ಅಪರಾಧ
Puttur-ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಆರೋಪಿ ಬಂಧನ
ಶಾಂತಿಗೋಡು ಗ್ರಾಮದ ಯುವಕನೊಬ್ಬ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಜಾತಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಾಂತಿಗೋಡು ಗ್ರಾಮದ ರೋಶನ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ.
ಪುತ್ತೂರು: ಶಾಂತಿಗೋಡು ಗ್ರಾಮದ ಯುವಕನೊಬ್ಬ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಜಾತಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಶಾಂತಿಗೋಡು ಗ್ರಾಮದ ರೋಶನ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ.
ತನಗೆ ಲೈಂಗಿಕ ದೌರ್ಜನ್ಯವೆಸಗಿ ಜಾತಿನಿಂದನೆ ಮಾಡಿದ್ದಾನೆಂದು ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿ ರೋಶನ್ ವಿರುದ್ಧ ಪೋಕ್ಸೋ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.
ಡಿ.3ರಂದು ರಾತ್ರಿ ಆರೋಪಿ ರೋಶನ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿದ್ದಾರೆ. ಆರೋಪಿ ರೋಶನ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪರಾಧ
Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

















