Connect with us

ಬಿಗ್ ನ್ಯೂಸ್

Campco-ಕ್ಯಾಂಪ್ಕೊದ ನಿರಂತರ ಪ್ರಯತ್ನದ ಪ್ರತಿಫಲ; ಅಡಿಕೆಯ ಸಮಗ್ರ ಸಂಶೋಧನೆಗೆ ಕೇಂದ್ರ ಕೃಷಿ ಸಚಿವಾಲಯ ನಿರ್ಧಾರ.

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಅಡಿಕೆ ಕ್ಯಾನ್ಸರ್ ಕಾರಕವೆಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾದವನ್ನು ಪುರಾವೆ ಸಮೇತ ಸಂಸದರಿಗೆ ಮನವರಿಕೆ ಮಾಡಿಸಿದ ಕ್ಯಾಂಪ್ಕೊ ದ ಪ್ರಯತ್ನಕ್ಕೆ ಯಶಸ್ಸು ಲಭಿಸಿದೆ. ಸಂಸತ್ ಅಧಿವೇಶನದಲ್ಲಿ ಅಡಿಕೆ ಬೆಳೆಯುವ ಪ್ರದೇಶದ ಸಂಸದರ ಪ್ರಯತ್ನದಿಂದಾಗಿ , “ಅಡಿಕೆ ಮತ್ತು ಮಾನವರ ಆರೋಗ್ಯದ ಕುರಿತು ಪುರಾವೆ ಆಧಾರಿತ ಸಂಶೋಧನೆ” ನಡೆಸಲು ನಿರ್ಧರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಕ್ಯಾಂಪ್ಕೊ ಶ್ಲಾಘಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಇದಕ್ಕೆ ಶ್ರಮಿಸಿದ ಅಡಿಕೆ ಬೆಳೆಯುವ ಪ್ರದೇಶದ ಎಲ್ಲಾ ಸಂಸದರಿಗೆ ಹಾಗೂ ಭಾರತೀಯ ಜೀವನ ಕ್ರಮದಲ್ಲಿ ಅಡಿಕೆಯ ಪಾತ್ರವನ್ನು ಗುರುತಿಸಿರುವ ಕೇಂದ್ರ ಕೃಷಿ ಸಚಿವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿಯವರು, ಅಡಿಕೆ ಬೆಳೆಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ವಿಶ್ವ ಆರೋಗ್ಯ ಸಂಸ್ಥೆ ,ತಪ್ಪು ಗ್ರಹಿಕೆಯಿಂದ ಅಡಿಕೆಯನ್ನು ಕ್ಯಾನ್ಸರ್ ಕಾರಕವೆಂದು ವರ್ಗೀಕರಿಸಿರುವ ಕ್ರಮದ ವಿರುದ್ಧ ಕ್ಯಾಂಪ್ಕೊ ಮಾಧ್ಯಮಗಳು ಮತ್ತು ಜನಪ್ರತಿನಿಧಿಗಳ ಮೂಲಕ ನಿರಂತರ ಅಭಿಯಾನವನ್ನು ಮಾಡುತ್ತಲೇ ಬಂದಿದ್ದು, ಕೊನೆಗೂ ಸರಕಾರಕ್ಕೆ ಮನವರಿಕೆ ಮಾಡುವಲ್ಲಿ ಯಶಸ್ಸನ್ನು ಪಡೆದಿದೆ. ಎಐಐಎಮ್ ಎಸ್, ಸಿಎಸ್ ಐಆರ್-ಸಿಸಿಎಮ್ ಬಿ, ಐಐಎಸ್ ಸಿ ಮುಂತಾದ ದೇಶದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ಸಹಕಾರದ ಮೂಲಕ “ಅಡಿಕೆ ಮತ್ತು ಮಾನವನ ಆರೋಗ್ಯ ಬಗ್ಗೆ ಪುರಾವೆ ಆಧಾರಿತ ಸಂಶೋಧನೆ” ನಡೆಸಲು ಕೇಂದ್ರ ಕೃಷಿ ಸಚಿವಾಲಯ ಅನುಮೋದನೆ ನೀಡಿದೆ. ಇದರಿಂದ ಅಡಿಕೆಯ ಕುರಿತು ಇರುವ ತಪ್ಪು ಗ್ರಹಿಕೆ ಹೋಗಲಾಡಿಸಿ ,ಅದರ ಆರೋಗ್ಯಕರ ಉಪಯೋಗಗಳ ವೈಜ್ಞಾನಿಕ ದಾಖಲೆ ಸಿಗಲು ಸಾಧ್ಯವಾಗಲಿದೆ‌.



Ad Widget

ಕೇಂದ್ರ ಸರಕಾರದ ನಿರ್ಧಾರವು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಆದಷ್ಟು ಬೇಗ ಸಂಶೋಧನೆ ಪ್ರಾರಂಭಿಸುವಂತೆ ಅಡಿಕೆ ಬೆಳೆಯುವ ಪ್ರದೇಶಗಳ ಸಂಸದರು ಸರಕಾರವನ್ನು ಒತ್ತಾಯಿಸಲು ಕ್ಯಾಂಪ್ಕೊ ಎಲ್ಲಾ ಸಂಸದರಲ್ಲಿ ಮನವಿ ಮಾಡಿದೆ.

Ad Widget

Ad Widget

ಅಡಿಕೆಯನ್ನು ಗುಟ್ಕಾ ಮತ್ತು ತಂಬಾಕಿನ ಜೊತೆ ಮಿಶ್ರಣ ಮಾಡಿದ ಉತ್ಪನ್ನಗಳ ಸಂಶೋಧನಾ ವರದಿಗಳನ್ನು ಗಣನೆಗೆ ತೆಗೆದುಕೊಂಡು ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ಕ್ಯಾನ್ಸರ್ ಕಾರಕವೆಂದು ವರ್ಗೀಕರಣ ಮಾಡಿತ್ತು. ಆದರೆ ಕ್ಯಾಂಪ್ಕೊ ಮೊದಲಿನಿಂದಲೂ ಅಡಿಕೆಯ ಮೂಲ ರೂಪದಲ್ಲಿನ ಉಪಯೋಗವನ್ನು ಸಂಶೋಧಿಸಿ ವರ್ಗೀಕರಿಸಬೇಕೆಂದು ಪ್ರತಿಪಾದಿಸುತ್ತಲೇ ಬಂದಿದೆ. ಆ ರೀತಿಯಲ್ಲಿ ಮಾಡಿದ ಪ್ರತೀಯೊಂದು ಸಂಶೋಧನಾ ವರದಿಗಳು ಅಡಿಕೆ ಕ್ಯಾನ್ಸರ್ ರೋಗವನ್ನು ಪ್ರತಿಬಂಧಿಸುವ ಔಷಧೀಯ ಗುಣಗಳ ಬಗ್ಗೆ ಸಾಕ್ಷೀಕರಿಸಿದ ದಾಖಲೆಗಳಿವೆ.

ಕೇಂದ್ರ ಸರಕಾರದ ಅನುಮೋದನೆಯಿಂದ ಲಕ್ಷಾಂತರ ಅಡಿಕೆ ಬೆಳೆಗಾರರ ಹಿತ ಕಾಪಾಡಲು ಶ್ರಮಿಸುತ್ತಿರುವ ಕ್ಯಾಂಪ್ಕೊದ ಪ್ರಯತ್ನಕ್ಕೆ ನೈತಿಕ ಬಲ ಸಿಕ್ಕಿದೆ. ಈ ಯಶಸ್ಸಿಗೆ ಕಾರಣಕರ್ತರಾದ ಕೇಂದ್ರ ಕೃಷಿ ಸಚಿವರಿಗೆ ಹಾಗೂ ಎಲ್ಲಾ ಸಂಸದರಿಗೆ ಸಮಸ್ತ ಅಡಿಕೆ ಬೆಳೆಗಾರರ ಪರವಾಗಿ ಕ್ಯಾಂಪ್ಕೊ ಕೃತಜ್ಞತೆ ಸಲ್ಲಿಸುತ್ತದೆ. – ವ್ಯವಸ್ಥಾಪಕ ನಿರ್ದೇಶಕರು

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading