ಆರೋಗ್ಯ
Cracked lips-ಚಳಿಗಾಲದಲ್ಲಿ ಒಡೆದ ತುಟಿಗಳ ಆರೈಕೆಗೆ ಈ ಟಿಪ್ಸ್ ಫಾಲೋ ಮಾಡಿ!
ಚಳಿಗಾಲದಲ್ಲಿ ತುಟಿಗಳು ಒಡೆದು ಹೋಗುವುದು ಸಾಮಾನ್ಯವಾಗಿದೆ.. ಯಾವುದೇ ಖರ್ಚಿಲ್ಲದೇ ಮನೆಯಲ್ಲಿ ದೊರೆಯುವ ನೈಸರ್ಗಿಕ ಉತ್ಪನ್ನಗಳು ತುಟಿಗಳ ಸೌಂದರ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ.
ಚಳಿಗಾಲದಲ್ಲಿ ತುಟಿಗಳು ಒಡೆದು ಹೋಗುವುದು ಸಾಮಾನ್ಯವಾಗಿದೆ.. ಯಾವುದೇ ಖರ್ಚಿಲ್ಲದೇ ಮನೆಯಲ್ಲಿ ದೊರೆಯುವ ನೈಸರ್ಗಿಕ ಉತ್ಪನ್ನಗಳು ತುಟಿಗಳ ಸೌಂದರ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ. ತುಟಿಗಳ ಆರೈಕೆಗೆ ಹಾಗೂ ಸೌಂದರ್ಯ ಕಾಪಾಡಿಕೊಳ್ಳಲು ಕೆಲವು ನೈಸರ್ಗಿಕ ಸಲಹೆಗಳು ಇಲ್ಲಿದೆ.
ಚಳಿಗಾಲದಲ್ಲಿ ಹವಾಮಾನದಲ್ಲಾಗುವ ಬದಲಾವಣೆಗಳು ನಾನಾ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಹೀಗಾಗಿ ಈ ಋತುವಿನಲ್ಲಿ ಚರ್ಮದ ಆರೈಕೆಗೆ ಹೆಚ್ಚು ಗಮನ ಕೊಡಬೇಕು. ಎಷ್ಟೇ ಕಾಳಜಿ ವಹಿಸಿದರೂ ತುಟಿ, ಕೈಕಾಲುಗಳ ಚರ್ಮವು ಬಿರುಕು ಬಿಡುತ್ತದೆ.
ತುಟಿಯೂ ಒಡೆಯುವುದರಿಂದ ನೋವು ಮಾತ್ರವಲ್ಲ, ಬಿರುಕು ತುಟಿಯ ಅಂದವನ್ನು ಹಾಳು ಮಾಡುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸುವ ಬದಲು ಅಡುಗೆ ಮನೆಯಲ್ಲಿ ಸಿಗುವ ಈ ಸಾಮಗ್ರಿಗಳಿಂದ ತುಟಿಯ ಅಂದವನ್ನು ಹೆಚ್ಚಿಸಬಹುದು.
ತೆಂಗಿನೆಣ್ಣೆ :
ತೆಂಗಿನ ಎಣ್ಣೆಯಲ್ಲಿ ಉರಿಯೂತದ ಮತ್ತು ಉತ್ಕರ್ಷಣ ನಿರೋಧಕಗುಣಗಳು ಸಮೃದ್ಧವಾಗಿರುತ್ತದೆ. ಇದು ಚರ್ಮವನ್ನು ತಕ್ಷಣವೇ ಹೈಡ್ರೇಟ್ ಮಾಡುತ್ತದೆ. ತೆಂಗಿನೆಣ್ಣೆಯನ್ನು ದಿನನಿತ್ಯ ತುಟಿಗಳಿಗೆ ಲೇಪಿಸುವುದರಿಂದ ಸೋಂಕುಗಳಿಂದ ತುಟಿಗಳನ್ನು ರಕ್ಷಿಸಿ, ಮೃದುವಾಗಿಸುತ್ತದೆ
ತುಪ್ಪ:
ತುಪ್ಪದಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲಗಳು ಚರ್ಮದ ಜೀವಕೋಶಗಳಿಗೆ ತೇವಾಂಶ ನೀಡುತ್ತವೆ. ಒಡೆದ ತುಟಿಗಳಿಗೆ ತುಪ್ಪವನ್ನು ಹಚ್ಚುತ್ತಾ ಬಂದರೆ ಬಿರುಕು ಬಿಡುವುದು ಬೇಗನೇ ಗುಣಮುಖವಾಗಿ, ತುಟಿಗಳನ್ನು ಮೃದುವಾಗಿಸುತ್ತದೆ.
ಜೇನುತುಪ್ಪ :
ಅಡುಗೆ ಮನೆಯಲ್ಲಿರುವ ಜೇನುತುಪ್ಪವನ್ನು ಒಡೆದಿರುವ ತುಟಿಗಳಿಗೆ ಲೇಪಿಸಬೇಕು. ಈ ರೀತಿ ಮಾಡುವುದರಿಂದ ಒಡೆದ ತುಟಿಗಳ ನೋವು ಕೂಡ ಕಡಿಮೆಯಾಗುತ್ತದೆ. ತುಟಿಗಳು ಮೃದುವಾಗುವುದಲ್ಲದೇ ಅಂದವು ಹೆಚ್ಚಾಗುತ್ತದೆ.
ಅಲೋವೆರಾ ಜೆಲ್ :
ಅಲೋವೆರಾ ಆರೋಗ್ಯವನ್ನು ಕಾಪಾಡುವಲ್ಲಿಯೂ ಉಪಯುಕ್ತವಾಗಿದೆ. ಇದರಲ್ಲಿರುವ ಉರಿಯೂತ ಗುಣವು ಶುಷ್ಕತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ರಾತ್ರಿ ಮಲಗುವ ಮುನ್ನ ಸ್ವಲ್ಪ ಅಲೋವೆರಾ ಜೆಲ್ ಅನ್ನು ತುಟಿಗಳಿಗೆ ಹಚ್ಚಿ ಮಸಾಜ್ ಮಾಡುವುದರಿಂದ ಒಡೆಯುವ ತುಟಿಗಳ ಸಮಸ್ಯೆಯಿಂದ ಪಾರಾಗಬಹುದು.
ಬಾದಾಮಿ ಎಣ್ಣೆ:
ಚಳಿಗಾಲದಲ್ಲಿ ತುಟಿಗಳು ಒಡೆಯುತ್ತಿದ್ದರೆ, ಪ್ರತಿದಿನ ಮಲಗುವ ಮುನ್ನ ಬಾದಾಮಿ ಎಣ್ಣೆಯನ್ನು ತುಟಿಗಳಿಗೆ ಹಚ್ಚಿಕೊಳ್ಳಿ. ಬಾದಾಮಿ ಎಣ್ಣೆಯಿಂದ ತುಟಿಗಳನ್ನು ಐದು ನಿಮಿಷಗಳ ಕಾಲ ಮೃದುವಾಗಿ ಮಸಾಜ್ ಮಾಡುವುದರಿಂದ ತುಟಿಗಳು ಮೃದುವಾಗುತ್ತದೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
Uncategorized18 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ23 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಕ್ರೈಂ5 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಅಂತರ ರಾಜ್ಯ23 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ23 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ23 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ನಿಧನ ವಾರ್ತೆ5 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್5 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















