ಬಿಗ್ ನ್ಯೂಸ್
Sunita Williams-ತಿನ್ನೋದಕ್ಕಲ್ಲ… ಒಂದು ಮಹಾನ್ ಉದ್ದೇಶಕ್ಕೆ ಬಾಹ್ಯಾಕಾಶದಲ್ಲಿ ತರಕಾರಿ ಬೆಳೆಯುತ್ತಿರುವ ಗಗನ ಯಾತ್ರಿ ಸುನಿತಾ ವಿಲಿಯಮ್ಸ್
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಲಾಗದೇ ಅಲ್ಲಿಯೇ ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಬಾಹ್ಯಾಕಾಶದಲ್ಲೇ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳ ಭಯವಿದ್ದರೂ ವಿಶ್ರಾಂತಿಯ ಮೊರೆ ಹೋಗದೆ ಬಾಹ್ಯಾಕಾಶ ನಿಲ್ದಾಣದಲ್ಲೇ ಲೆಟಿಸ್ ಎಂಬ ಎಲೆ ತರಕಾರಿಯನ್ನು ಬೆಳೆಯುತ್ತಿದ್ದಾರೆ. ಆದರೆ ಈ ತರಕಾರಿಯನ್ನು ತಿನ್ನುವುದಕ್ಕೆ ಬೆಳೆಯುತ್ತಿಲ್ಲ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಲಾಗದೇ ಅಲ್ಲಿಯೇ ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಬಾಹ್ಯಾಕಾಶದಲ್ಲೇ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳ ಭಯವಿದ್ದರೂ ವಿಶ್ರಾಂತಿಯ ಮೊರೆ ಹೋಗದೆ ಬಾಹ್ಯಾಕಾಶ ನಿಲ್ದಾಣದಲ್ಲೇ ಲೆಟಿಸ್ ಎಂಬ ಎಲೆ ತರಕಾರಿಯನ್ನು ಬೆಳೆಯುತ್ತಿದ್ದಾರೆ. ಆದರೆ ಈ ತರಕಾರಿಯನ್ನು ತಿನ್ನುವುದಕ್ಕೆ ಬೆಳೆಯುತ್ತಿಲ್ಲ.
ಸುನಿತಾ ವಿಲಿಯಮ್ಸ್ ಅವರು ಬಾಹ್ಯಾಕಾಶದಲ್ಲಿ ಈ ತರಕಾರಿಯನ್ನು ಬೆಳೆಯುವ ಉದ್ದೇಶವೇನೆಂದರೆ, ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ನೀರಿನ ಮಟ್ಟವು ಸಸ್ಯಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಲು ಅವರು ಈ ಒಂದು ಪ್ರಯೋಗವನ್ನು ನಡೆಸುತ್ತಿದ್ದಾರೆ.
ಭವಿಷ್ಯದ ಅಂತರಗ್ರಹ ಬಾಹ್ಯಾಕಾಶ ಕಾರ್ಯಕ್ರಮಗಳು ಮತ್ತು ಭೂಮಿಯ ಮೇಲಿನ ಕೃಷಿ ಎರಡಕ್ಕೂ ಪ್ರಯೋಜನಕಾರಿಯಾಗುವ ಸಂಶೋಧನೆಯು ನಡೆಯುತ್ತಿದೆ. ಅದರ ಫಲಿತಾಂಶಗಳ ಆಧಾರದ ಮೇಲೆ ಹೊಸ ಕೃಷಿ ಪದ್ಧತಿಗಳನ್ನು ಭೂಮಿಯಲ್ಲಿಯೂ ಅಳವಡಿಸಬಹುದಾಗಿದೆ.
ತೇವಾಂಶದ ಮಟ್ಟವು ಸಸ್ಯದ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಎಷ್ಟು ಪೋಷಕಾಂಶಗಳು ಬದಲಾಗುತ್ತವೆ ಎಂಬುದನ್ನು ಪ್ರಯೋಗವು ನೋಡುತ್ತದೆ. ಬಾಹ್ಯಾಕಾಶದಲ್ಲಿ ಸುಸ್ಥಿರ ಕೃಷಿ ಹೇಗೆ ಸಾಧ್ಯ ಮತ್ತು ಸವಾಲುಗಳೇನು ಎಂಬುದರ ಕುರಿತು ಪ್ರಯೋಗಗಳು ಮಾಹಿತಿಯನ್ನು ಒದಗಿಸಬಹುದು. ಅದೇ ರೀತಿ, ಕಡಿಮೆ ನೀರಿನ ಲಭ್ಯತೆ ಇರುವ ಸ್ಥಳಗಳಲ್ಲಿ ಕೃಷಿ ಮಾಡಲು ಸಾಧ್ಯವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
ಏನಿದು ಲೆಟಿಸ್ ತರಕಾರಿ?
ಲೆಟಿಸ್ ಎಂಬುದು ಒಂದು ಎಲೆ ತರಕಾರಿಯಾಗಿದ್ದು, ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಲ್ಯಾಕ್ಟುಕಾ ಸಟಿವಾ ಎಂಬುದು ಲೆಟಿಸ್‌ನ ವೈಜ್ಞಾನಿಕ ಹೆಸರು. ಇದು ಡೈಸಿ ಕುಟುಂಬಕ್ಕೆ ಸೇರಿದ ಪ್ರಬೇಧವಾಗಿದೆ. ಆಸ್ಟರೇಸಿಗೆ ಸೇರಿದ ಎಲೆಗಳ ಹಸಿರು ಸಸ್ಯವಾಗಿದೆ. ಮೆಡಿಟರೇನಿಯನ್ ಪ್ರದೇಶದಲ್ಲಿ ಹುಟ್ಟಿಕೊಂಡ ಈ ತರಕಾರಿ ಮಾನವಕುಲಕ್ಕೆ ತಿಳಿದಿರುವ ಹಳೆಯ ಕೃಷಿಯಾಗಿದೆ. ಅಂದಹಾಗೆ ಲೆಟಿಸ್ ಕಡಿಮೆ ಕ್ಯಾಲೋರಿ ತರಕಾರಿಯಾಗಿದ್ದು, ವಿಟಮಿನ್ ಎ, ಕೆ ಮತ್ತು ಸಿ ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಫೈಬರ್‌ನ ಅತ್ಯುತ್ತಮ ಮೂಲವಾಗಿದೆ. ಈ ತರಕಾರಿಯಲ್ಲಿರುವ ಹೆಚ್ಚಿನ ನೀರಿನ ಅಂಶವು ಜಲಸಂಚಯನವನ್ನು ಒದಗಿಸುತ್ತದೆ. ಇದರಲ್ಲಿ ಪೊಟ್ಯಾಶಿಯಂ ಮತ್ತು ಕ್ಯಾಲ್ಸಿಯಂನಂತಹ ವಿವಿಧ ಖನಿಜಗಳು ಸಹ ಇವೆ.
ತಾಂತ್ರಿಕ ದೋಷದಿಂದ ಬಾಹ್ಯಾಕಾಶದಲ್ಲಿ ಸಿಲುಕಿರುವ ಗಗನಯಾತ್ರಿ:
ಬೋಯಿಂಗ್ ಸ್ಟಾರ್‌ಲೈನರ್ ಸ್ಪೇಸ್ ಕ್ಯಾಪ್ಸುಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಕಾರಣ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ದಲ್ಲಿರುವ ಭಾರತೀಯ ಮೂಲದ ಅಮೆರಿಕ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಬಚ್ ವಿಲೋರ್ ಭೂಮಿಗೆ ಆಗಮಿಸುವುದು ವಿಳಂಬವಾಗಲಿದೆ. ಕಳೆದ 180 ದಿನಗಳಿಗೂ ಹೆಚ್ಚು ಸಮಯದಿಂದ ಬಾಹ್ಯಾಕಾಶದಲ್ಲಿ ಸಿಲುಕಿದ್ದಾರೆ.
ಇನ್ನು ವಿಲ್ನೋರ್ ಮತ್ತು ವಿಲಿಯಮ್ಸ್‌ಗಾಗಿ ಮುಂಬರುವ ಕ್ರೂ ಡ್ರಾಗನ್ ಉಡಾವಣೆಯಲ್ಲಿ ಎರಡು ಸ್ಥಾನಗಳನ್ನು ಖಾಲಿ ಬಿಡಲು ನಾಸಾ ಸ್ಪೇಸ್‌ಎಕ್ಸ್‌ನೊಂದಿಗೆ ಚರ್ಚಿಸಿದೆ. 2025ರ ಆರಂಭದಲ್ಲಿ ಗಗನಯಾತ್ರಿಗಳನ್ನು ಭೂಮಿಗೆ ಮರಳಿ ತರಲು 2024ರ ಸೆಪ್ಟೆಂಬರ್ ನಲ್ಲಿ ಉಡಾವಣೆ ಮಾಡಲು ನಿಗದಿಪಡಿಸಲಾದ ಸ್ಪೇಸ್‌ಎಕ್ಸ್‌ನ ಕ್ಯೂ-9 ಮಿಷನ್ ಅನ್ನು ಬಳಸುವುದನ್ನು ಈ ಯೋಜನೆ ಒಳಗೊಂಡಿದೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಅಂತರ ರಾಜ್ಯ12 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು7 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಮಂಗಳೂರು14 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ11 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ13 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಅಂತರ ರಾಜ್ಯ12 hours agoFire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
-
ಉದ್ಯೋಗ8 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ6 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















