Connect with us

ಬಿಗ್ ನ್ಯೂಸ್

Charvaka-ದೈವಸಾನಿಧ್ಯ ನಾಶಗೈದ ಮರಳುಗಾರಿಕೆಯ ವಿರುದ್ಧ ರೊಚ್ಚಿಗೆದ್ದ ಚಾರ್ವಾಕ ಗ್ರಾಮಸ್ಥರು : ಬೋಟ್ ಕಟ್ಟಿ ಹಾಕಿದವರ ವಿರುದ್ದ ಒತ್ತಡಕ್ಕೆ ಮಣಿದು ಕೇಸ್ ದಾಖಲಿಸಲು ಸಂಚು..! ಠಾಣೆಯ ಮುಂದೆ ಜಮಾಯಿಸಿದ ಗ್ರಾಮಸ್ಥರು : ಆಮೇಲೆ ನಡೆದದ್ದೇನೂ..?

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಕಾಣಿಯೂರು, ನ. 29: ಮರಳುಗಾರಿಕೆ ನಡೆಸಲು ಬಂದವರ ಬೋಟನ್ನು ನದಿಯ ಪೊದೆಗೆ ಊರವರು ಕಟ್ಟಿ ಹಾಕಿದ ಘಟನೆ ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಬೋಟ್ ಕಟ್ಟಿ ಹಾಕಿವರ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎನ್ನುವ ಮಾಹಿತಿ ಪಡೆದ ನೂರಾರು ಸ್ಥಳೀಯರು ಸಂಜೆ ವೇಳೆ ಕಡಬ ಠಾಣೆಯ ಮುಂಭಾಗದಲ್ಲಿ ಜಮಾಯಿಸಿದ್ದರು.

Ad Widget

Ad Widget alt="Ad Widget"/>

Ad Widget

ಬುಧವಾರದಂದು ಚಾರ್ವಾಕ ಗ್ರಾಮದಲ್ಲಿ ಹರಿಯುವ ಕುಮಾರಧಾರ ನದಿಯಲ್ಲಿ ಮರಳುಗಾರಿಕೆ ನಡೆಸಲು ಬೋಟ್ ಸಮೇತ ತಂಡವೊಂದು ಬಂದಿತ್ತು. ಇದು ಗಮನಕ್ಕೆ ಬರುತ್ತಲೇ ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಹಾಗೂ ಊರವರು ಸೇರಿ ಚಾರ್ವಾಕ ಗ್ರಾಮದಲ್ಲಿ ಮರಳುಗಾರಿಕೆ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget

Ad Widget <> Ad Widget

ಅಲ್ಲದೇ ಯಾವುದೇ ಕಾರಣಕ್ಕೂ ಗ್ರಾಮದಲ್ಲಿ ಮರಳುಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಗ್ರಾಮಸ್ಥರು ಒಕ್ಕೊರೊಳ ನಿರ್ಣಯವನ್ನು ಕೈಗೊಂಡು, ಮರಳುಗಾರಿಕೆ ನಡೆಸುವವರಿಗೆ ತಿಳಿಸಿದ್ದಾರೆ ಊರವರ ಪ್ರತಿರೋಧ ಗಮನಿಸಿದ ಮರಳುಗಾರಿಕೆಯ ತಂಡ ಅವತ್ತು ಬೋಟ್ ಸಮೇತ ಅಲ್ಲಿಂದ ಕಾಲ್ಕಿತ್ತಿತ್ತು.

ಆದರೇ ಶುಕ್ರವಾರ ಮತ್ತೆ ಬೋಟ್ ಮೂಲಕ ಮರಳುಗಾರಿಕೆಯ ತಂಡ ಆಗಮಿಸಿದ್ದು, ಉದ್ರಿಕ್ತ ಗ್ರಾಮಸ್ಥರು ಬೋಟನ್ನು ಹಿಡಿದು ಕಟ್ಟಿಹಾಕಿದ್ದಾರೆ. ಈ ವೇಳೆ ಬೋಟ್ನಲ್ಲಿದ್ದ ಕಾರ್ಮಿಕರು ಈಜಿ ಆಚೆ ಬದಿಗೆ ಪರಾರಿಯಾಗಿದ್ದರು. ಕುಂಬ್ಲಾಡಿಯ ಇನ್ನೊಂದು ಭಾಗ ಪೆರಾಬೆ ಗ್ರಾಮದ ಕುಂಟ್ಯಾನ ಎಂಬಲ್ಲಿ ಯಾಂತ್ರಿಕೃತ ಮರಳುಗಾರಿಗೆ ನಡೆಸುತ್ತಿದ್ದ ತಂಡವೇ ಈ ಭಾಗಕ್ಕೆ ಬಂದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

Ad Widget

Ad Widget

ನಾಡೋಳಿಯ ವಯೋವೃದ್ದರೊಬ್ಬರ ಹೆಸರಿನಲ್ಲಿ ಪೆರಾಬೆ ಗ್ರಾಮದಲ್ಲಿ ಮರಳುಗಾರಿಕೆ ನಡೆಸಲು ಪಡೆದ ಅನುಮತಿಯನ್ನು ಬಳಸಿಕೊಂಡು ಬೆಳ್ಳಾರೆಯ ಹಾಗೂ ಸವಣೂರಿನ ಮರಳು ದಂಧೆಕೋರರಿಬ್ಬರು ಚಾರ್ವಾಕ ಗ್ರಾಮದಲ್ಲಿ ಮರಳುಗಾರಿಕೆ ನಡೆಸಲು ಮುಂದಾಗಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದರಲ್ಲಿ ಓರ್ವ ಮರಳು ದಂಧೆಕೋರನ ಮನೆಗೆ 6 ತಿಂಗಳ ಹಿಂದೆ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿತ್ತು ಹಾಗೂ ಆತನ ವಿರುದ್ದ ಹಲವು ಪ್ರಕರಣ ದಾಖಲಾಗಿತ್ತು. ಇದೇ ವ್ಯಕ್ತಿ ಚಾರ್ವಕ ಗ್ರಾಮದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಕಟ್ಟಿ ಹಾಕಿದ ಬೋಟ್ ಬಿಡದಿದ್ದರೇ , ಕಟ್ಟಿ ಹಾಕಿದವರ ಮೇಲೆ ಅಟ್ರಾಸಿಟಿ ಕೇಸ್ ಹಾಕಿಸುವುದಾಗಿ ಬೆದರಿಕೆಯನ್ನು ಹಾಕಿದ್ದು ಪ್ರಕರಣ ಮತ್ತಷ್ಟೂ ತೀವ್ರ ಸ್ವರೂಪ ಪಡೆಯಲು ಕಾರಣವಾಗಿದೆ.

ಗ್ರಾಮಸ್ಥರ ಆರೋಪವೇನು ?
• ಈ ರೀತಿ ಒಳ ಗುತ್ತಿಗೆ ಪಡೆದು ಮರಳುಗಾರಿಕೆ ನಡೆಸುವುದು ಗಣಿ ಇಲಾಖೆಯ ನಿಯಮದ ಪ್ರಕಾರ ಕಾನೂನು ಬಾಹಿರ.
• ಅಲ್ಲದೇ ಯಂತ್ರಗಳನ್ನು ಬಳಸಿ ಮರಳುಗಾರಿಕೆ ನಡೆಸಲು ಅನುಮತಿ ಇಲ್ಲದಿದ್ದರೂ ರಾಜರೋಷವಾಗಿ ಯಂತ್ರಗಳ ಮೂಲಕ ನದಿಯಿಂದ ಮರಳನ್ನು ಎತ್ತಲಾಗುತ್ತಿದೆ.

• ಪರವಾನಿಗೆಯಲ್ಲಿರುವ 5 ಕಿಮೀ ವ್ಯಾಪ್ತಿಯನ್ನು ದಾಟಿ ಬಂದು ಚಾರ್ವಾಕ ಗ್ರಾಮದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ.

• ಇನ್ನು ನದಿಯಲ್ಲಿ ಡ್ರಜ್ಜಿಂಗ್ ಯಂತ್ರಗಳನ್ನು ಬಳಸಬಾರದೆಂಬ ಕಟ್ಟುನಿಟ್ಟಿನ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ನದಿಯಲ್ಲೇ ಮರಳು ಹಾಗೂ ಮಣ್ಣನ್ನು ಬೇರ್ಪಡಿಸುವ ಕಾರ್ಯ ಮಾಡುವ ಮೂಲಕ ನದಿಯನ್ನು ಕಲುಷಿಗೊಳಿಸಲಾಗುತ್ತಿದೆ

•ಹಾಗೂ ಪರವಾನಿಗೆಯಲ್ಲಿ ನಮೂದಿಸಿದಕ್ಕಿಂತ ಹತ್ತು ಪಟ್ಟು ಹೆಚ್ಚು ಮರಳು ತೆಗೆಯುವ ಮೂಲಕ ಸರಕಾರಕ್ಕೆ ರಾಜಸ್ವ ನಷ್ಟ ಮಾಡುತ್ತಿದ್ದಾರೆ
ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶ

ನಿನ್ನೆ ಸಂಜೆ ಕಡಬ ಠಾಣೆಯಲ್ಲಿ ಏನಾಯಿತು ?
ಮರಳು ತೆಗೆಯುವ ಬೋಟನ್ನು ಕಟ್ಟಿ ಹಾಕಿದ್ದಾರೆಂದು ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಕುಂಬ್ಲಾಡಿಯ ಓರ್ವ ವ್ಯಕ್ತಿಯನ್ನು ಠಾಣೆಗೆ ವಿಚಾರಣೆಗೆ ಕರೆದಿದ್ದರು.

ಪೊಲೀಸರು ಕರೆದ ವ್ಯಕ್ತಿಯ ಜೊತೆ 150 ಮಿಕ್ಕಿ ಗ್ರಾಮಸ್ಥರು ಠಾಣೆಗೆ ಆಗಮಿಸಿದರು. ಠಾಣೆಯಲ್ಲಿ ಜಮಾಯಿಸಿದ್ದ ಚಾರ್ವಾಕದ ಸ್ಥಳೀಯರು ಪರವಾನಿಗೆ ಪಡೆದವರು ಮತ್ತು ಗಣಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿವಂತೆ ಪಟ್ಟು ಹಿಡಿದಿದ್ದರು. ಮರಳುಗಾರಿಕೆ ಪರವಾನಿಗೆ ಪಡೆದ ವ್ಯಕ್ತಿ ಠಾಣೆಗೆ ಆಗಮಿಸಿದ್ದರು. ಈ ವೇಳೆ ಮಾತುಕತೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆಯಾಗುವುದಾದರೆ ಪರವಾನಿಗೆಯನ್ನು ರದ್ದುಪಡಿಸಲು ಗಣಿ ಇಲಾಖೆಗೆ ಕೇಳಿಕೊಳ್ಳುತ್ತೇನೆ ಎಂದು ಉದ್ರಿಕ್ತ ಗ್ರಾಮಸ್ಥರಿಗೆ ಅವರು ಭರವಸೆ ನೀಡಿದರು.

ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ವರದಿ ನೀಡಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದರು. ಅನಂತರ ಸ್ಥಳೀಯರು ತೆರಳಿದ್ದಾರೆ. ಬೋಟ್ ಸದ್ಯ ಕಟ್ಟಿ ಹಾಕಿದ ಸ್ಥಿತಿಯಲ್ಲೇ ಇದೆ.

Ad Widget
Click to comment

Leave a Reply

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!