ರಾಜಕೀಯ
Madal’s son-ಮಾಡಾಳ್ ಪುತ್ರನ 90 ಲಕ್ಷ ಲಂಚ ಸ್ವೀಕಾರಕ್ಕೆ ದಾಖಲೆ ದೃಡ : ಬಿಜೆಪಿ ಸರ್ಕಾರಕ್ಕೆ ಮುಜುಗರ ತಂದಿಟ್ಟ ಲಂಚಾವತಾರ – ಆರೋಪಪಟ್ಟಿ ಸಲ್ಲಿಕೆ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್ಡಿಎಲ್) ನಿಗಮದ ಅಧ್ಯಕ್ಷ ವಿರೂಪಾಕ್ಷಪ್ಪ ಮಾಡಾಳ್ ಪುತ್ರ ಎಂ.ವಿ. ಪ್ರಶಾಂತ್ಕುಮಾರ್ 90 ಲಕ್ಷ ರೂ. ಲಂಚ ಪಡೆಯಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್ಡಿಎಲ್) ನಿಗಮದ ಅಧ್ಯಕ್ಷ ವಿರೂಪಾಕ್ಷಪ್ಪ ಮಾಡಾಳ್ ಪುತ್ರ ಎಂ.ವಿ. ಪ್ರಶಾಂತ್ಕುಮಾರ್ 90 ಲಕ್ಷ ರೂ. ಲಂಚ ಪಡೆಯಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ ರಾಸಾಯನಿಕ ಪೂರೈಕೆದಾರರಿಂದ ಲಂಚ ಪಡೆಯಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಲಮಂಡಳಿ ಅಧಿಕಾರಿ ಪ್ರಶಾಂತ್ ಕುಮಾರ್ ಅಲಿಯಾಸ್ ಪ್ರಶಾಂತ್ ಮಾಡಾಳ್, ಮೆಸರ್ಸ್ ಕರ್ನಾಟಕ ಅರೋಮಾಸ್ ಕಂಪನಿಯ ಮೂವರು ಸಿಬ್ಬಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ತನಿಖಾಧಿಕಾರಿಗಳು, ಭ್ರಷ್ಟಾಚಾರ ನಡೆಸಲು ಒಳಸಂಚು ರೂಪಿಸಿ ಲಂಚ ಸ್ವೀಕರಿಸಲು ಯತ್ನಿಸಿದ್ದರ ಕುರಿತ ದಾಖಲೆಗಳನ್ನು ಲಗತ್ತಿಸಿದ್ದಾರೆ.
ಪ್ರಕರಣದ ಮೊದಲ ಆರೋಪಿ ಪ್ರಶಾಂತ್ ಮಾಡಾಳ್, ಅರೋಮಾಸ್ ಕಂಪನಿ ನೌಕರರಾದ ಆಲ್ಬರ್ಟ್ ನಿಕೋಲಸ್, ಸಿ.ಎಚ್. ಗಂಗಾಧರ, ಮ್ಯಾನೇಜರ್ ದೀಪಕ್ ಜಾಧವ್ ಅವರನ್ನೂ ಆರೋಪಿಗಳನ್ನಾಗಿ ಪರಿಗಣಿಸಲಾಗಿದೆ.
ಆರೋಪಿಗಳ ವಿರುದ್ಧ ಅಪರಾಧಿಕ ಒಳಸಂಚು (120 ಬಿ), ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಕಲಂ 7 ಎ ಹಾಗೂ 12ರ ಅನ್ವಯ ದೋಷಾರೋಪ ಹೊರಿಸಲಾಗಿದೆ.
ಪ್ರಶಾಂತ್ ಅವರಿಗೆ ಅರೋಮಾಸ್ ಕಂಪನಿ ನೌಕರರು ನೀಡಲು ತಂದಿದ್ದ 90 ಲಕ್ಷ ರೂ. ನಗದು, ರಾಸಾಯನಿಕ ಮಾದರಿಯನ್ನು ಸಾಕ್ಷ್ಯಗಳನ್ನಾಗಿ ಪರಿಗಣಿಸಲಾಗಿದೆ. ಜತೆಗೆ, ಕೆಎಸ್ಡಿಎಲ್ ಅಧಿಕಾರಿಗಳು ಹಾಗೂ ಆರೋಮಾಸ್ ಕಂಪನಿ ಸಹ ನೌಕರರೂ ಸೇರಿದಂತೆ ಹಲವರನ್ನು ಸಾಕ್ಷಿದಾರರನ್ನಾಗಿ ಮಾಡಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ವಾಟ್ಸಾಪ್ ಸಂದೇಶದಲ್ಲಿ ನಿಜಾಂಶ ಬಯಲು
ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ಆರೋಪಿ ಪ್ರಶಾಂತ್ ಕುಮಾರ್ ಕೆಎಸ್ಡಿಎಲ್ ಅಧ್ಯಕ್ಷರಾಗಿದ್ದ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರ ಹೆಸರು ಬಳಕೆ ಮಾಡಿಕೊಂಡು ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಪ್ರಭಾವ ಬೀರುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅರೋಮಾಸ್ ಕಂಪನಿ ಮಾಲೀಕರ ಜತೆ ಚಾಟ್ ಮಾಡಿರುವ ವಾಟ್ಸಾಪ್ ಸಂದೇಶಗಳನ್ನು ರಿಟ್ರೀವ್ ಮಾಡಲಾಗಿದೆ.
ಈ ಪೈಕಿ 2023ರ ಜ.18ರಂದು ಬೆಳಗ್ಗೆ 9.42ರ ಸುಮಾರಿಗೆ ಅರೋಮಾಸ್ ಕಂಪನಿ ಮಾಲೀಕ ವಿನಯ್ರಾಜ್, ಬೇರೆ ಕಂಪನಿಯ ಸುಗಂಧದ್ರವ್ಯ (ರಾಸಾಯನಿಕ) ಮಾದರಿ ತಿರಸ್ಕರಿಸುವಂತೆ ಪ್ರಶಾಂತ್ಕುಮಾರ್ ಅವರಿಗೆ ವಾಟ್ಸಾಪ್ ಸಂದೇಶ ಕಳಿಸಿದ್ದರು. ಅದೇ ದಿನ 10.2ರ ಸುಮಾರಿಗೆ ಪ್ರಶಾಂತ್ ಕುಮಾರ್, ಕೆಎಸ್ಡಿಎಲ್ ಎಂಡಿ ಡಾ.ಮಹೇಶ್ ಅವರಿಗೆ ವಾಟ್ಸಾಪ್ ಮೂಲಕ ‘ದಯವಿಟ್ಟು ಎಸ್ಪಿ ಕಂಪನಿಯ ಸುಗಂಧದ್ರವ್ಯ ತಿರಸ್ಕರಿಸಿ’ ಎಂದು ಸಂದೇಶ ಕಳಿಸಿದ್ದಾರೆ. ಈ ಸಂದೇಶಗಳು ಆರೋಪಿ ಪ್ರಶಾಂತ್ಕುಮಾರ್, ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಪ್ರಭಾವ ಬೀರುತ್ತಿದ್ದರು ಎಂಬುದನ್ನು ಪುಷ್ಠೀಕರಿಸುತ್ತವೆ ಎಂದು ತನಿಖಾ ಮೂಲಗಳು ತಿಳಿಸಿವೆ.
ಪೂರಕ ದಾಖಲೆ ಲಭ್ಯ:
ಆರೋಪಿ ಪ್ರಶಾಂತ್ ಕುಮಾರ್ ತನ್ನ ಕಚೇರಿ ಲೆಕ್ಕ ಸಹಾಯಕ ಸುರೇಂದ್ರ ಅವರ ಮುಖಾಂತರ ಲಂಚದ ಹಣ ಸ್ವೀಕರಿಸಲು ಪ್ರಯತ್ನಿಸಿದ್ದರು. ಜತೆಗೆ, ಕೆಎಸ್ಡಿಎಲ್ ವ್ಯವಹಾರವನ್ನು ಕ್ರೆಸೆಂಟ್ ರಸ್ತೆಯಲ್ಲಿನ ತನ್ನ ಅಣ್ಣನ ಕಚೇರಿಯಲ್ಲಿ ನಡೆಸುತ್ತಿದ್ದರು ಎಂಬುದಕ್ಕೆ ಪೂರಕ ದಾಖಲೆಗಳು ಸಿಕ್ಕಿವೆ ಎಂದು ಈ ಮೂಲಗಳು ಹೇಳಿವೆ.
ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್ ಮಾಡಿ ಬಂಧನ
ಕ್ರೆಸೆಂಟ್ ರಸ್ತೆಯಲ್ಲಿರುವ ತನ್ನ ಸಹೋದರನ ಕಚೇರಿಯಲ್ಲಿ 2023ರ ಮಾ. 2ರಂದು ಕೆಎಸ್ಡಿಎಲ್ ಟೆಂಡರ್ ಕೊಡಿಸುವ ಸಲುವಾಗಿ ಕಚ್ಚಾವಸ್ತು ಪೂರೈಕೆದಾರರಿಂದ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಪ್ರಶಾಂತ್ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿ ಬಂಧಿಸಿದ್ದರು. ಇದೇ ವೇಳೆ ಆರೋಮಾಸ್ ಕಂಪನಿಯ ನೌಕರರಾದ ಗಂಗಾಧರ್ ಹಾಗೂ ಆಲ್ಬರ್ಟ್ ನಿಕೋಲಸ್ ತಂದಿದ್ದ ಎರಡು ಪ್ರತ್ಯೇಕ ಬ್ಯಾಗ್ಗಳನ್ನು ಶೋಧಿಸಿದಾಗ 90 ಲಕ್ಷ ರೂ. ನಗದು ಪತ್ತೆಯಾಗಿತ್ತು. ಈ ಹಣದ ಮೂಲ ಕೆದಕಿದಾಗ ಟೆಂಡರ್ ಸಲುವಾಗಿ ಪ್ರಶಾಂತ್ಕುಮಾರ್ಗೆ ನೀಡಲು ತಂದಿದ್ದ ಲಂಚ ಎಂಬುದು ಬಯಲಾಗಿತ್ತು. ಹೀಗಾಗಿ, ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.
ವಿಳಂಬಗೊಂಡ ಪ್ರಾಸಿಕ್ಯೂಷನ್ಗೆ ಅನುಮತಿ
ಕೆಎಎಸ್ ಅಧಿಕಾರಿಯಾಗಿರುವ ಎಂ.ವಿ ಪ್ರಶಾಂತ್ಕುಮಾರ್ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸುವ ಮುನ್ನ ಸರಕಾರದಿಂದ ಪ್ರಾಸಿಕ್ಯೂಷನ್ ಅನುಮತಿ ಪಡೆಯಬೇಕಿದೆ. 40 ಲಕ್ಷ ರೂ. ಲಂಚ ಸ್ವೀಕಾರ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ನೀಡುವಂತೆ ಸರಕಾರಕ್ಕೆ ಮನವಿ ಮಾಡಲಾಗಿದ್ದು, ಇದುವರೆಗೂ ಅನುಮತಿ ದೊರೆತಿಲ್ಲ. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಅನುಮತಿ ಸಿಕ್ಕ ಬಳಿಕ ದೊಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಮೂಲಗಳು ಹೇಳಿವೆ.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಶಿಕ್ಷಣ14 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ7 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ12 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ13 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ರಾಜಕೀಯ7 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ12 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ13 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ12 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು















