ಕಾರ್ಯಕ್ರಮಗಳು
Subramanya-ʻರಾಮ-ಲಕ್ಷ್ಮಣ’ ಜೋಡಿ ಅನ್ನಕೊಪ್ಪರಿಗೆ ಏರಿಸುವ ಮೂಲಕ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಜಾತ್ರೋತ್ಸವಕ್ಕೆ ಚಾಲನೆ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಕ್ರೋಧಿಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಬುಧವಾರ ನ 27ರ ,7.42 ರ ವೃಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಕೊಪ್ಪರಿಗೆ ಇಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ; ನ,28: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಕ್ರೋಧಿಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಬುಧವಾರ ನ 27ರ, 7.42 ರ ವೃಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಕೊಪ್ಪರಿಗೆ ಇಡಲಾಗಿದೆ.
ರಾಮ- ಲಕ್ಷ್ಮಣರ ಕೊಪ್ಪರಿಗೆ:
ಚಂಪಾಷಷ್ಠಿ ವೇಳೆ ಇಲ್ಲಿರುವ ʻರಾಮ-ಲಕ್ಷ್ಮಣ’ ಎಂಬ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆ ಮಹತ್ವ ಪಡೆದುಕೊಳ್ಳುತ್ತದೆ. ಈ ಜೋಡಿ ಅನ್ನಕೊಪ್ಪರಿಗೆಗೆ ವಿಶೇಷ ಪೂಜೆ ಸಂದ ಬಳಿಕ, ದೇಗುಲದ ಒಳಾಂಗಣದ ಎರಡು ಒಲೆಗಳ ಮೇಲೆ ಅದನ್ನು ಏರಿಸಲಾಗುತ್ತದೆ. ಕೊಪ್ಪರಿಗೆಯಲ್ಲಿ ಸಿದ್ಧವಾದ ಅನ್ನ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗುತ್ತದೆ.

ಕೊಪ್ಪರಿಗೆ ಏರಿಸುವ ಮೂಲಕ ಕುಕ್ಕೆ ದೇಗುಲದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭವಾಯಿತು. ಪೂರ್ವಶಿಷ್ಠ ಸಂಪ್ರದಾಯದಂತೆ ದೇವಸ್ಥಾನದ ಪ್ರಧಾನ ಅರ್ಜಿಕ ವೇದಮೂರ್ತಿ ಸೀತಾರಾಮ ಯಡಪಡಿತ್ತಾಯರು ವಿವಿಧ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ಪ್ರಧಾನ ಅರ್ಚಕರು ‘ರಾಮಲಕ್ಷ್ಮಣ’ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಳದ ಒಳಾಂಗಣದಲ್ಲಿರುವ ದೊಡ್ಡದಾದ ಎರಡು ಒಲೆಗಳ ಮೇಲೆ ಅನ್ನದಾನದ ಸಂಕೇತವಾದ ಕೊಪ್ಪರಿಗೆಗಳನ್ನು ಏರಿಸಲಾಯಿತು.ಎಲ್ಲಾ ಕ್ಷೇತ್ರಗಳಲ್ಲಿ ಕೊಡಿ ಏರುವುದರ ಮೂಲಕ ಜಾತ್ರೆಗೆ ಚಾಲನೆ ಲಭಿಸಿದರೆ, ಕುಕ್ಕೆ ಕ್ಷೇತ್ರದಲ್ಲಿ ಮಾತ್ರ ಕೊಪ್ಪರಿಗೆ ಏರಿಸುವುದರೊಂದಿಗೆ ಜಾತ್ರೋತ್ಸವ ಪ್ರಾರಂಭಗೊಳ್ಳುವುದು ವಿಶೇಷ.
ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ವಕಳ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ಶೆಟ್ಟಿ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಅಚ್ಚುತ ಆಲ್ಬದೆ, ಕಚೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಹೆಬ್ಬಾರ್ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ವಿ.ಆರ್ ಸೇರಿದಂತೆ ದೇವಾಲಯದ ಸಿಬ್ಬಂದಿಗಳು, ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಡಿ.7ಕ್ಕೆ ಮಹಾರಥೋತ್ಸವ:
ನ.28 ಮತ್ತು 29ರಂದು ಶೇಷ ವಾಹನಯುಕ್ತ ಬಂಡಿ ಉತ್ಸವ, ನ.30 ರಂದು ಶನಿವಾರ ಲಕ್ಷದೀಪೋತ್ಸವ ನಡೆಯಲಿದೆ. ಡಿ.1ರಂದು ಭಾನುವಾರ ಶೇಷವಾಹನೋತ್ಸವ, ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ ನಡೆಯಲಿದೆ. ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ. ಡಿ.6ರಂದು ಮಾರ್ಗತಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿಯಂದು ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭೃತೋತ್ಸವ ಮತ್ತು ನೌಕವಿಹಾರ,
ಡಿ.12 ಗುರುವಾರ ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಂಪನ್ನಗೊಳ್ಳಲಿದೆ. ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
Uncategorized15 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್10 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ14 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ14 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ13 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್14 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















