Connect with us

ಬಿಗ್ ನ್ಯೂಸ್

Puttur-ಪುತ್ತೂರಿನ ಪಂಜಳದಲ್ಲಿ ಸದ್ಯದಲ್ಲೆ ಅಂತರಾಷ್ಟ್ರೀಯ ಮಟ್ಟದ ಜೇನು ಸಂಸ್ಕರಣಾ ಘಟಕ ಲೋಕಾರ್ಪಣೆ; ಪ್ರಧಾನಿಗಳ ದೂರ ದೃಷ್ಠಿಯ ಯೋಜನೆಯನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಗ್ರಾಮಜನ್ಯ ಸಂಸ್ಥೆ ರೂಪು : ಕೇಶವಪ್ರಸಾದ್ ಮುಳಿಯ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು: ಜೀವ ವೈವಿದ್ಯತೆಯನ್ನು ಉತ್ತೇಜಿಸುವ ಜತೆಗೆ ಗ್ರಾಮೀಣ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶವನ್ನಿಟ್ಟಿಕೊಂಡು ಕೋವಿಡ್ ಸಮಯದಲ್ಲಿ ಪುತ್ತೂರಿನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯನ್ನು ಸ್ಥಾಪಿಸಲಾಗಿದೆ. , 4300 ಕೃಷಿಕರಿಗೆ ವಿವಿಧ ರೀತಿಯ ಸೇವೆಯನ್ನು ನೀಡಲಾಗುತ್ತಿದೆ. ಜೇನಿನ ಕೃಷಿಯ ಅಭಿವೃದ್ದಿ ಹಾಗೂ ಮಾರಾಟ ಹಾಗೂ ಹಲಸಿನ ಮೌಲ್ಯ ವರ್ಧನೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಸಂಸ್ಥೆಯ ನಿರ್ದೇಶಕ ನಿರಂಜನ್ ಪೋಳ್ಯ ಹೇಳಿದರು.

Ad Widget

Ad Widget alt="Ad Widget"/>

Ad Widget

ಒಂದು ಸಾವಿರ ಜೇನು ಪೆಟ್ಟಿಗೆಯನ್ನು ಸಂಸ್ಥೆಹೊಂದಿದ್ದು, 100 ಮಂದಿ ಅನುಭವಿಗಳಲ್ಲಿ ನಿರ್ವಹಣೆ ಮಾಡಿಸಲಾಗುತ್ತಿದೆ. ಪುತ್ತೂರಿನ ಹೊರ ವಲಯ ಪಂಜಳದಲ್ಲಿ ಅಂತರಾಷ್ಟ್ರೀಯ ಮಟ್ಟದ ಜೇನು ಸಂಸ್ಕರಣಾ ಘಟಕ ನಿರ್ಮಾಣವಾಗುತ್ತಿದ್ದು ಅತಿ ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದರು. ಪುತ್ತೂರಿನ ವಾರ್ತಾಭವನದಲ್ಲಿ ಅವರು ಪತ್ರಿಕಾಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಭಾರತದಲ್ಲಿ ಜೇನು ಕೃಷಿ ಹೆಚ್ಚಾಗಬೇಕೆಂಬ ನಿಟ್ಟಿನಲ್ಲಿ ಪ್ರಾರಂಭವಾದ ನ್ಯಾಷನಲ್ ಗೀ ಬೋರ್ಡ್ ಸಹಕಾರದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಸಂಸ್ಕರಣ ಕೇಂದ್ರವನ್ನು ಸ್ಥಾಪಿಸುವ ಕಾರ್ಯವಾಗಿದೆ. ಈ ಮೂಲಕ ರಫ್ತು ಗುಣಮಟ್ಟದ ಜೇನನ್ನು ಸಿದ್ದಪಡಿಸಿ ಕಳುಹಿಸುವ ಉದ್ದೇಶವನ್ನು ಸಂಸ್ಥೆಯ ಮೂಲಕ ಇಟ್ಟುಕೊಳ್ಳಲಾಗಿದೆ. ದಕ್ಷಿಣ ಭಾರತದಲ್ಲೇ ದೊಡ್ಡ ಪ್ಲಾಂಟ್ ಇದಾಗಿದ್ದು, 2.5ಟನ್ ಜೇನಿನ ಸಂಸ್ಕರಣೆ ಮಾಡುವ ಎರಡು ಯಂತ್ರವನ್ನು ಹೊಂದಲಾಗಿದೆ ಎಂದರು.

ಪ್ಯಾಕಿಂಗ್, ದಾಸ್ತಾನು ಮಾಡುವ ವ್ಯವಸ್ಥೆ ಸೇರಿ ಸಂಪೂರ್ಣ ವ್ಯವಸ್ಥೆಯನ್ನು ಹೊಂದಲಾಗಿದೆ. ದಿನದಲ್ಲಿ ಸುಮಾರು 15 ಟನ್ ಸಂಸ್ಕರಣೆ ಮಾಡಲು ಸಾಧ್ಯವಿದ್ದು, ಭವಿಷ್ಯದ ಚಿಂತನೆಯನ್ನು ಇಟ್ಟುಕೊಂಡು ವ್ಯವಸ್ಥೆ ಮಾಡಲಾಗಿದೆ. ದ. ಕ. ಜೇನು ಕೃಷಿಕರ ಸಭೆಯನ್ನು ನಡೆಸಿದ್ದು, ಉದ್ದೇಶಗಳನ್ನು, ಸೇವೆಗಳ ಬಗ್ಗೆ ತಿಳಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget

ಸುಮಾರು 40 ಟನ್ ಹಲಸನ್ನು ಖರೀದಿಸಿ, 25ಮಂದಿ ಮಹಿಳಾ ಉದ್ಯೋಗಿಗಳ ಮೂಲಕ ಮಂಗಳೂರಿನ ಆಹಾರಸಂಸ್ಥೆಗೆ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನ ಇನ್ನಷ್ಟು ಹೆಚ್ಚಿನ ಮಹತ್ವ ನೀಡುವ ಕಾರ್ಯ ನಡೆಯಲಿದೆ. ಮಣ್ಣು ಮತ್ತು ನೀರಿನ ಸುಸ್ಥಿರತೆಯ ವಿಚಾರಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಭಾರತೀಯ ಕಿಸಾನ್ ಸಂಘದ ಜತೆಗೆ ಒಪ್ಪಂದ ಮಾಡಿಕೊಂಡು ಬಿದಿರು ಕೃಷಿಗೆ ಒತ್ತು ನೀಡಲಾಗುತ್ತಿದೆ. 10 ಸಾವಿರ ಬಿದಿರು ಗಿಡವನ್ನು ಈಗಾಗಲೇ ವಿತರಣೆ ಮಾಡಿದ್ದು, 30ಎಕ್ರೆ ಜಾಗದಲ್ಲಿ ಬಿದಿರು ಕೃಷಿ ಮಾಡಲಾಗಿದೆ. ಈ ಮೂಲಕ ಮಣ್ಣಿನ ಸವಕಳಿಯನ್ನು ಕಡಿಮೆ ಮಾಡಿ ನೀರಿನ ಅಭಾವನ್ನು ನೀಗಿಸಬಹುದಾಗಿದೆ. ಕೃಷಿಕರಿಗೆ ನಾಟಿಗೆ ಸಹಾಯವಾಗುವ ನಿಟ್ಟಿನಲ್ಲಿ ವಿವಿಧ ಕಂಪನಿಗಳ ಸಿಎಸ್ ಆರ್ ಫಂಡ್ ಬಳಸುವ ನಿಟ್ಟಿನಲ್ಲಿಯೂ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಮೂಲಚಂದ್ರ ಕೆ. ಮಾತನಾಡಿ ಸಮಗ್ರವಾದ ರೈತೋಪಯೋಗಿ ಕಾರ್ಯ ನಡೆಸುವ ಕಲ್ಪನೆಯನ್ನಿಟ್ಟು ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ರೈತರಿಗೆ ಬಿದಿರು ಬೆಳೆಯಲು ಪ್ರೋತ್ಸಾಹಿಸುವ ಜತೆಗೆ ಗಿಡಗಳ ಪೂರೈಕೆ ಕಾರ್ಯ ಸಂಸ್ಥೆಯ ಮೂಲಕ ನಡೆಸಲಾಗುತ್ತದೆ. ಕೈಗಾರಿಕೋಧ್ಯಮಗಳ ಕಾರ್ಯಾಗಾರದಲ್ಲಿ ದಿನಕ್ಕೆ 3 ಸಾವಿರ ಬಿದಿರಿನ ಬೇಡಿಕೆಯನ್ನು ಇಟ್ಟಿದ್ದರು. ಬಿದಿರಿಗೆ ಉತ್ತಮ ಬೇಡಿಕೆಯಿದ್ದು, ಭವಿಷ್ಯದಲ್ಲಿ ಕಲ್ಲಿದ್ದಲಿಗಿಂತ ಉತ್ತಮ ಉರುವಲಾಗಿ ಬಳಕೆ ಮಾಡಬಹುದಾಗಿದೆ. ಸದ್ಯ ಇರುವ ಬೇಡಿಕೆಯನ್ನು ಪೂರೈಸುವಷ್ಟು ಶಕ್ತಿಯನ್ನು ಸಂಸ್ಥೆ ಹೊಂದಿಲ್ಲ ಎಂದು ತಿಳಿಸಿದರು. ನಿರ್ದೇಶಕರಾದ ರಾಮ ಪ್ರತೀಕ್ ಕರಿಯಾಲ, ನಿರಂಜನ್ ಪೋಳ್ಯ, ಶ್ರೀನಂದನ್ ಕೆ., ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಸುವರ್ಣ ಇದ್ದರು.

ನೂತನ ಲೋಗೊ ಅನಾವರಣ


ಸಂಸ್ಥೆಯ ನೂತನ ಲೋಗೋ ವನ್ನು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ನ.28ರಂದು ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು “ಕೃಷಿಕರ ಸರ್ವತೋಮುಖ ಅಭಿವೃದ್ಧಿಗೆ ಪ್ರಾರಂಭವಾದ ಗ್ರಾಮಜನ್ಯ ಸಂಸ್ಥೆ, ಪ್ರಧಾನಿಗಳ ದೂರ ದೃಷ್ಠಿಯ ಯೋಜನೆಯನ್ನು ಸಫಲಗೊಳಿಸುವ ನಿಟ್ಟಿನಲ್ಲಿ ರೂಪುಗೊಂಡಿದೆ. ಕೃಷಿಕರ ವಿವಿಧ ಉತ್ಪನ್ನಗಳನ್ನು ದೇಶ ವಿದೇಶದಲ್ಲಿ ಮಾರುಕಟ್ಟೆ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ. ಪುತ್ತೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಇಷ್ಟು ದೊಡ್ಡ ಪ್ರಯತ್ನಕ್ಕೆ ಕೈಹಾಕಿರುವುದು ಶ್ಲಾಘನೀಯ ವಿಚಾರವಾಗಿದೆ ಎಂದರು.

ಲೊಗೋ ಅನಾವರಣ ಸಂದರ್ಭದ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೇವೆಯನ್ನು ನಡೆಸುವ ಮೂಲಕ ಸಂಸ್ಥೆಯ ಯಶಸ್ವಿಗೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

Ad Widget
Click to comment

Leave a Reply

ಸುಳ್ಯ

Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ

Published

on

Ad Widget

Ad Widget

Ad Widget

Ad Widget

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget

Ad Widget

Ad Widget

ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.

Ad Widget

Ad Widget

ರೈನಾ ಮಡಿಕೇರಿಯ ಲೀಲಾ ಪ್ಯಾಲೇಸ್ ಗೆ ತೆರಳಿದರು.

Ad Widget
Continue Reading

ಸ್ಥಳೀಯ

Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!

Published

on

Ad Widget

Ad Widget

Ad Widget

Ad Widget

ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.

Ad Widget

Ad Widget <> Ad Widget

ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್‌ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್‌ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.

Ad Widget

Ad Widget

ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.

ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್‌ಗಳ ಪೈಕಿ ಆರು ಲೇನ್‌ಗಳನ್ನು (3+3) ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.

ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.

ಬಿ.ಸಿ. ರೋಡ್‌ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.

ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.

ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.

13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.

ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ

Published

on

Ad Widget

Ad Widget

Ad Widget

Ad Widget

ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.

Ad Widget

Ad Widget alt="Ad Widget"/>

Ad Widget

ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.

Ad Widget

Ad Widget <> Ad Widget

ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.

ಏನೇನು ಪ್ರಸ್ತಾವಗಳಿವೆ?

Ad Widget

Ad Widget
  • ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
  • ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
  • ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
  • ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
  • ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್‌ಗಳಲ್ಲಿ ಆರಂಭಿಸಲು ಸಲಹೆ.
  • ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!