೆ.
ಮಂಗಳವಾರದಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಸಚಿವರಿಗೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿದಾಗ ಆ ಶಾಲೆಯ ಅಭಿವೃದ್ಧಿ ಕುರಿತ ಉತ್ತರದಾಯಿತ್ವ ಹೆಚ್ಚುತ್ತದೆ. ಶಾಲೆಯ ಅವಶ್ಯಕತೆಗಳನ್ನು ಈಡೇರಿಸುವ ಬದ್ಧತೆ ಇರುತ್ತದೆ’ ಎಂದರು.
ರಾಜ್ಯದಾದ್ಯಂತ ಸಂವಿತ್ ಶಾಲೆ:
‘ಕಡುಬಡತನದಲ್ಲಿದ್ದು ಶಿಕ್ಷಣ ಮುಂದುವರಿಸಲು ಸಾಧ್ಯವಿಲ್ಲದ ಪ್ರತಿಭಾನ್ವಿತ ಮಕ್ಕಳಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಉತ್ಕೃಷ್ಟ ಶಿಕ್ಷಣವನ್ನು ಉಚಿತವಾಗಿ ಒದಗಿಸಲು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ವಿಜ್ಞಾತಂ ಇನ್ಸ್ಟಿಟ್ಯೂಟ್ ಫಾರ್ ಟ್ಯಾಲೆಂಟೆಡ್ (ಸಂವಿತ್) ಶಾಲೆಗಳನ್ನು ಆರಂಭಿಸಿದ್ದು, ಇದನ್ನು ರಾಜ್ಯದಾದ್ಯಂತ ವಿಸ್ತರಿಸಲಿದ್ದೇವೆ. ವಿದ್ಯಾರ್ಥಿಗಳ ಕಲಿಕಾ ವೆಚ್ಚವನ್ನು ಆರನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಸಂಸ್ಥಾನವೇ ಭರಿಸಲಿದೆ. ಆಧುನಿಕ ಶಿಕ್ಷಣವನ್ನು ಒದಗಿಸುವುದರ ಜೊತೆಗೆ ಆಧ್ಯಾತ್ಮಿಕ ತಿಳಿವಳಿಕೆ ಮೂಡಿಸಿ ಪರಿಪೂರ್ಣ ಜ್ಞಾನವನ್ನು ನೀಡುವುದು ಇದರ ಉದ್ದೇಶ. ಒಂದೆರಡು ವರ್ಷಗಳಲ್ಲಿ ಮಂಗಳೂರಿನಲ್ಲೂ ಸಂವಿತ್ ಶಾಲೆ ಆರಂಭಿಸಲಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.















