Connect with us

ಮಂಗಳೂರು

Zilla Conference-ಡಿ.5: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮಂಗಳೂರು, ಡಿ.3: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ) 5 ನೇ జిಲ್ಲಾ ಸಮ್ಮೇಳನ ಡಿ.5 ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸುದ್ದಿ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ)ದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಂಗಳವಾರ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬೆಳಗ್ಗೆ 9ರಿಂದ ಸಂಜೆ 5ಗಂಟೆ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ 5ನೇ ಸಮ್ಮೇಳನ ದಿ.ಮನೋಹರ ಪ್ರಸಾದ್ ವೇದಿಕೆ, ದಿ. ಭುವನೇಂದ್ರ ಪುದುವೆಟ್ಟು ಸಭಾಂಗಣದಲ್ಲಿ ನಡೆಯಲಿದೆ. ಪೂರ್ವಾಹ್ನ 10 ಗಂಟೆಗೆ ಸಮ್ಮೇಳನ ಉದ್ಘಾಟನೆಯನ್ನು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನೆರವೇರಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶಿವಸುಬ್ರಮಣ್ಯ ಕೆ. ಭಾಗವಹಿಸಲಿದ್ದಾರೆ. ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪತ್ರಕರ್ತರ ಕಲ್ಯಾಣ ನಿಧಿಗೆ ಚಾಲನೆ ನೀಡಲಿದ್ದಾರೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಆಶಯ ನುಡಿಗಳನ್ನಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಪತ್ರಕರ್ತ ದಿ. ವೀರೇಶ್ ಸ್ಮರಣಾರ್ಥ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ನೆರವೇರಿಸಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಪ್ರಾಯೋಜಕರಿಗೆ ಸನ್ಮಾನ ಮಾಡಲಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರವನ್ನು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಅನಾವರಣಗೊಳಿಸಲಿರುವರು. ಕುತ್ಲೂರು ಶಾಲಾ ವಿದ್ಯಾರ್ಥಿ ಬ್ಯಾಂಡ್ ಸೆಟ್ ಗ್ರೂಪ್‌ಗೆ ಸಮವಸ್ತ್ರ ವಿತರಣೆಯನ್ನು ಬೆಳ್ತಂಗಡಿ ವಿಧಾನ ಸಭಾಕ್ಷೇತ್ರದ ಶಾಸಕ ಹರೀಶ್ ಪೂಂಜ ನೆರವೇರಿಸಲಿರುವರು.
ಎಂ ಆರ್ ಪಿ ಎಲ್ ನ ಗ್ರೂಪ್‌ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಹಸಿರೇ ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Ad Widget

Ad Widget

ಹರಿಹರ ಸರಕಾರಿ ಶಾಲೆಗೆ ಎಂ.ಸಿ.ಎಫ್ ನ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಸಮವಸ್ತ್ರ ವಿತರಣೆ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ)ದ ಅಧ್ಯಕ್ಷ. ಶಿವಾನಂದ ತಗಡೂರು ಸಾಧಕರನ್ನು ಸನ್ಮಾನಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿ’ಸೋಜ, ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಮಾಜಿ ಸಚಿವ ಬಿ. ರಮಾನಾಥ್ ರೈ, ಕೃಷ್ಣ ಜೆ. ಪಾಲೆಮಾರ್,ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ ಘಟಕದ ಸಭಾಪತಿ ಸಿ.ಎ.ಶಾಂತಾರಾಮ ಶೆಟ್ಟಿ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ರೋಹನ್ ಮೊಂತೆರೊ (ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರು, ರೋಹನ್ ಕಾರ್ಪೊರೇಶನ್) ಕೆ.ಪಿ. ಸುಚರಿತ ಶೆಟ್ಟಿ (ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ) ಸಾಂಬಾಶಿವ ರಾವ್ (ಆಡಳಿತ ನಿರ್ದೇಶಕರು, ಶ್ರೀ ಅನಘಾ ರಿಫೈನರಿಸ್) ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ‘ಮಾಧ್ಯಮ ಹಾಗೂ ಯುವಜನತೆ’ ಗೋಷ್ಠಿ, ಅನ್ನಪೂರ್ಣೇಶ್ವರಿ ಅಂಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಸಂಸ್ಮರಣೆ, ತಾಲೂಕು ಪತ್ರಕರ್ತರ ಸಂಘಗಳ ಅಧ್ಯಕ್ಷರೊಂದಿಗೆ ಸಂವಾದ, ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 9ಕ್ಕೆ ಸತೀಶ್ ಇರಾ, ರಿಷಿಕಾ ಕುಂದೇಶ್ವರ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯ ಕ್ರಮ ನಡೆಸಲಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಸಮಾರೋಪ ಭಾಷಣ ಮಾಡಲಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಮಾಣ ಪತ್ರ ವಿತರಿಸಲಿದ್ದಾರೆ.

ಎಂ.ಆರ್.ಪಿ.ಎಲ್ ನ ಚೀಫ್ ಜನರಲ್ ಮ್ಯಾನೇಜರ್ ರುಡಾಲ್ಫ್ ನೊರೊನ್ನಾ ಪತ್ರಿಕೋದ್ಯಮ ಉಪನ್ಯಾಸಕರನ್ನು ಗೌರವಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ
ರಾಜೇಶ್ ನಾಯ್ಕ್ ಯು, ಉಮಾನಾಥ ಎ. ಕೋಟ್ಯಾನ್ , ಭಾಗೀರಥಿ ಮುರುಳ್ಯ, ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ , ದ.ಕ ಎಸ್.ಪಿ
ಯತೀಶ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ.,
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್., ಮಂಗಳಾ ಹಾಸ್ಪಿಟಲ್ ಆಡಳಿತ ನಿರ್ದೇಶಕ ಡಾ. ಗಣಪತಿ ಭಟ್,ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್, ಗೋಪಾಲಕೃಷ್ಣ ಭಟ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ ಕೊಟ್ಟಾರಿ, ಬ್ಯಾಂಕ್ ಆಫ್ ಬರೋಡ ಜನರಲ್ ಮ್ಯಾನೇಜರ್ ರಾಜೇಶ್ ಖನ್ನಾ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಉದ್ಯಮಿ ರಮೇಶ್ ನಾಯಕ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಗಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರೈ ಕಟ್ಟ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಉಪಸ್ಥಿತರಿರಲಿದ್ದಾರೆ.

Ad Widget
Click to comment

Leave a Reply

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ಅಪರಾಧ

Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

Ad Widget

Ad Widget <> Ad Widget

ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Ad Widget

Ad Widget

ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ಹಾಗೂ ಹೇಗೆ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಘಟನೆಯ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದರೆ ತಡೆಯಲು ಸಾಧ್ಯವಾಗುತ್ತಿತ್ತು. ಇದೀಗ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು. ಯುವತಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ

Published

on

Ad Widget

Ad Widget

Ad Widget

Ad Widget

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget <> Ad Widget

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಹೊಣೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು. ಎಫ್‌ಐಆರ್ ದಾಖಲಾದ ಸಂದರ್ಭದಲ್ಲಿ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಬಂಧನ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ
ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಫಾದರ್ ಸಿಪ್ರಿಯನ್ ಪಿಂಟೊ ವಿರುದ್ಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.

Ad Widget

Ad Widget

ಈ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪೆರ್ಮನ್ನೂರು ಚರ್ಚ್‌ನ 13 ವರ್ಷದ ಬಾಲಕನ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದು, ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!