ನಿಧನ ವಾರ್ತೆ
ಕಡಬ : ಮುಖ್ಯೋಪಾಧ್ಯಾಯ, ಜೆಸಿ ವಲಯ ತರಬೇತುದಾರ , ಖ್ಯಾತ ನಿರೂಪಕ ಪ್ರದೀಪ್ ಬಾಕಿಲ ಇನ್ನಿಲ್ಲ
ಪುತ್ತೂರು: ಗೋಳಿತೊಟ್ಟು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ , ಜೆಸಿ ವಲಯ ತರಬೇತುದಾರ ,
ಖ್ಯಾತ ನಿರೂಪಕ ಕಡಬ ತಾಲೂಕಿನ ಆಲಂಕಾರು ಸಮೀಪದ ಪ್ರದೀಪ್ ಬಾಕೀಲ (41 ವ.) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಜೆಸಿಐ ಪೂರ್ವ ವಲಯ ಉಪಾಧ್ಯಕ್ಷರಾಗಿ ಸತತ 25 ಗಂಟೆ ತರಬೇತಿ ನೀಡಿ ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿಗೆ ಭಾಗಿಯಾಗಿದ್ದರು.
ಡಿ.4 ರಂದು ಶಾಂತಿನಗರ ಶಾಲೆಯಲ್ಲಿ ಸ್ಕೂಲ್ ಡೇ ಕಾರ್ಯಕ್ರಮವಿತ್ತು. ಕಾರ್ಯಕ್ರಮ ಮುಗಿದ ನಂತರ ಮನೆಗೆ ಬಂದು ಅಂಗಳದಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗುತ್ತಿದೆ. ಡಿ.5 ರಂದು ಪ್ರದೀಪ್ ಬಾಕಿಲ ಮನೆಯ ಅಂಗಳದಲ್ಲಿ ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ.
ಮೃತರು ಇತ್ತೀಚೆಗಷ್ಟೇ ಶ್ರೀರಾಮಕುಂಜೇಶ್ವರ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಶಿಕ್ಷಕಿ ಹೇಮಲತಾ ಬಾಕಿಲ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಅಪಾರ ಆಪ್ತ ವಲಯವನ್ನು ಹೊಂದಿರುವ ಪ್ರದೀಪ್ ಬಾಕಿಲ ಅವರ ನಿಧನ ಸುದ್ದಿ ಹೊರಬೀಳುತ್ತಿದ್ದಂತೆ ಅಂತಿಮ ದರ್ಶನಕ್ಕೆ ಮನೆಗೆ ಜನತೆ ಬರುತ್ತಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ರಾಜಕೀಯ19 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಪರಾಧ24 hours agoMadikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
-
ಉಡುಪಿ24 hours agoUdupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್24 hours agoPuttur-ಪುತ್ತೂರಿನ ವಿಜ್ಞಾನಿಗಳಿಂದ ದೇಶದಲ್ಲೇ ಮೊದಲ ಪ್ರಯೋಗ: ಶೇ.30ರಷ್ಟು ಗೇರು ಇಳುವರಿ ಹೆಚ್ಚಿಸುವ ‘ಗೇರು ಸ್ಪೆಷಲ್’ ಆವಿಷ್ಕಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
















