ಕಾರ್ಯಕ್ರಮಗಳು
Puttur-ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ನ.30ರಂದು ಲಕ್ಷದೀಪೋತ್ಸವ: ಭಕ್ತರ ಸಭೆ-ನ.29ರಂದು ಸ್ವಚ್ಛತಾ ಕಾರ್ಯಕ್ರಮ
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನ.30ರಂದು ಲಕ್ಷದೀಪೋತ್ಸವ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನ.29ರಂದು ಬೆಳಗ್ಗೆ 7 ಗಂಟೆಯಿಂದ ದೇವಾಲಯದ ಹೊರಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲು ದೇವಾಲಯಗಳ ಸಂವರ್ಧನ ಸಮಿತಿ ಮತ್ತು ಮಮ ಪರಿವಾರದ ಆಶ್ರಯದಲ್ಲಿ ನ.27ರಂದು ನಡೆದ ಭಕ್ತರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪುತ್ತೂರು, ನ. 27: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನ.30ರಂದು ಲಕ್ಷದೀಪೋತ್ಸವ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನ.29ರಂದು ಬೆಳಗ್ಗೆ 7 ಗಂಟೆಯಿಂದ ದೇವಾಲಯದ ಹೊರಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲು ದೇವಾಲಯಗಳ ಸಂವರ್ಧನ ಸಮಿತಿ ಮತ್ತು ಮಮ ಪರಿವಾರದ ಆಶ್ರಯದಲ್ಲಿ ನ.27ರಂದು ನಡೆದ ಭಕ್ತರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕಳೆದ ವರ್ಷ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಲಕ್ಷ ದೀಪೋತ್ಸವ ಸರ್ವ ಸಂಘ ಸಂಸ್ಥೆ ನಿತ್ಯ ಕರಸೇವಕರು, ಮಮ ಪರಿವಾರ ಸಹಿತ ಭಕ್ತರ ಒಗ್ಗೂಡುವಿಕೆಯಿಂದ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಕಳೆದ ಬಾರಿಯಂತೆ ಈ ಬಾರಿಯು ಸ್ವಚ್ಛತಾ ಕಾರ್ಯ, ಹಣತೆ ಬೆಳಗುವಿಕೆಗೆ ಭಕ್ತರ ಸಹಕಾರ ಅಗತ್ಯವಿದೆ ಎಂದು ಮಂಗಳೂರು ವಿಭಾಗ ದೇವಾಲಯಗಳ ಸಂವರ್ಧನ ಸಮಿತಿ ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಹೇಳಿದರು.

ಲಕ್ಷ ದೀಪೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಸ್ವಚ್ಛತಾ ಕಾರ್ಯ ಮಹತ್ವದ್ದು. ಇದಕ್ಕೆ 300ಕ್ಕೂ ಅಧಿಕ ಜನರ ಅಗತ್ಯ ಇದೆ. ನ.29 ರಂದು ಬೆಳಗ್ಗೆ 7ರಿಂದ ಸ್ವಚ್ಛತ ಕಾರ್ಯ ಆರಂಭಗೊಳ್ಳಲಿದೆ. ಪುಷ್ಕರಣಿಯಿಂದ ರಥ ಬೀದಿ ತನಕ ಸ್ವಚ್ಛತೆ ನಡೆಯಲಿದ್ದು ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಪಾಂಗಳಾಯಿ ಶ್ರೀ ಅರಸು ಮುಂಡ್ಯತಾಯ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ತಾರಾನಾಥ ರೈ ತಿಳಿಸಿದರು.
ಕಳೆದ ವರ್ಷದ ಹಣತೆಯನ್ನು ಸ್ವಚ್ಛಗೊಳಿಸಲು ಸ್ವಯಂಸೇವಕರ ಅಗತ್ಯ ಇದ್ದು 50 ಜನರ ಒಂದೊಂದು ತಂಡ ರಚಿಸಲಾಗುವುದು. ಕಾಲೇಜು ವಿದ್ಯಾರ್ಥಿಗಳು, ನಿತ್ಯ ಕರಸೇವ ಸಹಿತ ವಿವಿಧ ಸಂಘ ಸಂಸ್ಥೆಗಳು ಕೈ ಜೋಡಿಸುವಂತೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಹೊರಾಂಗಣ, ದೇವಾಲಯದ ದೇವರಮಾರುಗದ್ದೆ, ರಥಬೀದಿ, ಗೋಶಾಲೆ, ಸಭಾಭವನ, ಮೂಲ ನಾಗನಗುಡಿ, ಪುಷ್ಕರಣಿಯಲ್ಲಿ 7.45ಕ್ಕೆ ಹಣತೆ ಬೆಳಗಿಸಲಾಗುತ್ತದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಶಿಕ್ಷಣ ವಿದ್ಯಾರ್ಥಿಗಳಿಂದ ಕುಣಿತ ಭಜನೆ ಕೂಡ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್, ವೀಣಾ ಬಿ.ಕೆ. ಶ್ರೀ ಶಾರದಾ ಭಜನ ಮಂದಿರದ ಗೌರವಾಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಡಾ। ಕೃಷ್ಣ ಪ್ರಸನ್ನ, ಪ್ರಭಾವತಿ, ಅಜಿತ್ ರೈ, ಸುದರ್ಶನ ಪುತ್ತೂರು, ಭಾಸ್ಕರ ಬಾರ್ಯ ಮೊದಲಾದವರಿದ್ದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ12 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಅಂತರ ರಾಜ್ಯ6 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!















