ರಾಜಕೀಯ
Puttur-ಪುತ್ತೂರು : ಶಾಸಕರಿಂದ ಪುತ್ತೂರಿಗೆ ಮತ್ತೊಂದು ಕೊಡುಗೆ; ಮುಂಡೂರಿನಲ್ಲಿ ಆರ್ಟಿಒ ಟ್ರ್ಯಾಕ್ ಮಂಜೂರಿಗೆ ಸರಕಾರಕ್ಕೆ ಮನವಿ
ಪುತ್ತೂರಿಗೆ ಆರ್ ಟಿ ಒ ಟ್ರ್ಯಾಕ್ ಮಂಜೂರುಗೊಳಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಸಲ್ಲಿಸಿದರು. ಸಾರಿಗೆ ಇಲಾಖೆಯ ಮುಖ್ಯ ಕಾರ್ಯದರ್ಶಿ ಎನ್ ವಿ ಪ್ರಸಾದ್ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಕ್ಯಾಬಿನೆಟ್ ನಲ್ಲಿ ಇದು ಮಂಜೂರುಗೊಳ್ಳಬೇಕಿದೆ.
ಪುತ್ತೂರು: ಪುತ್ತೂರಿಗೆ ಆರ್ ಟಿ ಒ ಟ್ರ್ಯಾಕ್ ಮಂಜೂರುಗೊಳಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಸಲ್ಲಿಸಿದರು.
ಪುತ್ತೂರು ಹೋಬಳಿಯ ಮುಂಡೂರು ಗ್ರಾಮದಲ್ಲಿ ಸರ್ವೆ ನಂ 130/10 ಹಾಗೂ 142/1 ರಲ್ಲಿ ಒಟ್ಟು 5.40 ಎಕರೆ ಜಮೀನನ್ನು ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ಚಾಲನ ತರಬೇತಿ ಕೇಂದ್ರ ಸ್ಥಾಪನೆಗೆ ಕಾಯ್ದಿರಿಸಿ ಸಾರಿಗೆ ಇಲಾಖೆಗೆ ಮಂಜೂರು ಮಾಡಿ ಆದೇಶಿಸಿರುವುದರಿಂದ, ಸದರಿ ಸ್ಥಳದಲ್ಲಿ ಟ್ರ್ಯಾಕ್ ಮತ್ತು ಚಾಲನಾ ತರಬೇತಿ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡುವಂತೆ ಶಾಸಕರು ಮನವಿಯಲ್ಲಿ ವಿನಂತಿಸಿದ್ದಾರೆ.
ಸಾರಿಗೆ ಇಲಾಖೆಯ ಮುಖ್ಯ ಕಾರ್ಯದರ್ಶಿ ಎನ್ ವಿ ಪ್ರಸಾದ್ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಕ್ಯಾಬಿನೆಟ್ ನಲ್ಲಿ ಇದು ಮಂಜೂರುಗೊಳ್ಳಬೇಕಿದೆ.
ಆರ್ಟಿಒ ಟ್ರ್ಯಾಕ್ ಉಡುಪಿಗೆ ಮಂಜೂರಾಗಿದ್ದು ಅಲ್ಲಿ ಭೂಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿಲ್ಲ ಅದಕ್ಕೆ ಬದಲಾಗಿ ಹೊನ್ನಾವರವನ್ನು ಸೇರ್ಪಡೆಗೊಳಿಸಲು ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಕೈಬಿಟ್ಟು 2024-25 ಸಾಲಿನ ಅನುಮೋದಿತ ಕ್ರಿಯಾ ಯೋಜನೆಯ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥವನ್ನು ನಿರ್ಮಿಸುವ ಯೋಜನೆಯಲ್ಲಿ ಉಡುಪಿಗೆ ಬದಲಾಗಿ ಪುತ್ತೂರು ಅನ್ನು ಸೇರ್ಪಡೆಗೊಳಿಸಲು ಶಾಸಕರು ವಿನಂತಿಸಿದ್ದಾರೆ.
ಮುಂಡೂರಿನಲ್ಲಿ ಆರ್ಟಿಒ ಟ್ರ್ಯಾಕ್ ನಿರ್ಮಾಣಕ್ಕೆಂದು ಜಾಗ ಕಾಯ್ದಿರಿಸಲಾಗಿದೆ. ಟ್ರ್ಯಾಕ್ ಉಡುಪಿಗೆ ಮಂಜೂರಾಗಿದ್ದು ಅಲ್ಲಿ ನಿವೇಶನವಿಲ್ಲದ ಕಾರಣ ಅದನ್ನು ಹೊನ್ನಾವರಕ್ಕೆ ಶಿಫ್ಟ್ ಮಾಡಿದ್ದರು. ಅಲ್ಲಿಗೆ ಬದಲಾಗಿ ಅದನ್ನು ಪುತ್ತೂರಿಗೆ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದ್ದೇನೆ. ಪುತ್ತೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ನಿರ್ಮಾಣವಾಗಬೇಕೆಂಬುದು ನನ್ನ ಕನಸಾಗಿತ್ತು ಅದನ್ನು ನನಸು ಮಾಡುವ ನಿಟ್ಟಿನಲ್ಲಿ ಈಗಾಗಲೇ ಎರಡು ಹೆಜ್ಜೆ ಮುಂದಿಟ್ಟಿದ್ದೇನೆ, ಈ ಯೋಜನೆಯು ಯಶಸ್ವಿಯಾಗಲಿದೆ.
ಸರಕಾರದ ಸಚಿವರು ಹಾಗೂ ಅಧಿಕಾರಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಹೊಸ ಹೊಸ ಯೋಜನೆಗಳು, ವ್ಯವಸ್ಥೆಗಳು ಇಲ್ಲಿಯೇ ನಿರ್ಮಾಣವಾದಲ್ಲಿ ಪುತ್ತೂರು ಅಭಿವೃದ್ದಿಯಾಗುವುದರ ಜೊತೆ ಇಲ್ಲಿ ಉದ್ಯೋಗವೂ ಸೃಷ್ಟಿಯಾಗಲಿದೆ. ಪುತ್ತೂರು ಅಭಿವೃದ್ದಿಯಾಗಬೇಕೆಂಬುದೇ ನನ್ನ ಕನಸು ಅದು ನನಸಾಗಗುವ ಪೂರ್ಣ ಭರವಸೆ ಇದೆ.-ಅಶೋಕ್ ರೈ ಶಾಸಕರು , ಪುತ್ತೂರು ವಿಧಾನಸಭಾ ಕ್ಷೇತ್ರ
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
ರಾಜಕೀಯ
Puttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.
ಪುತ್ತೂರಿನ ಬಂಟರ ಭವನದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರ ವಿವಾಹ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇದಲ್ಲದೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಬಿಜೆಪಿ ಶಾಸಕರು ಕೂಡ ಈ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೂಲತಃ ಕಡಬ ತಾಲೂಕಿನ ಸವಣೂರು ಸಮೀಪದ ಕೆಡೆಂಜಿ ಬಳಿಯ ಅರಲ್ತೆಡಿ ನಿವಾಸಿಯಾಗಿರುವ ಪ್ರಶಾಂತ್ ಅವರು ಪ್ರಸ್ತುತ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಾಯಕರ ಈ ಭೇಟಿ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆಯುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪುತ್ತೂರಿನ ವಿವಾಹ ಸಮಾರಂಭಕ್ಕೆ ಆಗಮಿಸಿ, ಕಾರ್ಯಕ್ರಮ ಮುಗಿದ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಪುತ್ತೂರು ಬಿಜೆಪಿಯ ಪುನಶ್ಚೇತನಕ್ಕೆ ಸಿಗಲಿದೆಯೇ ಹೊಸ ದಿಕ್ಸೂಚಿ?
ಇನ್ನೊಂದೆಡೆ, ಕಳೆದ ಮೂರು ವರ್ಷಗಳಿಂದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ರಾಜಕೀಯ ಸಂಘರ್ಷಗಳಿಂದಾಗಿ ಸಂಘಟನಾತ್ಮಕವಾಗಿ ಸವಾಲುಗಳನ್ನು ಎದುರಿಸುತ್ತಿರುವ ಪುತ್ತೂರು ಬಿಜೆಪಿಗೆ ಈ ನಾಯಕರ ಭೇಟಿ ಹೊಸ ಚೈತನ್ಯ ನೀಡುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ನಾಳಿನ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ. ಸ್ಥಳೀಯ ಮಟ್ಟದಲ್ಲಿ ಮುಖಂಡರ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ನಾಯಕರು ಮಧ್ಯಪ್ರವೇಶಿಸಬಹುದೇ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ನಾಯಕರು ಖಾಸಗಿ ಕಾರ್ಯಕ್ರಮಕ್ಕೆ ಮಾತ್ರ ಆಗಮಿಸುತ್ತಿದ್ದರೂ, ಪುತ್ತೂರು ಬಿಜೆಪಿಯ ಇಂದಿನ ಸ್ಥಿತಿಗತಿ ಮತ್ತು ಸಂಘಟನೆಯ ಭವಿಷ್ಯದ ಕುರಿತು ಯಾವುದೇ ಅನೌಪಚಾರಿಕ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ, ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರ ಈ ಭೇಟಿಯು ಕೇವಲ ವಿವಾಹ ಸಮಾರಂಭಕ್ಕೆ ಸೀಮಿತವಾಗುತ್ತದೆಯೇ ಅಥವಾ ಅಥವಾ ಪುತ್ತೂರಿನ ಸ್ಥಳೀಯ ರಾಜಕೀಯಕ್ಕೆ ಯಾವುದಾದರೂ ಹೊಸ ಸಂದೇಶ ನೀಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಅಂತರ ರಾಜ್ಯ
Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಬಳಿಕ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಆತಂಕ ವ್ಯಕ್ತಪಡಿಸಿದ್ದರು.
ರಾಜ್ಯದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿದ್ದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ ಎಂದು ಅವರು ಆರೋಪಿಸಿದ್ದರು. ಈ ವ್ಯತ್ಯಾಸಗಳ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದೂ ತಿಳಿಸಿದ್ದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ, ಚುನಾವಣಾ ಇಲಾಖೆಯು ಮತದಾರರ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ. ಹೀಗಾಗಿ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಅಧಿಕೃತ ವಿಶ್ಲೇಷಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರ ದತ್ತಾಂಶದಲ್ಲಿ ಹೆಸರು, ತಂದೆ ಅಥವಾ ಸಂಗಾತಿಯ ಹೆಸರು, ವಯಸ್ಸು, ಮನೆ ಸಂಖ್ಯೆ ಹಾಗೂ ಲಿಂಗದಂತಹ ವಿವರಗಳು ಮಾತ್ರ ದಾಖಲಾಗಿರುತ್ತವೆ. ಧರ್ಮ ಮತ್ತು ಜಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗದ ಡೇಟಾಬೇಸ್ನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಅವರು ವಿವರಿಸಿದರು.
ಮತದಾರರ ಪಟ್ಟಿಗಳು ಸಾರ್ವಜನಿಕ ದಾಖಲೆಗಳಾಗಿರುವುದರಿಂದ ಮಾಧ್ಯಮ ಸಂಸ್ಥೆಗಳು ಹಾಗೂ ಸ್ವತಂತ್ರ ವಿಶ್ಲೇಷಕರು ಮತದಾರರ ಹೆಸರುಗಳು ಮತ್ತು ಲಭ್ಯವಿರುವ ಇತರ ಮಾಹಿತಿಗಳ ಆಧಾರದಲ್ಲಿ ತಮ್ಮದೇ ಆದ ವಿಶ್ಲೇಷಣೆ ನಡೆಸಬಹುದು. ಆದರೆ ಅಂತಹ ವಿಶ್ಲೇಷಣೆಗಳನ್ನು ಚುನಾವಣಾ ಇಲಾಖೆಯ ಅಧಿಕೃತ ದತ್ತಾಂಶ ಅಥವಾ ಸಂಶೋಧನೆ ಎಂದು ಪರಿಗಣಿಸಬಾರದು ಎಂದು ರಿನ್ವಾ ಸ್ಪಷ್ಟಪಡಿಸಿದರು.
ಯುಪಿಯಲ್ಲಿ 13.58 ಕೋಟಿ ಮತದಾರರು
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 13.58 ಕೋಟಿ ಮತದಾರರಿದ್ದು, ಅವರಲ್ಲಿ 6.20 ಕೋಟಿ ಮಹಿಳಾ ಮತದಾರರು ಸೇರಿದ್ದಾರೆ ಎಂದು ನವದೀಪ್ ರಿನ್ವಾ ಮಾಹಿತಿ ನೀಡಿದರು.
ಏಪ್ರಿಲ್ನಲ್ಲಿ ಘೋಷಿಸಲಾಗಿದ್ದ ಎಸ್ಐಆರ್ ಪ್ರಕ್ರಿಯೆಯ ನಂತರ ನಡೆದ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್ಎಸ್ಆರ್) ಅವಧಿಯಲ್ಲಿ 18 ಲಕ್ಷಕ್ಕೂ ಅಧಿಕ ಮತದಾರರ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳು ಮತ್ತು ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















