Connect with us

ವರದಿಗಳು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಜಾತ್ರೋತ್ಸವ : ಶುಭ ಸೂಚನೆಯೊಂದಿಗೆ ರಥ ಮಂದಿರದಿಂದ ರಥ ಬೀದಿಗೆ ಬ್ರಹ್ಮರಥ

Published

on

Ad Widget

Ad Widget

Ad Widget

Ad Widget

ಪುತ್ತೂರು: ಮಾ 22 : ಎಂಟುನೂರು ವರ್ಷಗಳ ಇತಿಹಾಸವಿರುವ, ಕರಾವಳಿಯ ಪ್ರಾಚೀನ ದೇವಾಲಯಗಳಲ್ಲಿ ಒಂದು ಎಂದು  ಗುರುತಿಸಿಕೊಂಡಿರುವ ಪುತ್ತೂರು ಸೀಮೆಯ ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವಕ್ಕೆ ಸಿದ್ದತೆಗಳು ಆರಂಭಗೊಳ್ಳುತ್ತಿದೆ. ನಲ್ಕುರಿಯಂತೆ ಎ.10 ರಿಂದ ಎ .19 ರವರೆಗೆ  ಹತ್ತು ದಿನಗಳ ಜಾತ್ರೋತ್ಸವದಲ್ಲಿ ಈ ಬಾರಿ ಎರಡು ಲಕ್ಷ ಕ್ಕಿಂತಲೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ.

Ad Widget

Ad Widget

Ad Widget

Ad Widget

ಪುತ್ತೂರು ಬೆಡಿ ಎಂದೇ ಖ್ಯಾತರವಾಗಿರುವ ಬ್ರಹ್ಮರಥೋತ್ಸವವು ಎ.17ರಂದು ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಮಾ.21ರಂದು ಬೆಳಿಗ್ಗೆ ರಥಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತರುವ ಕಾರ್ಯ ನಡೆಯಿತು, ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯರವರು ಬ್ರಹ್ಮರಥಕ್ಕೆ ಪುಷ್ಟ,ಗಂಧ, ಬಿಲ್ವಪತ್ರೆ ಅರ್ಪಿಸಿದರು. ಬಳಿಕ ಈ ಬಾರಿಯ ಜಾತ್ರೋತ್ಸವವು ನಿವಿರ್ಘ್ನವಾಗಿ ಹಾಗೂ‌ ವೈಭವೋಪೆತವಾಗಿ ನಡೆಯಲ್ಲಿ ಶ್ರೀ ದೇವರಲ್ಲಿ ಅವರು ಪ್ರಾರ್ಥಿಸಿದರು.     

Ad Widget

Ad Widget alt="Ad Widget"/>

Ad Widget

ದೇವಳದ ವ್ಯವಸ್ಥಾಪನಾ ಸಮಿತಿಯ ಹಿರಿಯ ಸದಸ್ಯ ಬಿ.ಐತ್ತಪ್ಪನಾಯ್ಕ ಅವರು ತೆಂಗಿನ ಕಾಯಿ ಒಡೆಯುವಮೂಲಕ ಬ್ರಹ್ಮರಥವನ್ನು ಮಂದಿರದಿಂದ ಹೊರಗೆ ತರುವ ಕಾರ್ಯಕ್ಕೆ ಚಾಲನೆ ನೀಡಿದರು. ನಗರ ಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್‌ರವರ ನಿರ್ದೇಶನದಂತೆ  ಕೈನ್ ಸಹಾಯದಿಂದ ರಥಮಂದಿರದಿಂದ ಬ್ರಹ್ಮರಥವನ್ನು  ಹೊರತರಲಾಯಿತು. ಬಳಿಕ ದೇವಾಲಯದ  ಪರಿಚಾರಕರು ರಥವನ್ನು ರಥಬೀದಿಗೆ ತಂದು ನಿಲ್ಲಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ ನಾರಾವಿ, ಬಿ.ಕೆ. ವೀಣಾ, ರಾಮದಾಸ್ ಗೌಡ, ಡಾ.ಸುಧಾ ಎಸ್ ರಾವ್, ದೇವಾಲಯದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಉದ್ಯಮಿ ಶಿವಪ್ರಸಾದ್ ರೈ, ಕಚೇರಿ ಸಹಾಯಕ ಪದ್ಮನಾಭ, ನಿತ್ಯ ಕರಸೇವಕ ರಾಮಚಂದ್ರ ಘಾಟಿ, ರೋಟರಿ ಕ್ಲಬ್ ಅಧ್ಯಕ್ಷ ಮಧು ನರಿಯೂರು, ಡಾ| ರಾಜೇಶ್ ಬೆಜ್ಜಂಗಳ ಮತ್ತಿತರರು ಉಪಸ್ಥಿತರಿದ್ದರು.

 ಬ್ರಹ್ಮರಥವೂ ರಥ ಬೀದಿ ಪ್ರವೇಶಿಸಿ ನಾಗ ಸನ್ನಿಧಿಯ ಮುಗುಳಿಗೆ ಸಮಾನಂತರವಾಗಿ ಬರುತ್ತಿದ್ದಂತೆ  ಬಿಲ್ವಪತ್ರೆ ಮತ್ತು ಗಂಧ ಪ್ರಸಾದ ಭೂಮಿಯನ್ನು ಸ್ಪರ್ಶಿಸಿ ರಥ ನಿಲ್ಲಿಸುವ ಸೂಚನೆ ನೀಡಿದೆ.

Ad Widget

Ad Widget

ಬ್ರಹ್ಮರಥಕ್ಕೆ ಕಬ್ಬಿಣದ ರಾಡ್ ಗಳನ್ನು ಅಳವಡಿಸುವ ಮೂಲಕ ಈ ಬಾರಿಯ ಜಾತ್ರೆಗೆ ರಥವನ್ನು ಸಿದ್ದಪಡಿಸುವ ಕಾರ್ಯವನ್ನು    ಮಾ.22ರಂದು  ದೇವಳದ ವತಿಯಿಂದ ಆರಂಭಿಸಲಾಯಿತು. ಬ್ರಹ್ಮರಥವನ್ನು ಪತಾಕೆಗಳಿಂದ ಅಲಂಕರಿಸುವ ಕೆಲಸವನ್ನು ಸುಬ್ರಹ್ಮಣ್ಯದ ರಥಕಟ್ಟುವ ಕೆಲಸಗಾರರಾದ ನಾಗೇಶ್ ಮತ್ತು ತಂಡದವರು ನಿರ್ವಹಿಸಲಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ಅಂತರ ರಾಜ್ಯ

Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ

Published

on

Ad Widget

Ad Widget

Ad Widget

Ad Widget

ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

Ad Widget

Ad Widget <> Ad Widget

ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್‌ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.

Ad Widget

Ad Widget

ರೈಲಿನಲ್ಲಿ ಬೆಂಕಿ ಹಚ್ಚುವುದು ಅಥವಾ ಸುಡುವ ವಸ್ತುಗಳ ಬಳಕೆಯಂತಹ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಪ್ರಯಾಣಿಕರು ತಕ್ಷಣ ದೂರು ನೀಡುವಂತೆ ರೈಲ್ವೆ ಸೂಚಿಸಿದೆ. ಇಂತಹ ಘಟನೆಗಳನ್ನು ‘ರೈಲ್ ಮದದ್’ ಪೋರ್ಟಲ್ ಮೂಲಕ ಅಥವಾ 139 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವರದಿ ಮಾಡಬಹುದಾಗಿದೆ

Ad Widget
Continue Reading

ಅಂತರ ರಾಜ್ಯ

WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!

Published

on

Ad Widget

Ad Widget

Ad Widget

Ad Widget

ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.

Ad Widget

Ad Widget <> Ad Widget

ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.

Ad Widget

Ad Widget

WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.

CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.

CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.

CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.

CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.

ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!