ಬಿಗ್ ನ್ಯೂಸ್
DK JCB Union | ಜಮ್ಮು-ಕಾಶ್ಮೀರ ಆರ್ಟಿಕಲ್ 370 ಮಾದರಿ ನಿಯಮ ಜಾರಿ ತರಲು ಪೀಲ್ಡಿಗಿಳಿದ ಪುತ್ತೂರಿನ ಜೆಸಿಬಿ ಯೂನಿಯನ್..! ಕಡಿಮೆ ದರಕ್ಕೆ ಕೆಲಸ ಮಾಡುವ ಜೆಸಿಬಿ ಮಾಲಕರಿಗೆ ಜೀವಬೆದರಿಕೆ ವಿಡಿಯೋ ವೈರಲ್ ಆದರೂ ಜಿಲ್ಲಾಡಳಿತ ಮೌನ..! ಏನಿದು ಸ್ವಯಂಘೋಷಿತ ನಿಯಮ..? ಸಂಪೂರ್ಣ ವಿವರ ಇಲ್ಲಿದೆ
ಪುತ್ತೂರು: ಹೊರ ಜಿಲ್ಲೆ, ರಾಜ್ಯಗಳಲ್ಲಿ ಬದುಕಿ ಕಟ್ಟಿಕೊಂಡವರಿರುವ ತುಳುನಾಡಿನಲ್ಲೊಂದು ಹೊರ ಜಿಲ್ಲೆಯವರ ಮೇಲೆ ಹೊಸ ದಬ್ಬಾಳಿಕೆ ನಡೆಯುತ್ತಿದೆ (DK JCB Union). ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಕೆಲಸ ನಿರ್ವಹಿಸುವ ಜೆಸಿಬಿ ಆಪರೇಟರ್, ಮಾಲೀಕರಿಗೆ ಇಲ್ಲಿಯ ಜೆಸಿಬಿ ಯುನಿಯನ್ ನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಆರ್ಟಿಕಲ್ 370 ಮಾದರಿ ಪುತ್ತೂರಿಗೆ ಬೇರೆಯದೆ ಕಾನೂನು ಹೇರುವ ದುಸ್ಸಾಹಸಕ್ಕೆ ಮುಂದಾಗಿದ್ದಾರೆ.
ಇಲ್ಲಿಯ ಯೂನಿಯನ್ನ ನಿಯಮ ಪಾಲಿಸಲು ಒಪ್ಪದವರು ತಕ್ಷಣ ವಾಹನ ಸಹಿತ ಜಿಲ್ಲೆಯಿಂದ ತೊಲಗಬೇಕೆಂಬ ದೇಶದಲ್ಲಿ ಇಲ್ಲದ ನಿಯಮ ಜಾರಿಗೆ ತಂದಿದ್ದಾರೆ, ಮಾತ್ರವಲ್ಲದೇ ಆ ನಿಯಮ ತಾವೇ ಜಾರಿಗೆ ತರಲು ಸ್ವತ: ತಾವೇ ಪೀಲ್ಡಿಗೂ ಇಲ್ಲಿದ್ದಾರೆ.
ಪುತ್ತೂರು ಆಸುಪಾಸಿನಲ್ಲಿ ತಿಂಗಳಿಂದ ದಬ್ಬಾಳಿಕೆ ಪ್ರಾರಂಭವಾಗಿದ್ದು, ಬೇರೆ ಪ್ರದೇಶದ ಕಾರ್ಮಿಕರು ಜೀವ ಭಯದಲ್ಲಿ ಕೆಲಸ ಮಾಡುವಂತಾಗಿದೆ. ಇದರ ವಿರುದ್ದ ಕ್ರಮ ಕೈಗೊಳ್ಳಬೇಕಾದ ಇಲಾಖೆ ಕಣ್ಣುಮುಚ್ಚಿ ಕುಳಿತಿರುವುದರಿಂದ ಯೂನಿಯನ್ ಗೂಂಡಾಯಿಸಂ ಗೆ ಬ್ರೇಕ್ ಹಾಕುವವರು ಯಾರೆಂಬ ಪ್ರಶ್ನೆ ಮೂಡಿದೆ.
ಪುರುಷರಕಟ್ಟೆಗೆ ಹಾಸನದಿಂದ ಜೆಸಿಬಿ ಬಂದು ಕೆಲಸ ಮಾಡುತ್ತಿದೆ ಎಂದು ಅ.25ರಂದು ಮೊದಲ ಬಾರಿಗೆ ಸ್ಥಳೀಯ ಜೆಸಿಬಿ ಯೂನಿಯನ್ ಆಕ್ಷೇಪ ವ್ಯಕ್ತಪಡಿಸಿ ಕೆಲಸವನ್ನು ತಡೆಯುವ ಕಾರ್ಯವಾಗಿತ್ತು. ಆ ಬಳಿಕ ನ.27ರಂದು ಪುಣಚದಲ್ಲಿ ಕುದ್ದುಪದವು ನಿವಾಸಿ ಬಂಟ್ವಾಳ ತಾಲೂಕು ನೊಂದಾವಣಿ ಹೊಂದಿದ ಜೆಸಿಬಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋದ ಪುತ್ತೂರು ಅರ್ಥ ಮೂವರ್ಸ್ ಅಸೋಸಿಯೇಷನ್ ನವರು ಜೆಸಿಬಿಯನ್ನು ಓಡಿಸಿದ್ದಲ್ಲದೆ, ವಿಟ್ಲ ಠಾಣೆಯಲ್ಲಿ ಜೆಸಿಬಿ ಮಾಲೀಕರನ್ನು ಒಂದು ದಿನ ಕೂರಿಸಿ ಷರತ್ತುಗಳಿಗೆ ಒಪ್ಪುವಂತೆ ಒತ್ತಡವನ್ನು ಅಧಿಕಾರಿಗಳ ಮೂಲಕ ಹಾಕಿಸಿ ಐದು ದಿನದ ಗಡುವು ನೀಡಲಾಗಿದೆ. ನ.28ಕ್ಕೆ ಈಶ್ವರಮಂಗಲದಲ್ಲಿ ಕೇರಳ ಜೆಸಿಬಿಯನ್ನು ತಡೆಯಲಾಗಿದೆ.
ಸಾಮಾನ್ಯವಾಗಿ ಜೆಸಿಬಿ ಮೂಲಕ ದಿನಕ್ಕೆ 10 ಗಂಟೆಗಳ ಕಾಲ ಕೆಲಸವನ್ನು ನಿರ್ವಹಿಸಲಾಗುತ್ತಿದ್ದು, ಸ್ಥಳೀಯರು 200ರೂ ಹೆಚ್ಚು ಪಡೆಯುವುದರಿಂದ ಗ್ರಾಹಕರಿಗೆ ಸುಮಾರು 2ಸಾವಿರದಷ್ಟು ನಷ್ಟವುಂಟಾಗುತ್ತದೆ. ಈ ಕಾರಣದಿಂದ ವೇಗದ ಕೆಲಸ ಹಾಗೂ ಕಡಿಮೆ ದರದ ಕಡೆಗೆ ಗ್ರಾಹಕರು ಹೋಗುತ್ತಿದ್ದಾರೆ.
ಸುಮಾರು 15 ವರ್ಷಗಳಿಂದ ಸ್ಥಳೀಯವಾಗಿ ಬಾಡಿಗೆ ಬಿಡಾರದಲ್ಲಿ ಇದ್ದು, ಕೆಲಸ ನಿರ್ವಹಿಸುವ ವ್ಯಕ್ತಿಗಳನ್ನು ಹೊರ ಜಿಲ್ಲೆಯವರೆಂದು ತಡೆದು ಗಾಡಿ ಸಹಿತ ಊರಿಗೆ ಹೋಗುವ ಎಂದು ಬೆದರಿಕೆ ಹಾಕುವ ಕೆಲಸವಾಗುತ್ತಿದೆ. ಇದೇ ರೀತಿಯಲ್ಲಿ ಘಟನೆಗಳು ಮುಂದುವರಿದರೆ ಹೊರ ಜಿಲ್ಲೆಯಲ್ಲಿರುವ ಜಿಲ್ಲೆಯ ಜನರು ಊರಿಗೆ ಬರುವ ದಿನ ದೂರವಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
ದರ ಹೆಚ್ಚಳಕ್ಕೆ ಹೊಸ ಪ್ಲಾನ್..!
ಹೊರ ಜಿಲ್ಲೆಯವರು ಕಡಿಮೆ ದರದಲ್ಲಿ ಉತ್ತಮ ಕೆಲಸವನ್ನು ಮಾಡಿಕೊಂಡು ಬರುತ್ತಿರುವುದರಿಂದ ಊರಿನವರನ್ನು ಬಿಟ್ಟು ಜನರು ಅವರನ್ನೇ ಹೆಚ್ಚು ಅವಲಂಬಿಸುತ್ತಿದ್ದಾರೆ. ಸ್ಥಳೀಯರು ಏಜೆಂಟ್ ಇಟ್ಟು ಕೆಲಸ ಪಡೆಯಲೂ ಸಾಧ್ಯವಾಗದ ಸ್ಥಿತಿ ಇದೆ. ಈ ಕಾರಣಕ್ಕೆ ಕೆಲಸವಾಗುವ ಜಾಗಗಳಿಗೆ ಹತ್ತಾರು ಮಂದಿ ನುಗ್ಗಿ ಎಲ್ಲರನ್ನೂ ಭಯ ಬೀಳಿಸಿ ಕೆಲಸವನ್ನು ಮಾಡದಂತೆ ತಡೆಯೊಡ್ಡುವ ಕಾರ್ಯವಾಗುತ್ತಿದೆ. ಈ ಮೂಲಕ ಹೊರ ಜಿಲ್ಲೆಯವರೂ ಯೂನಿಯನ್ ಹೇಳುವ ದರಕ್ಕೆ ಕೆಲಸ ಮಾಡುವ ಹೊಸ ಯೋಜನೆಯ ಭಾಗವೆಂಬ ಅಭಿಪ್ರಾಯ ಕೇಳಿ ಬರುತ್ತಿದೆ.
ಪುತ್ತೂರು ಶಾಸಕರಿಂದ ಎಚ್ಚರಿಕೆ..!
ವಿವಿಧ ತಾಲೂಕು ಸ್ಥಳೀಯ ಜೆಸಿಬಿ ಚಾಲಕ ಮಾಲೀಕರ ಸಂಘದ ವತಿಯಿಂದ ಹೊರ ಜಿಲ್ಲೆಯವರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಪುತ್ತೂರು ಅಧ್ಯಕ್ಷ ಜಯಂತ್ ಬೆದ್ರೋಡಿ, ಕಡಬ ಅಧ್ಯಕ್ಷ ಮನಮೋಹನ ರೈ, ಸುಳ್ಯ ಅಧ್ಯಕ್ಷ ಪದ್ಮನಾಭ ಬೀಡು, ಬಂಟ್ವಾಳ ಅಧ್ಯಕ್ಷ ರಂಜಿತ್ ರಾವ್, ಗೌರವ ಸಲಹೆಗಾರ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ಮಾತನಾಡಿದ ಅಶೋಕ್ ರೈ ಎಲ್ಲಾ ಕಡೆಯಲ್ಲಿ ವಿರೋಧ ವ್ಯಕ್ತ ಪಡಿಸುತ್ತಾ ಹೋದರೆ, ದೂರುಗಳಾಗಿ ಕಾನೂನು ಪ್ರಕಾರ ನೋಡಬೇಕಾಗುತ್ತದೆ. ಸಮಸ್ಯೆಗಳಿಗೆ ಪರಿಹಾರವಿದ್ದು, ಎರಡೂ ಕಡೆಯವರು ಕುಳಿತು ಸಾಧಕ ಭಾದಕಗಳನ್ನು ಚರ್ಚಿಸಿ ಒಂದು ಒಡಂಬಡಿಕೆಗೆ ಬರಬೇಕಾಗಿದೆ. ದರ ಸಮರವನ್ನು ಪ್ರತಿಯೊಬ್ಬರೂ ಎದುರಿಸಬೇಕಾಗಿದ್ದು, ಅದನ್ನು ನಿಯಂತ್ರಣ ಮಾಡಲು ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ಎಚ್ಚರಿಕೆ ನೀಡಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ15 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















