ರಾಜಕೀಯ
Ashok Rai-ರಸ್ತೆ ಹೊಂಡಗಳಿಗೆ ಪ್ಯಾಚ್ ವರ್ಕ್ ಮಾಡಿ; ಇಂಜನಿಯರ್ಗಳಿಗೆ ಶಾಸಕ ಅಶೋಕ್ ರೈ ಸೂಚನೆ
ಮಳೆಗಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಲೋಕೋಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಗೆ ಸೂಚನೆಯನ್ನು ನೀಡಿದ್ದು ಅದರಂತೆ ಬಹುತೇಕ ಕಡೆಗಳಲ್ಲಿ ರಸ್ತೆ ಹೊಂಡ ಮುಚ್ಚುವ ಕಾರ್ಯ ನಡೆದಿದ್ದು, ಇನ್ನು ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.
ಪುತ್ತೂರು: ಮಳೆಗಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಲೋಕೋಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಗೆ ಸೂಚನೆಯನ್ನು ನೀಡಿದ್ದು ಅದರಂತೆ ಬಹುತೇಕ ಕಡೆಗಳಲ್ಲಿ ರಸ್ತೆ ಹೊಂಡ ಮುಚ್ಚುವ ಕಾರ್ಯ ನಡೆದಿದ್ದು , ಇನ್ನು ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.
ಈ ಬಾರಿ ವಿಪರೀತ ಪ್ರಮಾಣದಲ್ಲಿ ಮಳೆ ಇದ್ದ ಕಾರಣ ಬಹುತೇಕ ರಸ್ತೆಗಳು ಹೊಂಡಮಯವಾಗಿದ್ದು , ಮಳೆ ನಿಲ್ಲದೆ ಇರುವ ಕಾರಣಕ್ಕೆ ತೇಪೆ ಕಾಮಗಾರಿ ನಡೆಸಲೂ ಅಡ್ಡಿಯಾಗಿತ್ತು. ದೊಡ್ಡ ಗಾತ್ರದ ಹೊಂಡಗಳಿಗೆ ವೆಟ್ ಮಿಕ್ಸ್ ಹಾಕಿದ್ದರೂ ಮಳೆಯ ಕಾರಣಕ್ಕೆ ಅದು ಕೊಚ್ಚಿ ಹೋಗಿತ್ತು. ಮಳೆ ನಿಂತ ತಕ್ಷಣವೇ ತೇಪೆ ಕಾಮಗಾರಿ ನಡೆಸುವಂತೆ ಶಾಸಕರು ಇಲಾಖೆಗೆ ಸೂಚನೆಯನ್ನು ನೀಡಿದ್ದರು.

ಪ್ಯಾರ್ಚ್ ವರ್ಕ್ ಆಗಲಿರುವ ರಸ್ತೆಗಳು:
ಉಪ್ಪಿನಂಗಡಿ-ಹಿರೆಬಂಡಾಡಿ-ಕೊಯಿಲ-ರಾಮಕುಮಜ, ಆಲಂತಾಯ -ನೆಲ್ಯಾಡಿ ರಸ್ತೆ, ನಿಡ್ಪಳ್ಳಿ ಪಾಣಜೆ ರಸ್ತೆ, ಮುಡಿಪಿನಡ್ಕ- ಈಶ್ವರಮಂಗಲ, ಪಂಚೋಡಿ -ಗಾಳಿಮುಖ ರಸ್ತೆ, ದೇವಸ್ಯ-ಚೆಲ್ಯಡ್ಕ-ಉಪ್ಪಳಿಗೆ- ದರ್ಬೆತ್ತಡ್ಕ- ಶೇಕಮಲೆ-ಕೌಡಿಚ್ಚಾರ್-ಇಲಮತಜೆ ಕೆಯ್ಯೂರು ರಸ್ತೆ, ಮುಕ್ರುಂಪಾಡಿ- ರೆಂಜಲಾಡಿ-ಸರ್ವೆ-, ಸವನೂರು-ಸಿದ್ದಮೂಲೆ-ಪಂಬಾರು ಮಚ್ಚಿಮಲೆ ರಸ್ತೆ, ಹಂಟ್ಯಾರು- ಬೆಟ್ಟಂಪಾಡಿ ರಸ್ತೆ, ಅರಿಯಡ್ಕ-ನಿಂತಿಕಲ್ ಕಟ್ಟೆ ರಸ್ತೆ, ಕೊಡಿಮರ-ದಾರಂದಕುಕ್ಕು- ಸೇಡಿಯಾಪು-ಕಡಂಬು, ರಸ್ತೆ, ಕುದ್ದುಪದವು- ತೋರಣಕಟ್ಟೆ- ಅಜಿಕಲ-ಸಾಜ-ಬಿಳಿಯೂರುಕಟ್ಟೆ ರಸ್ತೆ, ನೆಟ್ಟಣ ರೈಲ್ವೇ ಸ್ಟೇಷನ್ ಜಂಕ್ಷನ್, ಬೊಟ್ಟಡ್ಕ- ಕೆಮಜಾಳ ಜಂಕ್ಷನ್, ಕೊಂಬಾರು ಗ್ರಾಮದ ಬಗ್ಪುನಿ-ಮನಿಬಾಂಡ- ಗುಢಂಯ, ಕಲ್ಕುಂದ ರಸ್ತೆ, ಪುತ್ತೂರು ಉಪವಿಭಾಗ ವ್ಯಾಪ್ತಿಯ ಕಾಣಿಯೂರು- ಚಾರ್ವಾಕ- ಬರೆಪ್ಪಾಡಿ ರಸ್ತೆ, ದೋಳ್ಪಾಡಿ- ಎಡಮಂಗಲ- ಉಳಿಪ್ಪು-ಹೊಸ್ಮಠ-ಕುಟ್ರುಪ್ಪಾಡಿ-ಉದನೆ, ಶಿಭಾಜೆ-ಶಿಶಿಲ ರಸ್ತೆ, ಕಾಂಚನ -ಪೆರಿಯಡ್ಕ ರಸ್ತೆಯಲ್ಲಿನ ಹೊಂಡಗಳಿಗೆ ಪ್ಯಾಚ್ ವರ್ಕ್ ಮಾಡುವಂತೆ ಸೂಚಿಸಲಾಗಿದ್ದು ಇವುಗಳಲ್ಲಿ ಕೆಲವೊಂದು ರಸ್ತೆಗಳ ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ರಸ್ತೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ತೇಪೆಕಾಮಗಾರಿಗೆ ಒಟ್ಟು 104.86 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ.
ಈ ಬಾರಿ ವಿಪರೀತ ಮಳೆ ಇರುವ ಕಾರಣ ಬಹುತೇಕ ರಸ್ತೆಗಳು ಕೆಟ್ಟು ಹೋಗಿದೆ. ಮಳೆ ನಿಲ್ಲದೆ ಕಾಮಗಾರಿಯೂ ನಡೆಸುವಂತಿರಲಿಲ್ಲ. ಮಳೆ ನಿಂತ ತಕ್ಷಣ ಹೊಂಡ ಬಿದ್ದ ರಸ್ತೆಗಳಿಗೆ ತೇಪೆ ಕಾರ್ಯ ನಡೆಸುವಂತೆ ಇಲಾಖೆಗೆ ಸೂಚಿಸಿದ್ದೇನೆ. ಆ ಪ್ರಕಾರ ಪುತ್ತೂರು ಉಪವಿಭಗ ವ್ಯಾಪ್ತಿಗೊಳಪಟ್ಟ ರಸ್ತೆಗಳ ತೇಪೆ ಕಾಮಗಾರಿಗೆ ಒಟ್ಟು 104.86 ಲಕ್ಷ ರೂ ಅನುದಾನವನ್ನು ಸರಕಾರ ನೀಡಿದೆ. ಕಾಮಗಾರಿ ಪ್ರಗತಿಯಲ್ಲಿದೆ. ಈಗ ಬಹುತೇಕ ಗ್ರಾಮೀಣ ರಸ್ತೆಗಳು ಸುಗಮ ಸಂಚಾರಕ್ಕೆ ಅಣಿಯಾಗಿದೆ. -ಅಶೋಕ್ ರೈ ಶಾಸಕರು, ಪುತ್ತೂರು
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.















