Connect with us

ಪುತ್ತೂರು

Shrinivas Kalyanotsava | ಪುತ್ತೂರಿನಲ್ಲಿ ಡಿ.28,29ರಂದು ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ: ಬೃಹತ್ ಧರ್ಮಸಂಗಮ – 75 ಸಾವಿರ ಮಂದಿಗೆ ಅನ್ನಸಂತರ್ಪಣೆ : ಡಿ.15ರಂದು ಭೂಮಿ ಪೂಜೆ : ಸೇವಾ ಟ್ರಸ್ಟ್ ಮೂಲಕ ಸಾಮಾಜಿಕ ಕಾರ್ಯಕ್ಕೆ ಒಂದು ವರ್ಷದಲ್ಲಿ 20 ಲಕ್ಷ ರೂ ವಿನಿಯೋಗಿಸಲಾಗಿದೆ : ಹಿಂದೂ ಸಮಾಜ ಸಂಘಟಿತರಾಗುವ ಸಂದೇಶ ನೀಡುವ ಕಾರ್ಯ ಕಲ್ಯಾಣೋತ್ಸವದಲ್ಲಿ ನಡೆಯಲಿದೆ – ಅರುಣ್ ಕುಮಾರ್ ಪುತ್ತಿಲ

Published

on



Ad Widget

Ad Widget

Ad Widget

Ad Widget

ಪುತ್ತೂರು: ಧರ್ಮ ಜಾಗೃತಿಯ ಕೆಲಸಗಳನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವ್ಯವಸ್ಥಿತವಾಗಿ ಮಾಡಿಕೊಂಡು ಬರುತ್ತಿದ್ದು, ಕಳೆದ ವರ್ಷದಂತೆ ಈ ವರ್ಷವೂ ಶ್ರೀನಿವಾಸ ಕಲ್ಯಾಣೋತ್ಸವ (Shrinivas Kalyanotsava) ನಡೆಸಬೇಕೆಂಬ ಭಕ್ತರ ಅಪೇಕ್ಷೆಯಂತೆ ಡಿ.28, 29ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ. ಇದರ ಪೂರ್ವ ಭಾವಿಯಾಗಿ ಡಿ.15ರಂದು ರಥದ ಕೊಟ್ಟಿಗೆ ಸಮೀಪದಲ್ಲಿ ಸೇವಾ ಕೌಂಟರ್ ಹಾಗೂ ಭೂಮಿ ಪೂಜೆ ನಡೆಯಲಿದೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದರು.

Ad Widget

Ad Widget

Ad Widget

Ad Widget

ಧಾರ್ಮಿಕ ಕಾರ್ಯಕ್ರಮ, ಶೈಕ್ಷಣಿಕ ಸಹಕಾರ, ಕ್ರೀಡಾ ಸಾಧಕರಿಗೆ ಸಹಾಯ, ವೈದ್ಯಕೀಯ ಶಿಬಿರ ಸೇರಿ ಸಾಮಾಜಿಕ ಚಟುವಟಿಕೆಯಲ್ಲಿ ಸೇವಾ ಟ್ರಸ್ಟ್ ಒಂದು ವರ್ಷದಿಂದ ತೊಡಗಿಸಿಕೊಂಡಿದೆ. ಅಸಹಾಯಕರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ ಸೇರಿ ವಿವಿಧ ಸಾಮಾಜಿಕ ಕಾರ್ಯಗಳನ್ನು 20ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಮಾಡಲಾಗಿದೆ. ಧಾರ್ಮಿಕ ಶ್ರದ್ಧೆಯನ್ನು ಅಧಃಪತನಕ್ಕೆ ತೆಗೆದುಕೊಂಡು ಹೋಗುವ ಕೆಲಸದ ಜತೆಗೆ ಹಿಂದು ವಿರೋಧಿ ದೋರಣೆಯಲ್ಲಿ ಸರ್ಕಾರಿ ಪ್ರಾಯೋಜಿತವಾಗಿ ಹಲವು ಕಾರ್ಯ ನಡೆಯುತ್ತಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ದುರಂತವಾಗಿದ್ದು, ಸಮಾಜ ಸಂಘಟಿತವಾಗಿರುವ ಸಂದೇಶ ನೀಡುವ ಕೆಲಸವಾಗಬೇಕಾಗಿದೆ. ಹಿಂದೂ ಸಮಾಜ ಕಲ್ಯಾಣ ಆಗಬೇಕು ಎಂಬ ನಿಟ್ಟಿನಲ್ಲಿ ಎರಡು ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನಗೊಳ್ಳಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಶ್ರೀನಿವಾಸನ ದರ್ಶನವನ್ನು ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಬೂತ್ ಮಟ್ಟದಲ್ಲಿ ಪ್ರತಿ ಮನೆಯನ್ನು ಸಂಪರ್ಕ ಮಾಡಿ ಆಮಂತ್ರಣ ನೀಡುವ ಕಾರ್ಯ ಭರದಿಂದ ನಡೆಯುತ್ತಿದೆ. ಕಡಬ, ಸುಳ್ಯ ಸೇರಿ ವಿವಿಧ ತಾಲೂಕುಗಳಲ್ಲಿಯೂ ಸಮಿತಿಯವರು ಆಮಂತ್ರಣ ನೀಡುವ ಕಾರ್ಯ ಮಾಡುತ್ತಿದ್ದಾರೆ.

Ad Widget

Ad Widget <> Ad Widget

ಸುಮಾರು 75ಸಾವಿರ ಮಂದಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆಯನ್ನು ಮಾಡಿದ್ದು, 25ಸಾವಿರ ಲಡ್ಡು ಪ್ರಸಾದಕ್ಕೆ ಸಿದ್ದತೆ ಮಾಡಲಾಗಿದೆ. ಡಿ.20ರ ಮೊದಲು ಗ್ರಾಮಗಳಿಂದ ಸೇವಾ ರಶೀದಿಗಳನ್ನು ತರಿಸಿಕೊಂಡು ಯಾವುದೇ ಕೊರತೆಯಿಲ್ಲದಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದರು.



Ad Widget

ಹೊರೆಕಾಣಿಕೆ ಸಮರ್ಪಣೆ:
ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಡಿ.27ರಂದು ಪುತ್ತೂರು ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರುಗದ್ದೆಗೆ ಹೊರಕಾಣಿಕೆ ಸಮರ್ಪಣೆಯ ಮೆರವಣಿಗೆ ನಡೆಯಲಿದೆ. ಪ್ರತಿ ಗ್ರಾಮದ ದೇವಸ್ಥಾನಗಳಲ್ಲಿ ಸಂಗ್ರಹ ಮಾಡಿ ಅಲ್ಲಿಂದ ವಾಹನದ ಮೂಲಕ ದರ್ಬೆಗೆ ತರುವ ಕಾರ್ಯ ನಡೆಯಲಿದೆ.

Ad Widget

Ad Widget

ಧರ್ಮ ಸಂಗಮ:
ಶ್ರೀನಿವಾಸ ದೇವರನ್ನು ಡಿ.28ರಂದು ಸಂಜೆ 4ಕ್ಕೆ ಬೊಳುವಾರಿನಲ್ಲಿ ಬರಮಾಡಿಕೊಳ್ಳಲಿದ್ದು, ಬೃಹತ್ ಶೋಭಾಯಾತ್ರೆಯ ಮೂಲಕ ದೇವರಮಾರು ಗದ್ದೆಗೆ ಕರೆದುಕೊಂಡು ಬರಲಿದ್ದಾರೆ. ಬಳಿಕ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಹಿಂದೂ ಸಮಾಜಕ್ಕೆ ಶಕ್ತಿಯನ್ನು ನೀಡುವ ಧರ್ಮ ಸಂಗಮ ಕಾರ್ಯಕ್ರಮ ಹಾಗೂ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ಗಂಟೆಯಿಂದ ದೇವದಾಸ್ ಕಾಪಿಕಾಡ್ ನೇತೃತ್ವದಲ್ಲಿ ತುಳು ಹಾಸ್ಯ ನಾಟಕ ನಡೆಯಲಿದೆ.

ಶ್ರೀನಿವಾಸ ಕಲ್ಯಾಣೋತ್ಸವ:
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಮತ್ತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯುತ್ತಿದೆ. ಡಿ.29ರಂದು ಬೆಳಗ್ಗೆ 5.30ರಿಂದ ಸುಪ್ರಭಾತ ಪೂಜಾ ಸೇವೆಯ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಿ, ಸಂಜೆ 6 ರಿಂದ ಸಮಸ್ತ ಹಿಂದು ಬಂಧುಗಳ ಸಮ್ಮುಖದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಮಧ್ಯಾಹ್ನ ಭಜನಾ ತಂಡಗಳಿಂದ ಭಜನೋತ್ಸವ, ಸಂಜೆ ಶ್ರೀ ಹರಿಗಾನಾಮೃತ ನಡೆಯಲಿದೆ.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಗೌರವಾಧ್ಯಕ್ಷ ಶಶಾಂಕ್ ಕೊಟೇಚಾ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಪ್ರಚಾರ ಸಮಿತಿಯ ಸಂಚಾಲಕ ನವೀನ್ ರೈ ಪಂಜಳ ಮತ್ತಿತರರು ಉಪಸ್ಥಿತರಿದ್ದರು.

Ad Widget
Click to comment

Leave a Reply

ರಾಜಕೀಯ

Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget <> Ad Widget

ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.



Ad Widget

ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ

Ad Widget

Ad Widget

2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.

ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.

274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ

ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.

‘ಗ್ರಾಮಕ್ಕೊಂದು ಮಾನದಂಡ ಸಲ್ಲ’

ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.

2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.

ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.

‘ರಾಜ್ಯ ಸರಕಾರ ರೈತ ವಿರೋಧಿ’

ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.

Ad Widget

Ad Widget <> Ad Widget

ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.



Ad Widget

ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.

Ad Widget

Ad Widget

2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.

ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading